Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 24:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಪ್ರಜೆಗಳು ಯಾಜಕ, ದಾಸ ಯಜಮಾನ, ದಾಸಿ, ಯಜಮಾನಿ, ಕೊಳ್ಳುವವನು, ಮಾರುವವನು, ಸಾಲ ಕೊಡುವವನು ಸಾಲ ಪಡೆಯುವವನು, ಬಡ್ಡಿ ಪಡೆಯುವವನು ಬಡ್ಡಿ ತೆರುವವನು, ಇವರೆಲ್ಲರಿಗೂ ಒಂದೇ ಗತಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪ್ರಜೆಗೆ ಹೇಗೋ ಹಾಗೆ ಯಾಜಕನಿಗೆ, ದಾಸನಿಗೆ ಹೇಗೋ ಹಾಗೆ ದಣಿಗೆ , ದಾಸಿಗೆ ಹೇಗೋ ಹಾಗೆ ಯಜಮಾನಿಗೆ, ಕೊಳ್ಳುವವನಿಗೆ ಹೇಗೋ ಹಾಗೆ ಕೊಡುವವನಿಗೆ, ಸಾಲ ಕೊಡುವವನಿಗೆ ಹೇಗೋ ಹಾಗೆ ಸಾಲ ಪಡೆಯುವವನಿಗೆ, ಬಡ್ಡಿ ತೆಗೆಯುವವನಿಗೆ ಹೇಗೋ ಹಾಗೆ ಬಡ್ಡಿ ತೆರುವವನಿಗೆ, ಬರುವುದು ಒಂದೇ ಗತಿ ಇವರೆಲ್ಲರಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಪ್ರಜೆ ಯಾಜಕ, ದಾಸ ದಣಿ, ತೊತ್ತು ಯಜಮಾನಿ, ಕೊಳ್ಳುವವನು ಮಾರುವವನು, ಸಾಲಕೊಡುವವನು ತರುವವನು, ಬಡ್ಡಿ ತೆಗೆಯುವವನು ತೆರುವವನು, ಇವರೆಲ್ಲರಿಗೂ ಒಂದೇ ಗತಿಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆ ಸಮಯದಲ್ಲಿ ಸಾಧಾರಣ ಜನರಿಗೂ ಯಾಜಕವರ್ಗದವರಿಗೂ ವ್ಯತ್ಯಾಸವಿರದು. ಸೇವಕರಿಗೂ ಅವರ ಯಜಮಾನರಿಗೂ ವ್ಯತ್ಯಾಸವಿರದು. ದಾಸಿಯರಿಗೂ ಅವರ ಯಜಮಾನಿಯರಿಗೂ ವ್ಯತ್ಯಾಸವಿರದು. ಮಾರುವವರಿಗೂ ಕೊಳ್ಳುವವರಿಗೂ ವ್ಯತ್ಯಾಸವಿರದು. ಸಾಲಕೊಡುವವರಿಗೂ ಸಾಲ ತೆಗೆದುಕೊಳ್ಳುವವರಿಗೂ ವ್ಯತ್ಯಾಸವಿರದು. ಬಡ್ಡಿಹಾಕುವವನಿಗೂ ಬಡ್ಡಿಕೊಡುವವನಿಗೂ ವ್ಯತ್ಯಾಸವಿರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಜನಗಳಿಗೆ ಹೇಗೋ ಹಾಗೆಯೇ ಯಾಜಕರಿಗೆ; ದಾಸನಿಗೆ ಹೇಗೋ ಹಾಗೆಯೇ ಯಜಮಾನನಿಗೆ; ದಾಸಿಗೆ ಹೇಗೋ ಹಾಗೆಯೇ ಅವಳ ಯಜಮಾನಿಗೆ; ಕೊಳ್ಳುವವನಿಗೆ ಹೇಗೋ ಹಾಗೆಯೇ ಮಾರುವವನಿಗೆ; ಸಾಲಕೊಡುವವನಿಗೆ ಹೇಗೋ ಹಾಗೆಯೇ ಸಾಲ ಪಡೆಯುವವನಿಗೆ; ಬಡ್ಡಿ ತೆಗೆಯುವವನಿಗೆ ಹೇಗೋ ಹಾಗೆಯೇ ಬಡ್ಡಿ ತರುವವನಿಗೆ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 24:2
26 ತಿಳಿವುಗಳ ಹೋಲಿಕೆ  

ಜನರೂ, ಯಾಜಕರೂ ಒಂದೇ; ಅವರ ದುಷ್ಕಾರ್ಯಗಳಿಗೆ ಅವರನ್ನು ದಂಡಿಸುವೆನು, ಅವರ ದುಷ್ಕೃತ್ಯಗಳನ್ನು ಅವರಿಗೆ ಕಟ್ಟುವೆನು.


ಚೀಯೋನಿನ ಮಧ್ಯದಲ್ಲಿ ಶಿಷ್ಟರ ರಕ್ತವನ್ನು ಸುರಿಸಿದ ಯಾಜಕರ ಪಾಪ ಮತ್ತು ಪ್ರವಾದಿಗಳ ದೋಷಗಳಿಂದಲೇ ಈ ಗತಿ ಬಂತು.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನನ್ನ ಉಗ್ರರೋಷಾಗ್ನಿಯು ಯೆರೂಸಲೇಮಿನವರ ಮೇಲೆ ಹೇಗೆ ಸುರಿಯಿತೋ ಹಾಗೆಯೇ ನೀವು ಐಗುಪ್ತದಲ್ಲಿ ಕಾಲಿಟ್ಟ ಕೂಡಲೆ ನನ್ನ ರೋಷಾಗ್ನಿಯು ನಿಮ್ಮ ಮೇಲೆಯೂ ಸುರಿಯುವುದು; ನೀವು ಅಪವಾದ, ವಿಸ್ಮಯ, ಶಾಪ ಮತ್ತು ದೂಷಣೆಗಳಿಗೆ ಗುರಿಯಾಗುವಿರಿ; ಈ ಸ್ಥಳವು ಮತ್ತೆ ನಿಮ್ಮ ಕಣ್ಣಿಗೆ ಬೀಳದು.’”


ಆಗ ನೆತನ್ಯನ ಮಗನಾದ ಇಷ್ಮಾಯೇಲನೂ ಅವನೊಂದಿಗಿದ್ದ ಹತ್ತು ಜನರೂ ಎದ್ದು ಅಹೀಕಾಮನ ಮಗ ಶಾಫಾನನ ಮೊಮ್ಮಗ ಬಾಬೆಲಿನ ಅರಸನಿಂದ ದೇಶಾಧಿಪತಿಯಾಗಿ ನೇಮಿಸಲ್ಪಟ್ಟವನೂ ಆದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದರು.


ಮನುಷ್ಯನು ಕುಗ್ಗಿಸಲ್ಪಡುವನು. ಅಹಂಭಾವದ ಕಣ್ಣುಗಳು ಕಂಗೆಡುವವು.


ಹೀಗಿರಲು ಜನರು ಅಧರ್ಮಿಗಳಾಗಲಿ, ಉತ್ತಮರಾಗಲಿ ತಗ್ಗಿಸಲ್ಪಡುವರು, ಪ್ರತಿ ಮನುಷ್ಯನು ಬಿದ್ದುಹೋಗುವನು. ನೀನು ಅವರನ್ನು ಸ್ವೀಕರಿಸಬೇಡ.


ಕತ್ತಿಗೆ ತಪ್ಪಿಸಿಕೊಂಡವರನ್ನು ಅರಸನು ಬಾಬಿಲೋನಿಗೆ ಸೆರೆಯೊಯ್ದನು. ಪಾರಸಿಯರ ಪ್ರಭುತ್ವವು ಅಲ್ಲಿ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.


ಬರಗಾಲ ಬರುವುದಕ್ಕಿಂತ ಮೊದಲು ಯೋಸೇಫನಿಗೆ ಇಬ್ಬರು ಗಂಡು ಮಕ್ಕಳು ಹುಟ್ಟಿದರು. ಇವರು ಓನ್ ಪಟ್ಟಣದ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದರು.


ಭೂಮಿಯು ಬಟ್ಟಬರಿದಾಗುವುದು, ಅದು ಸಂಪೂರ್ಣ ಸುಲಿಗೆಯಾಗುವುದು, ಯೆಹೋವನೇ ಇದನ್ನು ನುಡಿದಿದ್ದಾನೆ.


ಈ ನನ್ನ ಜನರು ಸಹ ದ್ರಾಕ್ಷಾರಸದಿಂದ ಓಲಾಡುತ್ತಾರೆ, ಮದ್ಯದಿಂದ ತೂಗಾಡುತ್ತಾರೆ; ಯಾಜಕ ಪ್ರವಾದಿಗಳೂ ಮದ್ಯದಿಂದ ಓಲಾಡುತ್ತಾರೆ, ದ್ರಾಕ್ಷಾರಸವೇ ಅವರನ್ನು ನುಂಗಿಬಿಟ್ಟಿದೆ, ಮದ್ಯದಿಂದ ತೂಗಾಡುತ್ತಾರೆ.


ಯಾರ ಕೈಯೂ ಸೋಕದೆ ಕ್ಷಣಮಾತ್ರದಲ್ಲಿ ಹಾಳಾದ ಸೊದೋಮಿನ ಪಾಪಕ್ಕಿಂತಲೂ, ನನ್ನ ಪ್ರಜೆಯ ಅಧರ್ಮವು ಹೆಚ್ಚಾಯಿತಲ್ಲಾ.


ಯೆಹೋವನ ಉಗ್ರದೃಷ್ಟಿಯು ಅವರನ್ನು ಚದುರಿಸಿದೆ; ಆತನು ಇನ್ನು ಅವರ ಮೇಲೆ ಒಲವು ತೋರಿಸುವುದಿಲ್ಲ. ಅವರು ಯಾಜಕರಾದರೇನು, ಅವರಿಗೆ ಮರ್ಯಾದೆ ತಪ್ಪಿದೆ; ವೃದ್ಧರಾದರೇನು, ಯಾರೂ ಅವರನ್ನು ಕರುಣಿಸರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು