ಯೆಶಾಯ 23:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇಗೋ, ಕಸ್ದೀಯರ ದೇಶವು! ಈ ಜನಾಂಗವು ನಿರ್ನಾಮವಾಯಿತು. ಅಶ್ಶೂರ್ಯರು ಈ ದೇಶವನ್ನು ಕಾಡುಮೃಗಗಳಿಗೆ ಈಡುಮಾಡಿದರು. ಗೋಪುರಗಳನ್ನು ಕಟ್ಟಿಕೊಂಡು ಅದರ ಕೋಟೆಗಳನ್ನು ಕೆಡವಿ ಅದನ್ನು ನಾಶಪಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಬಾಬಿಲೋನಿನ ನಾಡನ್ನು ನೋಡು. ಅದರ ಜನಾಂಗ ನಿರ್ನಾಮವಾಯಿತು. ಅಸ್ಸೀರಿಯದವರು ಆ ನಾಡನ್ನು ಕಾಡುಮೃಗಗಳಿಗೆ ಈಡುಮಾಡಿದರು. ಅಲ್ಲಿ ಬುರುಜುಗಳನ್ನು ಕಟ್ಟಿಕೊಂಡರು. ಇದರ ಕೋಟೆಗಳನ್ನಾದರೋ ಕೆಡವಿ ನಾಶಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇಗೋ, ಕಸ್ದೀಯರ ದೇಶವು! ಈ ಜನಾಂಗವು ನಿರ್ನಾಮವಾಯಿತು; ಅಶ್ಶೂರ್ಯರು ಈ ದೇಶವನ್ನು ಕಾಡುಮೃಗಗಳಿಗೆ ಈಡುಮಾಡಿದರು; ಬುರುಜುಗಳನ್ನು ಕಟ್ಟಿಕೊಂಡು ಇದರ ಕೋಟೆಗಳನ್ನು ಕೆಡವಿ ಇದನ್ನು ನಾಶಪಡಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆಗ ತೂರಿನ ಜನರು ಹೀಗೆನ್ನುವರು: “ಬಾಬಿಲೋನಿನವರು ನಮಗೆ ಸಹಾಯಮಾಡುವರು.” ಆದರೆ ಕಸ್ದೀಯರ ದೇಶವನ್ನು ನೋಡಿ. ಬಾಬಿಲೋನ್ ಈಗ ದೇಶವಲ್ಲ. ಬಾಬಿಲೋನನ್ನು ಅಶ್ಶೂರವು ವಶಪಡಿಸಿಕೊಂಡು ಅದರ ಸುತ್ತಲೂ ಕಾವಲು ಬುರುಜುಗಳನ್ನು ಕಟ್ಟಿಸಿದೆ. ಅಲ್ಲಿದ್ದ ಸುಂದರ ಮನೆಗಳಿಂದ ಸೈನಿಕರು ಎಲ್ಲವನ್ನು ದೋಚಿರುತ್ತಾರೆ. ಅಶ್ಶೂರ ಬಾಬಿಲೋನನ್ನು ಕಾಡುಪ್ರಾಣಿಗಳ ವಾಸಸ್ಥಳವನ್ನಾಗಿ ಮಾಡಿದೆ. ಅವರು ಬಾಬಿಲೋನನ್ನು ಪಾಳುಬಿದ್ದ ಅವಶೇಷವನ್ನಾಗಿ ಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಕಸ್ದೀಯರ ದೇಶವು! ಅಸ್ಸೀರಿಯದವರು ಅದನ್ನು ಕಾಡುಮೃಗಗಳಿಗೆ ಈಡು ಮಾಡುವ ತನಕ ಈ ಜನರು ಇರಲಿಲ್ಲ. ಗೋಪುರಗಳನ್ನು ಕಟ್ಟಿಸಿಕೊಂಡು ಅವರು ಅದರ ಅರಮನೆಗಳನ್ನು ಕಟ್ಟಿಸಿಕೊಂಡು ಅದನ್ನು ನಾಶಮಾಡಿದ್ದಾರೆ. ಅಧ್ಯಾಯವನ್ನು ನೋಡಿ |