ಯೆಶಾಯ 22:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಸೇನಾಧೀಶ್ವರನಾದ ಯೆಹೋವನು ಹೀಗೆ ನುಡಿಯುತ್ತಾನೆ. “ಗಟ್ಟಿಯಾದ ಸ್ಥಳದಲ್ಲಿ ಹೊಡೆದ ಮೊಳೆಯು ಆ ದಿನದಲ್ಲಿ ಕುಸಿದು ಹೋಗುವುದು; ಅದು ಬಡಿಯಲ್ಪಟ್ಟು ಬೀಳಲಾಗಿ ಅದರ ಮೇಲೆ ಇದ್ದ ಭಾರವೂ ತೆಗೆದು ಹಾಕಲ್ಪಡುವುದು ಯೆಹೋವನೇ ಇದನ್ನು ನುಡಿದಿದ್ದಾನೆ” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಇದರಿಂದ ಬಿಗಿಯಾಗಿ ಹೊಡೆಯಲಾಗಿದ್ದ ಆ ಮೊಳೆ ಸಡಿಲವಾಗಿ ಕುಸಿದುಬೀಳುವುದು. ಅದಕ್ಕೆ ತಗಲುಹಾಕಿದ್ದ ವಸ್ತುಗಳೆಲ್ಲ ಕಳಚಿಬೀಳುವುವು. ಇದು ಸರ್ವೇಶ್ವರನಾದ ನನ್ನ ನುಡಿ,” ಎಂದು ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಹೇಳಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಸೇನಾಧೀಶ್ವರನಾದ ಯೆಹೋವನು ಹೇಳುವದೇನಂದರೆ - ಗಟ್ಟಿಯಾದ ಸ್ಥಳದಲ್ಲಿ ಹೊಡೆದ ಮೊಳೆಯು ಆ ದಿನದಲ್ಲಿ ಕುಸಿದು ಹೋಗುವದು; ಅದು ಬಡಿಯಲ್ಪಟ್ಟು ಬೀಳಲಾಗಿ ಅದಕ್ಕೆ ತಗಲುಹಾಕಿದ ಭಾರವೂ ನಾಶವಾಗುವದು. ಇದೇ ಯೆಹೋವನಾದ ನನ್ನ ನುಡಿ ಎಂಬದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ ಹಲಗೆಗೆ ಬಲವಾಗಿ ಹೊಡೆಯಲ್ಪಟ್ಟ ಆ ಮೊಳೆಯು (ಶೆಬ್ನ) ಬಲಹೀನವಾಗಿ ತುಂಡಾಗುವದು. ಆ ಮೊಳೆಯು ನೆಲಕ್ಕೆ ಬಿದ್ದು ನಾಶವಾಗುವದು. ಆಗ ಆ ಮೊಳೆಗೆ ತೂಗುಹಾಕಿದ್ದೆಲ್ಲವೂ ಅದರೊಂದಿಗೆ ನೆಲಕ್ಕೆ ಬೀಳುವದು. ಆಗ ನಾನು ಈ ಸಂದೇಶದಲ್ಲಿ ಹೇಳಿದ್ದೆಲ್ಲವೂ ಸಂಭವಿಸುವದು. ಅವುಗಳು ನೆರವೇರುತ್ತವೆ ಯಾಕೆಂದರೆ ಅವುಗಳನ್ನು ಹೇಳಿದಾತನು ಯೆಹೋವನೇ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 “ಆ ದಿನದಲ್ಲಿ,” ಸೇನಾಧೀಶ್ವರ ಯೆಹೋವ ದೇವರು ಪ್ರಕಟಿಸುವುದು ಏನೆಂದರೆ, “ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ತೆಗೆದುಹಾಕಿ, ಕುಸಿದುಬೀಳುವುದು. ಮೊಳೆಯ ಮೇಲೆ ಇದ್ದ ಭಾರವೂ ತೆಗೆದುಹಾಕಲಾಗುವುದು,” ಇದು ಯೆಹೋವ ದೇವರ ನುಡಿ. ಅಧ್ಯಾಯವನ್ನು ನೋಡಿ |