Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 24:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮೂಡಣದವರೇ, “ಯೆಹೋವನನ್ನು ಸನ್ಮಾನಿಸಿರಿ. ದ್ವೀಪ ನಿವಾಸಿಗಳೇ, ಇಸ್ರಾಯೇಲರ ದೇವರಾದ ಯೆಹೋವನ ನಾಮವನ್ನು ಘನಪಡಿಸಿರಿ” ಎಂದು ಕೂಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಎಂದೇ ಮೂಡಣದವರೇ, ಸನ್ಮಾನಿಸಿರಿ ಸರ್ವೇಶ್ವರ ಸ್ವಾಮಿಯನು, ಕರಾವಳಿಯವರೇ, ಘನಪಡಿಸಿರಿ ಇಸ್ರಯೇಲಿನ ದೇವರಾದ ಸ್ವಾಮಿಯ ನಾಮವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮೂಡಣವರೇ, ಯೆಹೋವನನ್ನು ಸನ್ಮಾನಿಸಿರಿ; ಕರಾವಳಿಯವರೇ, ಇಸ್ರಾಯೇಲ್ಯರ ದೇವರಾದ ಯೆಹೋವನ ನಾಮವನ್ನು ಘನಪಡಿಸಿರಿ ಎಂದು ಕೂಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆ ಜನರು, “ಪೂರ್ವದಲ್ಲಿರುವ ಜನರೇ, ದೇವರಿಗೆ ಸ್ತೋತ್ರಮಾಡಿರಿ! ದೂರ ದೇಶಗಳಲ್ಲಿರುವ ಜನರೇ, ಇಸ್ರೇಲರ ದೇವರಾದ ಯೆಹೋವನ ಹೆಸರನ್ನು ಕೊಂಡಾಡಿರಿ” ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದ್ದರಿಂದ ಪೂರ್ವದಿಕ್ಕಿನವರೇ, ಯೆಹೋವ ದೇವರನ್ನು ಮಹಿಮೆಪಡಿಸಿರಿ; ಸಮುದ್ರದ ದ್ವೀಪಗಳಲ್ಲಿ ಇಸ್ರಾಯೇಲರ ದೇವರಾದ ಯೆಹೋವ ದೇವರ ಹೆಸರನ್ನು ನೀವು ಘನಪಡಿಸಿರಿ, ಎಂದು ಕೂಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 24:15
26 ತಿಳಿವುಗಳ ಹೋಲಿಕೆ  

“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಯೆಹೋವನು ನಿನ್ನನ್ನು ವೈಭವಪಡಿಸಿರುವುದನ್ನು ಕೇಳಿ ತಾರ್ಷೀಷಿನ ಹಡಗುಗಳು, ನಿನ್ನ ದೇವರಾದ ಯೆಹೋವನ ನಾಮಮಹತ್ತಿನ ನಿಧಿಯೂ, ಇಸ್ರಾಯೇಲಿನ ಸದಮಲಸ್ವಾಮಿಯ ಸನ್ನಿಧಿಯ ಸ್ಥಾನಕ್ಕೆ ನಿನ್ನ ಮಕ್ಕಳನ್ನು ಅವರ ಬೆಳ್ಳಿ ಬಂಗಾರಗಳ ಸಮೇತ ದೂರದಿಂದ ತರುವುದರಲ್ಲಿ ಮುಂದಾಗುತ್ತಿವೆ.


ನನ್ನ ರಕ್ಷಣಾಧರ್ಮದ ಕಾರ್ಯವು ಸಮೀಪಿಸಿದೆ, ನನ್ನ ವಿಮೋಚನಕ್ರಿಯೆಯು ತಲೆದೋರಿದೆ, ನನ್ನ ಹಸ್ತವು ಜನಾಂಗಗಳಿಗೆ ನ್ಯಾಯತೀರಿಸುವುದು, ದ್ವೀಪನಿವಾಸಿಗಳು ನನ್ನನ್ನು ನಿರೀಕ್ಷಿಸಿಕೊಂಡು ನನ್ನ ಹಸ್ತಕಾರ್ಯಕ್ಕೆ ಕಾದಿರುವರು.


ದ್ವೀಪನಿವಾಸಿಗಳೇ, ನನ್ನ ಕಡೆಗೆ ಕಿವಿಗೊಡಿರಿ, ದೂರದ ಜನಾಂಗಗಳೇ, ಆಲಿಸಿರಿ! ನಾನು ಗರ್ಭದಲ್ಲಿದ್ದಾಗಲೇ ಯೆಹೋವನು ನನ್ನನ್ನು ಕರೆದನು, ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ.


ಸಮುದ್ರಪ್ರಯಾಣಿಕರೇ, ಸಕಲಜಲಚರಗಳೇ, ದ್ವೀಪಾಂತರಗಳೇ, ದ್ವೀಪಾಂತರವಾಸಿಗಳೇ, ಯೆಹೋವನ ಘನತೆಗಾಗಿ ನೂತನ ಗೀತೆಯನ್ನು ಹಾಡಿ ದಿಗಂತಗಳಲ್ಲಿಯೂ ಆತನನ್ನು ಕೀರ್ತಿಸಿರಿ.


ಲೋಕದಲ್ಲಿ ಸದ್ಧರ್ಮವನ್ನು ಸ್ಥಾಪಿಸುವ ತನಕ ಇವನು ಕಳೆಗುಂದದೆಯೂ, ಜಜ್ಜಿಹೋಗದೆಯೂ ತನ್ನ ಕಾರ್ಯದಲ್ಲಿ ನಿರತನಾಗಿರುವನು. ದ್ವೀಪಗಳು ಇವನ ಧರ್ಮಪ್ರಮಾಣಕ್ಕೆ ಕಾದಿರುವವು.


ಆದರೆ ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೆನೆಂದು ಕೇಳುವವರೆಲ್ಲರಿಗೂ ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧರಾಗಿರಿ. ಆದರೆ ಅದನ್ನು ಸಾತ್ವಿಕತ್ವದಿಂದಲೂ ಮತ್ತು ಗೌರವದಿಂದಲೂ ಹೇಳಿರಿ.


ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ.


ಮಧ್ಯರಾತ್ರಿಯಲ್ಲಿ ಪೌಲನೂ ಮತ್ತು ಸೀಲನೂ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಿದ್ದರು; ಸೆರೆಯಲ್ಲಿದ್ದವರು ಲಕ್ಷ್ಯವಿಟ್ಟು ಕೇಳುತ್ತಿದ್ದರು.


ಯೆಹೋವನು ಅವರಿಗೆ ಭಯಂಕರನಾಗುವನು; ಲೋಕದ ದೇವರುಗಳನ್ನೆಲ್ಲಾ ನಾಶಮಾಡುವನು; ಸಮಸ್ತ ಜನರು, ಪ್ರತಿಯೊಂದು ಪ್ರಾಂತ್ಯದ ನಿವಾಸಿಗಳು ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.


ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ, ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.”


ದ್ವೀಪ ನಿವಾಸಿಗಳು ಕಂಡು ಬೆರಗಾದರು, ಭೂಮಿಯ ಕಟ್ಟ ಕಡೆಯವರು ನಡುಗಿದರು, ಎಲ್ಲರೂ ನೆರೆದು ಬಂದರು.


ಆದಕಾರಣ ಬಲಿಷ್ಠವಾದ ಜನಾಂಗವು ನಿನ್ನನ್ನು ಘನಪಡಿಸುವುದು, ಭಯಂಕರವಾದ ಜನರ ಪಟ್ಟಣವು ನಿನಗೆ ಅಂಜುವುದು.


ಹೀಗಿರಲಾಗಿ ನಮ್ಮ ದೇವರು ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗೆ ಅನುಸಾರವಾಗಿ ನಮ್ಮ ಕರ್ತನಾದ ಯೇಸುಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವುದು ನೀವೂ ಆತನಲ್ಲಿ ಮಹಿಮೆ ಹೊಂದುವಿರಿ.


ಅಹಷ್ವೇರೋಷ್ ರಾಜನು ತನ್ನ ರಾಜ್ಯಕ್ಕೆ ಸೇರಿರುವ ಎಲ್ಲಾ ದೇಶಗಳಿಗೂ ಮತ್ತು ಸಮುದ್ರದ್ವೀಪಗಳಿಗೂ ತೆರಿಗೆಯನ್ನು ವಿಧಿಸಿದನು.


ಆ ದಿನದಲ್ಲಿ ನೀವು ಹೇಳುವುದೇನೆಂದರೆ, “ಯೆಹೋವನಿಗೆ ಕೃತಜ್ಞತಾ ಸ್ತುತಿಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಿಪಡಿಸಿರಿ, ಆತನ ನಾಮವು ಉನ್ನತೋನ್ನತ ಎಂದು ಜ್ಞಾಪಕಪಡಿಸಿರಿ.


ಹೌದು, ಯೆಹೋವನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಡೆಯುತ್ತಾ ನಿನಗಾಗಿ ಕಾದುಕೊಂಡಿದ್ದೇವೆ; ನಿನ್ನ ನಾಮಸ್ಮರಣೆಯು ನಮ್ಮ ಆತ್ಮಕ್ಕೆ ಇಷ್ಟವಾಗಿದೆ, ಹಿತವಾಗಿದೆ.


ಯೆಹೋವನನ್ನು ಘನಪಡಿಸಿ ದ್ವೀಪಾಂತರಗಳಲ್ಲಿ ಆತನ ಸ್ತೋತ್ರವನ್ನು ಹಬ್ಬಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು