Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 24:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಭೂಮಂಡಲದ ಕಟ್ಟಕಡೆಯಿಂದ, “ನೀತಿವಂತರಿಗೆ ಮಹಿಮೆಯಾಗಲಿ” ಎಂಬ ಗೀತೆಗಳು ನಮಗೆ ಕೇಳಿ ಬಂದಿವೆ, ಆದರೆ “ನಾನಾದರೋ ಕ್ಷಯಿಸಿ ಹೋಗಿದ್ದೇನೆ, ನನ್ನ ಗತಿಯನ್ನು ಏನು ಹೇಳಲಿ! ಬಾಧಕರು ಬಾಧಿಸುತ್ತಾರೆ, ಹೌದು, ಬಾಧಕರು ಬಾಧಿಸೇ ಬಾಧಿಸುತ್ತಾರೆ” ಎಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಜಗದ ಕಟ್ಟಕಡೆಯಿಂದ ಕೇಳಿಬರುತಿದೆ, ‘ಸತ್ಯಸ್ವರೂಪನಿಗೆ ಸ್ತೋತ್ರ’ ಎಂಬ ಗೀತೆ. ಆದರೆ ನಶಿಸಿಹೋಗುತ್ತಿರುವೆನು ನಾನು, ಹೌದು, ನಶಿಸಿ ನಾಶವಾಗುತ್ತಿರುವೆನು, ಏನೆಂದು ಹೇಳಲಿ ನನ್ನ ಗತಿಯನು. ಇದೋ, ಬಾಧಿಸುತ್ತಿಹರು ದ್ರೋಹಿಗಳು, ದ್ರೋಹದ ಮೇಲೆ ದ್ರೋಹವೆಸಗುತಿಹರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಸದ್ಧರ್ಮಿಗಳಿಗೆ ಮಾನವಾಗಲೆಂಬ ಗೀತಗಳು ಭೂಮಂಡಲದ ಕಟ್ಟಕಡೆಯಿಂದ ನಮಗೆ ಕೇಳಬಂದಿವೆ. ನಾನಾದರೋ - ಕ್ಷಯಿಸೇ ಕ್ಷಯಿಸುತ್ತೇನೆ, ನನ್ನ ಗತಿಯನ್ನು ಏನು ಹೇಳಲಿ! ಬಾಧಕರು ಬಾಧಿಸುತ್ತಾರೆ, ಹೌದು, ಬಾಧಕರು ಬಾಧಿಸೇ ಬಾಧಿಸುತ್ತಾರೆ ಎಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದೇವರ ಸ್ತುತಿಯನ್ನು ನಾವು ಭೂಮಿಯ ಎಲ್ಲಾ ಕಡೆಗಳಿಂದಲೂ ಕೇಳಿಸಿಕೊಳ್ಳುತ್ತೇವೆ. ಈ ಸ್ತುತಿಹಾಡುಗಳು ದೇವರ ಒಳ್ಳೆತನವನ್ನು ವರ್ಣಿಸುವವು. ಆದರೆ ನಾನು, “ಸಾಕು, ನನಗೆ ಸಾಕು. ನಾನು ನೋಡುವ ವಿಷಯಗಳು ಭಯಂಕರವಾಗಿವೆ. ದ್ರೋಹಿಗಳು ಜನರಿಗೆ ವಿರುದ್ಧವಾಗಿ ಎದ್ದು ಅವರಿಗೆ ಹಾನಿಮಾಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಭೂಮಂಡಲದ ಕಟ್ಟಕಡೆಯಿಂದ “ನೀತಿವಂತರಿಗೆ ಮಹಿಮೆಯಾಗಲಿ” ಎಂಬ ಗೀತೆಗಳು ನಮಗೆ ಕೇಳಿಬರುತ್ತಿವೆ. ಆದರೆ, “ನಾನಾದರೋ ಕ್ಷಯಿಸೇ ಕ್ಷಯಿಸುತ್ತೇನೆ. ನನಗೆ ಕಷ್ಟ! ಬಾಧಕರು ಬಾಧಿಸುವುದರಲ್ಲಿಯೇ ನಿರತರಾಗಿದ್ದಾರೆ. ಹೌದು, ಬಾಧಕರು ಬಹಳವಾಗಿ ಬಾಧಿಸುವುದರಲ್ಲಿ ನಿರತರಾಗಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 24:16
41 ತಿಳಿವುಗಳ ಹೋಲಿಕೆ  

ಘೋರದರ್ಶನವು ನನಗೆ ತಿಳಿಯ ಬಂದಿದೆ; ಬಾಧಕನು ಬಾಧಿಸುತ್ತಿದ್ದಾನೆ, ಸೂರೆಗಾರನು ಸೂರೆಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ, ಮುತ್ತಿಗೆ ಹಾಕು! ನಿಮ್ಮ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.


ಇಸ್ರಾಯೇಲ್ ವಂಶದವರೂ, ಯೆಹೂದ ವಂಶದವರೂ ನನಗೆ ಕೇವಲ ದ್ರೋಹವನ್ನು ಮಾಡಿರುತ್ತಾರೆ ಎಂದು ಯೆಹೋವನು ನುಡಿಯುತ್ತಾನೆ.


ಸೂರೆಯಾಗದಿದ್ದರೂ ಸೂರೆಮಾಡಿದಿ! ಬಾಧೆಪಡದಿದ್ದರೂ ಬಾಧಿಸಿದಿ! ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರೆಮಾಡಿ ಬಿಟ್ಟ ಮೇಲೆ ನೀನೂ ಸೂರೆಯಾಗುವಿ. ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು.


ಆದರೆ ಇಸ್ರಾಯೇಲ್ ವಂಶದವರೇ, ಒಬ್ಬ ಹೆಂಗಸು ಪತಿದ್ರೋಹ ಮಾಡಿದಂತೆ ನೀವು ನನಗೆ ದ್ರೋಹವನ್ನು ಮಾಡಿದ್ದೀರಿ” ಎಂದು ಯೆಹೋವನು ನುಡಿಯುತ್ತಾನೆ.


ಅವರು ದೇವರ ದಾಸನಾದ ಮೋಶೆಯ ಹಾಡನ್ನೂ, ಯಜ್ಞದ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ, “ಕರ್ತನಾದ ದೇವರೇ ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ, ಆಶ್ಚರ್ಯಕರವಾದವುಗಳೂ ಆಗಿವೆ. ಸರ್ವಜನಾಂಗಗಳ ಅರಸನೇ. ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.


ಹಾಗೆಯೇ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ, ಹೇಗೆಂದರೆ; ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಕನಾಗಿರುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ದೇವರು ಹೇಳಿದ್ದಾನೆ ಎಂದರು.


ಮತ್ತು ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ತಾನು ಆರಿಸಿಕೊಂಡವರನ್ನು ನಾಲ್ಕುದಿಕ್ಕುಗಳಿಂದ ಒಟ್ಟುಗೂಡಿಸುವನು.”


ಕೇಡನ್ನೇ ನನ್ನ ಕಣ್ಣಿಗೆ ಏಕೆ ಕಾಣಿಸುವಂತೆ ಮಾಡಿದ್ದಿ? ಕಷ್ಟವನ್ನೇಕೆ ಅನುಭವಿಸುವಂತೆ ಮಾಡಿರುವೆ? ಹಿಂಸೆಬಾಧೆಗಳು ನನ್ನ ಕಣ್ಣೆದುರಿಗೆ ಇದ್ದೇ ಇವೆ; ಜಗಳವಾಗುತ್ತಿದೆ ವ್ಯಾಜ್ಯವೇಳುತ್ತಿದೆ.


ಆತನು ಯೆಹೋವನ ಬಲವನ್ನೂ, ತನ್ನ ದೇವರಾದ ಯೆಹೋವನ ನಾಮದ ಮಹಿಮೆಯನ್ನೂ ಹೊಂದಿದವನಾಗಿ ನಿಂತು ತನ್ನ ಹಿಂಡನ್ನು ಮೇಯಿಸುವನು. ಆ ಹಿಂಡು ನೆಮ್ಮದಿಯಾಗಿ ನೆಲೆಗೊಂಡಿರುವುದು. ಆತನು ಭೂಮಿಯ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.


ಅವರು ಆದಾಮನಂತೆ ನನ್ನ ನಿಬಂಧನೆಯನ್ನು ಮೀರಿದ್ದಾರೆ; ಅಲ್ಲಲ್ಲಿ ನನಗೆ ದ್ರೋಹಮಾಡಿದ್ದಾರೆ.


ಅವು ಯೆಹೋವನ ಮಕ್ಕಳಲ್ಲದ ಮಕ್ಕಳನ್ನು ಪಡೆದು ಆತನಿಗೆ ದ್ರೋಹಮಾಡಿವೆ; ಅವುಗಳನ್ನೂ, ಅವುಗಳ ಭೂಸ್ವಾಸ್ತ್ಯಗಳನ್ನೂ ಈ ಅಮಾವಾಸ್ಯೆಯು ನುಂಗಿಬಿಡುವುದು.


ರಾತ್ರಿಯಲ್ಲಿ ಬಿಕ್ಕಿ ಬಿಕ್ಕಿ ಅಳುತ್ತಾ ಗೋಳಾಡುವುದರಿಂದ ಕಣ್ಣೀರು ಕೆನ್ನೆಗಳ ಮೇಲೆ ನಿಂತೇ ಇದೆ; ಆಕೆಯ ಬಹುಮಂದಿ ಪ್ರಿಯರಲ್ಲಿ ಯಾರೂ ಸಂತೈಸರು; ಆಕೆಯ ಮಿತ್ರರೆಲ್ಲಾ ದ್ರೋಹಮಾಡಿ ಶತ್ರುಗಳಾಗಿದ್ದಾರೆ.


ನಿನ್ನ ಸಹೋದರರೂ, ನಿನ್ನ ತಂದೆಯ ಮನೆಯವರೂ ನಿನಗೆ ದ್ರೋಹಮಾಡಿದ್ದಾರೆ. ಇವರೇ ನಿನ್ನ ಬೆನ್ನಟ್ಟುತ್ತಾ ಕೂಗುತ್ತಾರೆ; ಒಳ್ಳೆಯ ಮಾತನಾಡಿದರೂ ಇವರನ್ನು ನಂಬಬೇಡ” ಎಂದು ಹೇಳಿದ್ದಾನೆ.


ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ, ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.


ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ. ಭೂಮಿಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡುವರು.


ನೀನು ಕೇಳಿಲ್ಲ, ತಿಳಿದೂ ಇಲ್ಲ, ಪುರಾತನಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ನೀನು ದೊಡ್ಡ ವಂಚಕನೆಂದೂ, ಗರ್ಭದಿಂದಲೇ ದ್ರೋಹಿಯೆಂದು ನಾನು ತಿಳಿದುಕೊಂಡಿದ್ದೇನೆ.


ಆ ದಿನದಲ್ಲಿ ಸೇನಾಧೀಶ್ವರನಾದ ಯೆಹೋವನೇ ತನ್ನ ಜನರಲ್ಲಿ ಉಳಿದವರಿಗೆ ಅಂದದ ಕಿರೀಟವೂ, ಸುಂದರ ಮುಕುಟವೂ ಆಗಿರುವನು.


ಯೆಹೋವನೇ, ನೀನು ಜನಾಂಗವನ್ನು ಹೆಚ್ಚಿಸಿದ್ದೀ, ಹೌದು, ನಿನ್ನ ಜನಾಂಗವನ್ನು ವೃದ್ಧಿಗೊಳಿಸಿದ್ದೀ; ನೀನು ದೇಶದ ಮೇರೆಗಳನ್ನೆಲ್ಲಾ ವಿಸ್ತರಿಸಿ ಮಹಿಮೆಗೊಂಡಿದ್ದೀ.


“ಆ ದಿನದಲ್ಲಿ, ಯಾಕೋಬಿನ ಮಾಂಸದ ಕೊಬ್ಬು ಕರಗಿ, ಅದರ ಮಹಿಮೆಯೂ ಕ್ಷೀಣವಾಗುವುದು.


ಆದಕಾರಣ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಬ್ಬಿದ ಪ್ರಜೆಗಳಿಗೆ ಕ್ಷಯವನ್ನು ಉಂಟುಮಾಡುವನು. ದಹಿಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭವದ ಅಸ್ತಿವಾರಕ್ಕೆ ಹತ್ತಿಕೊಳ್ಳುವುದು.


ಆತನು ಅವರ ಆಶೆಯನ್ನು ಪೂರೈಸಿದರೂ, ಅವರ ಪ್ರಾಣಕ್ಕೆ ಕ್ಷಯವನ್ನು ಬರಮಾಡಿದನು.


ಆತನು ಇಸ್ರಾಯೇಲನ ಮನೆತನದವರ ಬಗ್ಗೆ ಇದ್ದ, ತನ್ನ ಪ್ರೀತಿ, ಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ. ಭೂಲೋಕದ ಎಲ್ಲಾ ಕಡೆಯವರೂ, ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡಿದ್ದಾರೆ.


ಆತನು ನಮ್ಮನ್ನು ಆಶೀರ್ವದಿಸುವವನಾಗಿದ್ದಾನೆ. ಭೂಮಂಡಲದವರೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರುವರು.


ದುಷ್ಟರಿಗಾಗುವ ಪ್ರತಿದಂಡನೆಯನ್ನು ಭಕ್ತರು ನೋಡಿ ಹರ್ಷಿಸಿ, ಅವರ ರಕ್ತದಲ್ಲಿ ಕಾಲಾಡಿಸುವರು.


ನೀನು ಕೇಳಿಕೊಂಡರೆ ನಾನು ಅನ್ಯಜನಗಳನ್ನೆಲ್ಲಾ ನಿನಗೆ ಅಧೀನಮಾಡುವೆನು; ಭೂಮಿಯ ಕಟ್ಟಕಡೆಯವರೆಗೂ ಇರುವ ಎಲ್ಲಾ ದೇಶಗಳನ್ನೂ ನಿನಗೆ ಸ್ವತ್ತಾಗಿ ಕೊಡುವೆನು.


ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? ನಿನ್ನ ಹಾಗೆ ಪರಿಶುದ್ಧತ್ವದಲ್ಲಿ ಸರ್ವೋತ್ತಮನು ಮಹಿಮೆ ಹೊಂದಿದವನು, ಭಯಂಕರನೂ, ಅದ್ಭುತ ಕೃತ್ಯಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನರು ಯಾರಿದ್ದಾರೆ?


ಯೆಹೋವನೇ, ನೀನು ಧರ್ಮಸ್ವರೂಪನಾಗಿರುವುದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು. ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆ ಏಕೆ ಸಫಲವಾಗುತ್ತದೆ?


ನಿಮ್ಮಲ್ಲಿ ಉಳಿದವರು ತಮ್ಮ ಪಾಪದ ದೆಸೆಯಿಂದಲೂ ಮತ್ತು ತಮ್ಮ ಪೂರ್ವಿಕರ ಪಾಪದ ದೆಸೆಯಿಂದಲೂ ಅವರಂತೆಯೇ ಶತ್ರುಗಳ ದೇಶಗಳಲ್ಲಿ ಕ್ಷೀಣವಾಗಿ ಹೋಗುವರು.


ಭೂಮಿಯ ಕಟ್ಟಕಡೆಗಳಲ್ಲಿ ವಾಸಿಸುವವರೂ, ನಿನ್ನ ಅದ್ಭುತಕೃತ್ಯಗಳಿಗಾಗಿ ಭಯಪಡುತ್ತಾರೆ; ಪೂರ್ವದಿಂದ ಪಶ್ಚಿಮದವರೆಗೆ ಇರುವವರನ್ನು ಹರ್ಷಗೊಳಿಸುವಿ.


ನಿನ್ನ ನುಡಿಯನ್ನು ಕೈಗೊಳ್ಳದ ಧರ್ಮಭ್ರಷ್ಟರನ್ನು ನೋಡಿ ಅಸಹ್ಯಪಟ್ಟಿದ್ದೇನೆ.


ಅವನು ಜನಾಂಗಗಳಲ್ಲಿ ಧ್ವಜವನ್ನೆತ್ತಿ, ಇಸ್ರಾಯೇಲರಲ್ಲಿ ಸೆರೆಗೆ ಒಯ್ಯಲ್ಪಟ್ಟವರನ್ನೂ, ಯೆಹೂದದಿಂದ ಚದರಿದವರನ್ನೂ ಭೂಮಿಯ ನಾಲ್ಕು ಕಡೆಗಳಿಂದಲೂ ಕೂಡಿಸುವನು.


ಸಮುದ್ರಪ್ರಯಾಣಿಕರೇ, ಸಕಲಜಲಚರಗಳೇ, ದ್ವೀಪಾಂತರಗಳೇ, ದ್ವೀಪಾಂತರವಾಸಿಗಳೇ, ಯೆಹೋವನ ಘನತೆಗಾಗಿ ನೂತನ ಗೀತೆಯನ್ನು ಹಾಡಿ ದಿಗಂತಗಳಲ್ಲಿಯೂ ಆತನನ್ನು ಕೀರ್ತಿಸಿರಿ.


ನೀನು ಕೇಡನ್ನು ಬಯಸುವಂತಹ ದೇವರಲ್ಲ, ಪವಿತ್ರ ದೃಷ್ಟಿಯಿಂದ ನೋಡುವ ನಿನ್ನ ಕಣ್ಣಿನ ರಕ್ಷಣೆ ನಮ್ಮೊಂದಿಗಿದೆ. ಆದರೆ ನಮಗಾಗುತ್ತಿರುವ ಕೇಡನ್ನು ನೋಡಿಯೂ ಏಕೆ ಸುಮ್ಮನಿರುವೆ? ದುಷ್ಟರು ತಮಗಿಂತ ಯೋಗ್ಯನನ್ನು ಕಬಳಿಸುತ್ತಿರುವುದನ್ನು ನೋಡಿ ಏಕೆ ಸುಮ್ಮನಿರುವೇ?


ಆಗ ನಾನು, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು. ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು. ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡೆವಲ್ಲಾ!” ಎಂದು ಕೂಗಿಕೊಳ್ಳಲು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು