Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 23:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇಕೆಂತಲೂ, ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವಮಾನಪಡಿಸಬೇಕೆಂತಲೂ ಸೇನಾಧೀಶ್ವರನಾದ ಯೆಹೋವನೇ ಹೀಗೆ ಸಂಕಲ್ಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇದು ಸೇನಾಧೀಶ್ವರ ಸರ್ವೇಶ್ವರ ಮಾಡಿದ ಸಂಕಲ್ಪವೇ ಸರಿ. ಗರ್ವಿಗಳ ಸಕಲ ದರ್ಪವನ್ನು ದಮನಮಾಡಲು, ವಿಶ್ವವಿಖ್ಯಾತರನ್ನು ಅವಮಾನಗೊಳಿಸಲು ಸೇನಾಧೀಶ್ವರ ಸರ್ವೇಶ್ವರ ಮಾಡಿದ ಯೋಜನೆಯಿದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಗರ್ವದ ಸಕಲ ವೈಭವವನ್ನು ಹೊಲಸುಮಾಡಬೇಕೆಂತಲೂ ಲೋಕಮಾನ್ಯರೆಲ್ಲರನ್ನು ಅವಮಾನ ಪಡಿಸಬೇಕೆಂತಲೂ ಸೇನಾಧೀಶ್ವರನಾದ ಯೆಹೋವನೇ ಹೀಗೆ ಸಂಕಲ್ಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಸರ್ವಶಕ್ತನಾದ ಯೆಹೋವನೇ. ಅದು ಪ್ರಾಮುಖ್ಯವಾಗದಂತೆ ಆತನೇ ತೀರ್ಮಾನಿಸಿದ್ದಾನೆ. ಆತನು ಗೌರವಿಸಲ್ಪಡುವ ಜನರನ್ನು ಅವಮಾನಪಡಿಸಬೇಕೆಂತಲೂ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇಕೆಂತಲೂ, ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವಮಾನಪಡಿಸಬೇಕೆಂತಲೂ ಸೇನಾಧೀಶ್ವರ ಯೆಹೋವ ದೇವರೇ ಹೀಗೆ ಸಂಕಲ್ಪಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 23:9
29 ತಿಳಿವುಗಳ ಹೋಲಿಕೆ  

ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, “ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ.


ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ, ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲಗಳಿಗಾಗಿ ಶಿಕ್ಷಿಸಿ, ಸೊಕ್ಕಿದವರ ಅಹಂಕಾರವನ್ನು ಅಡಗಿಸಿ, ಭಯಂಕರವಾದ ಅವರ ಹೆಮ್ಮೆಯನ್ನು ತಗ್ಗಿಸುವೆನು.


ಮನುಷ್ಯನ ಗರ್ವದೃಷ್ಟಿಯು ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ ಕೀರ್ತಿಸುತ್ತೇನೆ. ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.


ಇದಲ್ಲದೆ ತನ್ನ ಚಿತ್ತದ ಉದ್ದೇಶಕ್ಕನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವಾತನು ತನ್ನ ಸಂಕಲ್ಪದ ಪ್ರಕಾರ ಮೊದಲೇ ನೇಮಿಸಲ್ಪಟ್ಟವರಾದ ನಮ್ಮನ್ನು ಕ್ರಿಸ್ತನಲ್ಲಿ ತನ್ನ ಸ್ವಕೀಯ ಜನರನ್ನಾಗಿ ಅರಿಸಿಕೊಂಡನು.


ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇಮಿಸಿದ್ದನ್ನೇ ನಡಿಸಿದರು.


“ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.


‘ಯೆಹೋವನೇ, ನೀನು ಈ ಸ್ಥಳವನ್ನು ನಿರ್ಮೂಲಮಾಡಬೇಕೆಂದು ಉದ್ದೇಶಿಸಿ, ಇದು ಜನರಿಗೂ ಪಶುಗಳಿಗೂ ನೆಲೆಯಾಗದೆ ಸದಾ ಹಾಳಾಗಿಯೇ ಇರಲಿ ಎಂದು ನುಡಿದಿದ್ದೀಯಲ್ಲಾ’ ಎಂಬುದಾಗಿ ಅರಿಕೆಮಾಡಬೇಕು.


ಏಕೆಂದರೆ ಸೇನಾಧೀಶ್ವರನಾದ ಯೆಹೋವನು ಉದ್ದೇಶಿಸಿದ್ದಾನೆ, ಅದನ್ನು ಯಾರು ವ್ಯರ್ಥಪಡಿಸುವರು? ಆತನ ಕೈ ಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು?” ಎಂಬುದೇ.


ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವುದೇನೆಂದರೆ, “ನಾನು ಸಂಕಲ್ಪಿಸಿದ್ದೇ ನೆರವೇರುವುದು, ಉದ್ದೇಶಿಸಿದ್ದೇ ಖಂಡಿತವಾಗಿ ನಿಲ್ಲುವುದು.


ಆಹಾ, ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಂಬೆಗಳನ್ನು ಕತ್ತರಿಸುವನು. ಅವು ಧಡಮ್ಮನೆ ಬೀಳುವವು. ಉನ್ನತವಾದ ವೃಕ್ಷಗಳು ಕಡಿದು ಕೆಳಗೆ ಬೀಳುವವು. ಎತ್ತರವಾದ ಮರಗಳು ನೆಲದ ಪಾಲಾಗುವವು.


ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು. ಸುಳ್ಳು ಬೋಧನೆ ಮಾಡುವ ಪ್ರವಾದಿಯು ಬಾಲವಾಗಿರುವನು.


ಆದಕಾರಣ ನನ್ನ ಜನರು ಜ್ಞಾನಹೀನರಾಗಿ ಸೆರೆಗೆ ಹೋಗುವುದು ಖಂಡಿತ. ಘನವಂತರು ಹಸಿಯುವರು ಮತ್ತು ಜನಸಮೂಹವು ಬಾಯಾರಿಕೆಯಿಂದ ಒಣಗುವುದು.


ಮನುಷ್ಯರ ಗರ್ವವು ಕುಗ್ಗುವುದು. ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ಪ್ರಭುಗಳಿಗೆ ಅಪಮಾನವನ್ನು ಉಂಟುಮಾಡಿ, ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವವನು.


ಪ್ರಭುಗಳಿಗೆ ಅವಮಾನವನ್ನು ಉಂಟುಮಾಡಿ ಬಲಿಷ್ಠರ ನಡುಕಟ್ಟನ್ನು ಸಡಿಲಿಸುವನು.


ಇದೇ ಲೋಕದಲ್ಲೆಲ್ಲಾ ನೆರವೇರಬೇಕಾದ ನನ್ನ ಉದ್ದೇಶ, ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.


ತಾರ್ಷೀಷ್ ನಗರಿಯೇ, ನೈಲ್ ನದಿಯಂತೆ ನಿನ್ನ ಭೂಮಿಯನ್ನು ಬಿತ್ತು. ತೂರ್ ಪಟ್ಟಣದಲ್ಲಿ ಇನ್ನು ಮುಂದೆ ವ್ಯಾಪಾರ ಸ್ಥಳವು ಇರುವುದಿಲ್ಲ.


ನನ್ನ ಜನರ ಹೊಲಗದ್ದೆಗಳಲ್ಲಿ ಮುಳ್ಳುಪೊದೆಗಳು ಹುಟ್ಟಿಕೊಂಡಿವೆ. ಉತ್ಸಾಹದಿಂದ ಕೂಡಿದ್ದ ಎಲ್ಲಾ ಮನೆಗಳ ಮತ್ತು ಪಟ್ಟಣಗಳಲ್ಲೂ ಮುಳ್ಳುಗಿಡಗಳು ಹುಟ್ಟಿಕೊಂಡಿವೆ.


“ಇದು ಯೆಹೋವನಾದ ನನ್ನ ನುಡಿ, ಈ ನಡುಕಟ್ಟಿನಂತೆ ನಾನು ಯೆಹೂದದ ದೊಡ್ಡಸ್ತಿಕೆಯನ್ನೂ ಮತ್ತು ಯೆರೂಸಲೇಮಿನ ಬಲು ದೊಡ್ಡಸ್ತಿಕೆಯನ್ನೂ ಕೆಡಿಸಿಬಿಡುವೆನು.


ಇಗೋ, ನಿನ್ನನ್ನು ಜನಾಂಗಗಳಲ್ಲಿ ಅತ್ಯಲ್ಪನನ್ನಾಗಿ ಮಾಡಿದ್ದೇನೆ. ನೀನು ಬಹಳವಾಗಿ ತಾತ್ಸಾರಕ್ಕೆ ಗುರಿಯಾಗಿರುವಿ.


ನಿನ್ನ ಮೇಲೆಯೂ, ನಿನ್ನ ಪ್ರಜೆಗಳ ಮೇಲೆಯೂ ಮತ್ತು ಪರಿವಾರದವರ ಮೇಲೆಯೂ ಕಪ್ಪೆಗಳು ಹರಡಿಕೊಳ್ಳುವವು.’” ಎಂದನು.


ಸೇನಾಧೀಶ್ವರನಾದ ಯೆಹೋವನ ನ್ಯಾಯನಿರ್ಣಯದ ದಿನವು ಗರ್ವದಿಂದ ಹೆಚ್ಚಿಕೊಂಡಿರುವ ಪ್ರತಿಯೊಬ್ಬನ ಮೇಲೆ ಬರುವುದು. ಆಗ ಅವನು ತಗ್ಗಿಸಲ್ಪಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು