ಯೆಶಾಯ 23:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆತನು, “ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು, ಅಲ್ಲಿಯೂ ನಿನಗೆ ವಿಶ್ರಾಂತಿ ಇರದು” ಎಂದು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ಹಿಂಸೆಗೆ ಈಡಾದ ಕನ್ಯೆಯಂತೆ ಇರುವ ಸಿದೋನ್ ನಗರವೇ, ಇನ್ನು ಮೇಲೆ ನಿನಗಿರದು ಸಂತೃಪ್ತಿ: ಸಮುದ್ರ ದಾಟಿ ಸೈಪ್ರಸ್ಸಿಗೆ ಹಾದುಹೋಗು, ಅಲ್ಲಿಯೂ ನಿನಗೆ ದೊರಕದು ವಿಶ್ರಾಂತಿ,” ಎಂದು ಹೇಳಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀವಿುಗೆ ಸಮುದ್ರದ ಮೇಲೆ ಹಾದುಹೋಗು, ಅಲ್ಲಿಯೂ ನಿನಗೆ ವಿಶ್ರಾಂತಿಯಿರದು ಎಂದು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೆಹೋವನು ಹೇಳುವುದೇನೆಂದರೆ, “ಚೀದೋನ್ ಕುಮಾರಿಯೇ, ನೀನು ನಾಶವಾಗುವೆ; ಎಂದಿಗೂ ನೀನು ಹರ್ಷಿಸುವದಿಲ್ಲ. ತೂರಿನ ಜನರು, ‘ನಮಗೆ ಸೈಪ್ರಸ್‌ನವರು ಸಹಾಯ ಮಾಡುತ್ತಾರೆ’ ಎಂದು ಹೇಳುತ್ತಾರೆ. ಆದರೆ ನೀನು ಸಮುದ್ರ ಮಾರ್ಗವಾಗಿ ಸೈಪ್ರಸ್‌ಗೆ ಹೋದರೆ ಅಲ್ಲಿ ನಿನಗೆ ವಿಶ್ರಮಿಸಲು ಸ್ಥಳ ದೊರಕುವದಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ಹಿಂಸೆಗೆ ಈಡಾದ ಕನ್ಯೆಯಂತಿರುವ ಸೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಸಂತೃಪ್ತಿ ಇಲ್ಲ. “ಎದ್ದು, ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು. ಅಲ್ಲಿಯೂ ನಿನಗೆ ವಿಶ್ರಾಂತಿ ಇರದು.” ಅಧ್ಯಾಯವನ್ನು ನೋಡಿ |