Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 22:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಿನ್ನ ನಿಲುವಂಗಿಯನ್ನು ಅವನಿಗೆ ತೊಡಿಸಿ, ನಿನ್ನ ನಡುಕಟ್ಟನ್ನು ಅವನಿಗೆ ಕಟ್ಟಿ, ನಿನ್ನ ಅಧಿಕಾರವನ್ನು ಅವನ ಕೈಗೆ ಕೊಡುವೆನು; ಅವನು ಯೆರೂಸಲೇಮಿನ ನಿವಾಸಿಗಳಿಗೂ, ಯೆಹೂದದ ಮನೆತನದವರಿಗೂ ತಂದೆಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನಿನ್ನ ವಸ್ತ್ರವನ್ನು ಅವನಿಗೆ ತೊಡಿಸುವೆನು. ನಿನ್ನ ನಡುಕಟ್ಟನ್ನು ಅವನಿಗೆ ಕಟ್ಟುವೆನು. ನಿನ್ನ ಅಧಿಕಾರವನ್ನು ಅವನಿಗೆ ಒಪ್ಪಿಸುವೆನು. ಅವನು ಜೆರುಸಲೇಮಿನ ನಿವಾಸಿಗಳಿಗೂ ಜುದೇಯದ ಮನೆತನಕ್ಕೂ ತಂದೆಯಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಿನ್ನ ನಿಲುವಂಗಿಯನ್ನು ಅವನಿಗೆ ತೊಡಿಸಿ ನಿನ್ನ ನಡುಕಟ್ಟನ್ನು ಅವನಿಗೆ ಕಟ್ಟಿ ನಿನ್ನ ಅಧಿಕಾರವನ್ನು ಅವನ ಕೈಗೆ ಕೊಡುವೆನು; ಅವನು ಯೆರೂಸಲೇವಿುನ ನಿವಾಸಿಗಳಿಗೂ ಯೆಹೂದದ ಮನೆತನದವರಿಗೂ ತಂದೆಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನಿನ್ನ ಬಟ್ಟೆಯನ್ನು ತೆಗೆದು ಆ ಸೇವಕನಿಗೆ ಕೊಡುವೆನು. ನಿನ್ನ ರಾಜದಂಡವನ್ನು ಅವನಿಗೆ ಕೊಡುವೆನು. ನಿನ್ನ ವಿಶೇಷ ಹುದ್ದೆಯನ್ನು ಅವನಿಗೆ ಕೊಡುವೆನು. ಆ ಸೇವಕನು ಯೆಹೂದದ ಜನರಿಗೂ ಜೆರುಸಲೇಮಿನ ಜನರಿಗೂ ತಂದೆಯಂತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಿನ್ನ ಅಂಗಿಯನ್ನು ಅವನಿಗೆ ತೊಡಿಸಿ, ನಿನ್ನ ನಡುಕಟ್ಟಿನಿಂದ ಅವನನ್ನು ಬಲಪಡಿಸಿ, ನಿನ್ನ ಅಧಿಕಾರವನ್ನು ಅವನಿಗೆ ಒಪ್ಪಿಸುವೆನು. ಅವನು ಯೆರೂಸಲೇಮಿನ ನಿವಾಸಿಗಳಿಗೂ, ಯೆಹೂದದ ಜನರಿಗೂ ತಂದೆಯಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 22:21
8 ತಿಳಿವುಗಳ ಹೋಲಿಕೆ  

“ದೇವರೇ ನನ್ನನ್ನು ಇಲ್ಲಿಗೆ ಕಳುಹಿಸಿದನಲ್ಲದೆ ನೀವು ಕಳುಹಿಸಲಿಲ್ಲ. ನನ್ನ ತಂದೆಯು ನನ್ನನ್ನು ಫರೋಹನ ಮಂತ್ರಿಯನ್ನಾಗಿಯೂ, ಫರೋಹನ ಅರಮನೆಯಲ್ಲಿ ಅಧಿಪತಿಯನ್ನಾಗಿಯೂ, ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿಯೂ ಮಾಡಿದ್ದಾನೆ.


ಮೊರ್ದೆಕೈಯಾದರೋ ನೀಲಿ ಮತ್ತು ಶುಭ್ರವರ್ಣಗಳುಳ್ಳ ರಾಜವಸ್ತ್ರಗಳನ್ನು ಧರಿಸಿಕೊಂಡು, ಬಂಗಾರದ ದೊಡ್ಡ ಕಿರೀಟವನ್ನು ಇಟ್ಟುಕೊಂಡು, ರಕ್ತವರ್ಣದ ನಾರಿನ ನಿಲುವಂಗಿಯನ್ನು ಹೊದ್ದುಕೊಂಡು ರಾಜಸನ್ನಿಧಿಯಿಂದ ಹೊರಟನು. ಶೂಷನ್ ಪಟ್ಟಣದಲ್ಲಿ ಸಂತೋಷದ ಆರ್ಭಟವು ಕೇಳಿಸಿತು.


ಆಗ ಅರಸನು ತಾನು ಹಾಮಾನನಿಗೆ ನೀಡಿದ್ದ ತನ್ನ ಮುದ್ರೆಯುಂಗುರವನ್ನು ಮೊರ್ದೆಕೈಗೆ ಕೊಟ್ಟನು; ಎಸ್ತೇರಳು ಹಾಮಾನನ ಮನೆಯ ಆಡಳಿತವನ್ನು ಅವನಿಗೆ ಒಪ್ಪಿಸಿದಳು.


ಇದಲ್ಲದೆ ಅವನು ತನ್ನ ಮೈಮೇಲಿದ್ದ ನಿಲುವಂಗಿಯನ್ನು ತನ್ನ ಯುದ್ಧವಸ್ತ್ರಗಳನ್ನು, ಕತ್ತಿ, ಬಿಲ್ಲು, ನಡುಕಟ್ಟುಗಳನ್ನೂ ದಾವೀದನಿಗೆ ಕೊಟ್ಟನು.


ದರಿದ್ರರಿಗೆ ತಂದೆಯಾಗಿ, ಪರಿಚಯವಿಲ್ಲದವನ ವ್ಯಾಜ್ಯವನ್ನೂ ವಿಚಾರಿಸುತ್ತಿದ್ದೆನು.


ಅವರು ಸೊಂಟಕ್ಕೆ ನಡುಕಟ್ಟನ್ನು ಕಟ್ಟಿ, ತಲೆಗೆ ರುಮಾಲನ್ನು ಧರಿಸಿ, ನೋಟಕ್ಕೆ ಸರದಾರರಂತಿದ್ದ ತಮ್ಮ ಸ್ವದೇಶವಾದ ಕಸ್ದೀಯಕ್ಕೆ ಸೇರಿದ ಬಾಬೆಲಿನ ಪುತ್ರರ ಹಾಗಿರುವ ಆಕಾರಗಳು ಗೋಡೆಯಲ್ಲಿ ಕಿರುಮಂಜಿಯಿಂದ ಚಿತ್ರಿಸಿರುವುದನ್ನು ನೋಡಿದ ಕೂಡಲೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು