Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 23:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಎಪ್ಪತ್ತು ವರ್ಷಗಳ ಮೇಲೆ ಯೆಹೋವನು ತೂರ್ ಪಟ್ಟಣವನ್ನು ಪರಾಂಬರಿಸುವನು. ಅವಳು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕದಲ್ಲಿರುವ ಸಕಲ ಅರಸರೊಂದಿಗೆ ಸೇರಿ ವ್ಯಾಪಾರ ಮಾಡುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಎಪ್ಪತ್ತು ವರ್ಷಗಳಾದ ಮೇಲೆ ಸರ್ವೇಶ್ವರ ಟೈರಿಗೆ ಭೇಟಿನೀಡುವರು. ಆ ನಗರಿ ತನ್ನ ಕಸುಬಿಗೆ ಹಿಂದಿರುಗುವಳು. ಜಗದ ಎಲ್ಲ ರಾಷ್ಟ್ರಗಳೊಂದಿಗೆ ವ್ಯಾಪಾರ ಗೈಯುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಎಪ್ಪತ್ತು ವರುಷಗಳ ಮೇಲೆ ಯೆಹೋವನು ತೂರ್ ಎಂಬವಳಿಗೆ ನೇವಿುಸಲು ಅವಳು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಮಂಡಲದಲ್ಲಿ ಲೋಕದ ಸಕಲ ರಾಜ್ಯಗಳೊಂದಿಗೆ ಕಲೆಯುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಎಪ್ಪತ್ತು ವರ್ಷಗಳ ನಂತರ ಯೆಹೋವನು ತೂರಿನ ಕುರಿತು ಮತ್ತೆ ಆಲೋಚಿಸಿ ತೀರ್ಮಾನಿಸುವನು. ತೂರಿನಲ್ಲಿ ವ್ಯಾಪಾರವು ಮತ್ತೆ ಪ್ರಾರಂಭವಾಗುವದು. ಅದು ಲೋಕದ ಎಲ್ಲಾ ರಾಜ್ಯಗಳಿಗೆ ವೇಶ್ಯೆಯಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಎಪ್ಪತ್ತು ವರುಷಗಳಾದ ಮೇಲೆ ಯೆಹೋವ ದೇವರು ಟೈರನ್ನು ಪರಾಮರಿಸುವರು. ಅದು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕದವರಲ್ಲಿರುವ ಎಲ್ಲಾ ರಾಜ್ಯಗಳ ಸಂಗಡ ಭೂಮಿಯ ಮೇಲೆ ವ್ಯಾಪಾರ ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 23:17
22 ತಿಳಿವುಗಳ ಹೋಲಿಕೆ  

ಅತಿಸುಂದರಿಯೂ, ಮಂತ್ರತಂತ್ರ ನಿಪುಣಳೂ ಜನಾಂಗಗಳನ್ನು ತನ್ನ ವೇಶ್ಯಾವಾಟಿಕೆಯಿಂದ ಕುಲಗಳನ್ನು ತನ್ನ ಮಂತ್ರತಂತ್ರಗಳಿಂದ ಗುಲಾಮತನಕ್ಕೆ ತಂದವಳೂ ಆದ ವೇಶ್ಯೆಯು ಲೆಕ್ಕವಿಲ್ಲದ ವೇಶ್ಯಾವಾಟಿಕೆಯ ನಿಮಿತ್ತ ಇದೆಲ್ಲಾ ಆಗುವುದು.


ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.” ಎಂದು ಹೇಳಿ,


ನಿಮ್ಮ ಮೇಲ್ವಿಚಾರಣೆಯಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲವಂತದಿಂದಲ್ಲ ದೇವರ ಚಿತ್ತಾನುಸಾರ ಇಷ್ಟಪೂರ್ವಕವಾಗಿ, ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧ ಮನಸ್ಸಿನಿಂದಲೇ ಮೇಲ್ವಿಚಾರಣೆ ಮಾಡಿರಿ.


ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳವರಾಗಿರಬೇಕು. ಅವರು ಎರಡು ಮಾತಿನವರೂ, ಮದ್ಯಾಸಕ್ತರೂ, ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ,


ಅವನು ಕುಡಕನು, ಜಗಳವಾಡುವವನೂ ಆಗಿರದೆ, ಸಾತ್ವಿಕನೂ, ಹೊಡೆದಾಡದವನೂ ದ್ರವ್ಯಾಶೆಯಿಲ್ಲದವನೂ ಆಗಿರಬೇಕು.


“ಸಹೋದರರೇ, ನಾನು ಹೇಳುವುದನ್ನು ಕೇಳಿರಿ. ದೇವರು ಮೊದಲು ಅನ್ಯಜನರನ್ನು ಕೃಪಾಕಟಾಕ್ಷದಿಂದ ನೋಡಿ ತನ್ನ ಹೆಸರಿಗಾಗಿ ಅವರೊಳಗಿನಿಂದ ಒಬ್ಬ ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.


ಆ ಕರಾವಳಿಯು ಉಳಿದ ಯೆಹೂದ್ಯರ ಪಾಲಾಗುವುದು; ದನಕುರಿಗಳನ್ನು ಅಲ್ಲೇ ಮೇಯಿಸುವರು; ಸಂಜೆಗೆ ಅಷ್ಕೆಲೋನಿನ ಮನೆಗಳಲ್ಲಿ ಮಲಗಿಕೊಳ್ಳುವರು; ಅವರ ದೇವರಾದ ಯೆಹೋವನು ಅವರನ್ನು ಪರಾಂಬರಿಸಿ ಅವರ ದುರವಸ್ಥೆಯನ್ನು ತಪ್ಪಿಸುವನು.


ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.


ಅದರ ಎರಕದ ಬೊಂಬೆಗಳನ್ನೆಲ್ಲಾ ಪುಡಿಪುಡಿ ಮಾಡುವೆನು. ಅದರ ಸಮಸ್ತ ಸಂಪಾದನೆಯು ಸುಟ್ಟುಹೋಗುವುದು. ಅದರ ಸಕಲ ವಿಗ್ರಹಗಳನ್ನು ಹಾಳುಮಾಡುವೆನು. ಅದು ವೇಶ್ಯಾವಾಟಿಕೆಯಿಂದ ಸಂಪಾದನೆಯಾಗಿ ಕೂಡಿಸಿಟ್ಟುಕೊಂಡವುಗಳು ಹಾಗೂ ವೇಶ್ಯಾವಾಟಿಕೆಯ ಸಂಪಾದನೆಯಾಗಿಯೇ ಪರರ ಪಾಲಾಗುವವು.


“‘ಇಗೋ, ನೀನು ದೋಚಿಕೊಂಡ ಲಾಭವನ್ನೂ, ನಿನ್ನಲ್ಲಿ ಸುರಿದ ರಕ್ತವನ್ನೂ ನಾನು ನೋಡಿ ಕೈ ಎತ್ತಿದ್ದೇನೆ.


ಒಂದೊಂದು ಬೀದಿಯ ಕೊನೆಯಲ್ಲಿಯೂ ನೀನು ಗದ್ದುಗೆಯನ್ನು ಕಟ್ಟಿ, ಎಲ್ಲಾ ಚೌಕಗಳಲ್ಲಿ ಜಗಲಿಯನ್ನು ಸ್ಥಾಪಿಸಿಕೊಂಡಿರುವೆ; ದೊರೆತದ್ದನ್ನು ಕಡಿಮೆಯೆಂದು ತಿರಸ್ಕರಿಸುವ ವ್ಯಭಿಚಾರಿಯಂತೆ ನೀನು ನಡೆಯುವವಳಲ್ಲ.


ನಿನ್ನ ನೆರೆಯವರೂ ಅತಿಕಾಮಿಗಳೂ ಆದ ಐಗುಪ್ತ್ಯರೊಂದಿಗೆ ಸಹ ನೀನು ಬೆರೆತು ಹೆಚ್ಚಾಗಿ ವ್ಯಭಿಚಾರಮಾಡಿ ನನ್ನನ್ನು ರೇಗಿಸಿರುವೆ.


ಯೆಹೋವನು ಇಂತೆನ್ನುತ್ತಾನೆ, “ಬಾಬೆಲ್ ರಾಜ್ಯವು ಎಪ್ಪತ್ತು ವರ್ಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಕಟಾಕ್ಷಿಸಿ, ಈ ಸ್ಥಳಕ್ಕೆ ತಿರುಗಿ ಬರಮಾಡುವೆನೆಂಬ ನನ್ನ ಶುಭವಾಕ್ಯವನ್ನು ನಿಮಗಾಗಿ ನೆರವೇರಿಸುವೆನು.


ಇಸ್ರಾಯೇಲರ ಪುರುಷ ಅಥವಾ ಸ್ತ್ರೀಯೂ ವ್ಯಭಿಚಾರದಿಂದ ಸಂಪಾದಿಸಿದ ಹಣವನ್ನು ಹರಕೆಯಾಗಿ ನಿಮ್ಮ ದೇವರಾದ ಯೆಹೋವನ ಆಲಯದೊಳಗೆ ತರಲೇಬಾರದು. ಈ ಎರಡೂ ಯೆಹೋವನಿಗೆ ಅಸಹ್ಯವಾದ ವಿಷಯ.


ಆ ದಿನದಲ್ಲಿ ತೂರ್ ಪಟ್ಟಣವು ಒಬ್ಬ ಅರಸನ ಆಡಳಿತದ ಎಪ್ಪತ್ತು ವರ್ಷಗಳ ತನಕ ಜ್ಞಾಪಕಕ್ಕೆ ಬಾರದೇ ಇರುವುದು; ಎಪ್ಪತ್ತು ವರ್ಷದ ಮೇಲೆ ವ್ಯಭಿಚಾರಿ ವಿಷಯವಾದ ಗೀತೆಯಂತೆ ಆಗುವುದು.


ಅದೇನೆಂದರೆ, “ಎಲ್ಲರೂ ಮರೆತುಹೋದ ವ್ಯಭಿಚಾರಿಯೇ, ಕಿನ್ನರಿಯನ್ನು ತೆಗೆದುಕೊಂಡು ಪಟ್ಟಣದಲ್ಲಿ ಅಲೆಯುತ್ತಾ, ಜನರು ನಿನ್ನನ್ನು ಜ್ಞಾಪಿಸಿಕೊಳ್ಳುವಂತೆ ಚೆನ್ನಾಗಿ ನುಡಿಸಿ, ಬಹಳ ಗೀತೆಗಳನ್ನು ಹಾಡು” ಎಂಬುದೇ.


ಒಂದೊಂದು ಬೀದಿಯ ಕೊನೆಯಲ್ಲಿಯೂ ನೀನು ಜಗಲಿಯನ್ನು ಕಟ್ಟಿಕೊಂಡು, ನಿನ್ನ ಸೌಂದರ್ಯವನ್ನು ನೀಚ ಕೆಲಸಕ್ಕೆ ಒಪ್ಪಿಸಿ, ಹಾದುಹೋಗುವವರೆಲ್ಲರನ್ನು ಸೇರಿಸಿ ವ್ಯಭಿಚಾರವನ್ನು ಹೆಚ್ಚಾಗಿ ನಡೆಸಿರುವೆ.


ಈ ದೇಶವೆಲ್ಲಾ ಹಾಳಾಗಿ ಬೆರಗಿಗೆ ಈಡಾಗುವುದು; ಮತ್ತು ಈ ಜನಾಂಗಗಳು ಎಪ್ಪತ್ತು ವರ್ಷ ಬಾಬೆಲಿನ ಅರಸನ ಅಡಿಯಾಳಾಗಿ ಬಿದ್ದಿರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು