ಯೆಶಾಯ 25:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನೇ, ನೀನೇ ನನ್ನ ದೇವರು; ನೀನು ಸತ್ಯ ಪ್ರಾಮಾಣಿಕತೆಗಳನ್ನು ಅನುಸರಿಸಿ, ಆದಿ ಸಂಕಲ್ಪಗಳನ್ನು ನೆರವೇರಿಸುತ್ತಾ, ಅದ್ಭುತಗಳನ್ನು ನಡೆಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರಾ, ನೀನೆನ್ನ ದೇವನು, ಏಕೆನೆ ನೀನು ಸತ್ಯಸ್ವರೂಪನು, ನಿಷ್ಟಾವಂತನು, ಆದಿ ಯೋಜನೆಗಳನು ಪೂರೈಸುವವನು, ಅದ್ಭುತಕಾರ್ಯಗಳನು ಎಸಗಿದಂತವನು. ಘನಪಡಿಸುವೆ ನಾ ನಿನ್ನನು, ಸ್ತುತಿಸುವೆನು ನಿನ್ನ ನಾಮ ಮಹಿಮೆಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನೇ, ನೀನೇ ನನ್ನ ದೇವರು; ನೀನು ಸತ್ಯಪ್ರಾಮಾಣಿಕತೆಗಳನ್ನು ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ ಅದ್ಭುತಗಳನ್ನು ನಡಿಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಗೊಳಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನೇ, ನೀನೇ ನನ್ನ ದೇವರು. ನಿನ್ನನ್ನು ಗೌರವಿಸಿ ನಿನ್ನ ನಾಮವನ್ನು ಸ್ತುತಿಸುವೆನು. ನೀನು ಆಶ್ಚರ್ಯಕರವಾದ ಕಾರ್ಯಗಳನ್ನು ಮಾಡಿರುವೆ. ಬಹಳ ಕಾಲದ ಹಿಂದೆ ನೀನು ಹೇಳಿರುವ ವಿಷಯಗಳು ಸತ್ಯವೇ ಸರಿ. ನೀನು ಮುಂತಿಳಿಸಿದಂತೆಯೇ ಎಲ್ಲವೂ ಸಂಭವಿಸಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರೇ, ನೀವೇ ನನ್ನ ದೇವರು. ನೀವು ಸತ್ಯ ಪ್ರಾಮಾಣಿಕತೆಗಳನ್ನು ಆಲೋಚಿಸಿ, ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ, ಅದ್ಭುತಕಾರ್ಯಗಳನ್ನು ನಡೆಸಿದ ಕಾರಣ ನಿಮ್ಮನ್ನು ಉನ್ನತಪಡಿಸಿ, ನಿಮ್ಮ ನಾಮವನ್ನು ಕೊಂಡಾಡುವೆನು. ಅಧ್ಯಾಯವನ್ನು ನೋಡಿ |