Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 25:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಏಕೆಂದರೆ ಯೆಹೋವನ ಹಸ್ತವು ಈ ಪರ್ವತದಲ್ಲಿ ನೆಲೆಯಾಗಿರುವುದು; ಮೋವಾಬ್ಯರೋ ತಿಪ್ಪೆಗುಂಡಿಯ ಕೆಸರಿನಲ್ಲಿ ಒಣಹುಲ್ಲು ತುಳಿಯಲ್ಪಡುವ ಹಾಗೆ ತಾವಿದ್ದಲ್ಲೇ ತುಳಿಯಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸರ್ವೇಶ್ವರ ಸ್ವಾಮಿಯ ಅಭಯ ಹಸ್ತವು ಈ ಪರ್ವತದ ಮೇಲೆ ಶಾಶ್ವತವಾಗಿ ನೆಲಸುವುದು. ಮೋವಾಬಾದರೋ ತಿಪ್ಪೆಗುಂಡಿಯ ರೊಚ್ಚಿನಲ್ಲಿ ಒಣಹುಲ್ಲು ತುಳಿತಕ್ಕೆ ಈಡಾಗುವಂತೆ ತಾನಿದ್ದಲ್ಲೇ ತುಳಿತಕ್ಕೀಡಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಏಕೆಂದರೆ ಯೆಹೋವನ ಹಸ್ತವು ಈ ಪರ್ವತದಲ್ಲಿ ನೆಲೆಯಾಗಿರುವದು; ಮೋವಾಬಾದರೋ ತಿಪ್ಪೆಗುಂಡಿಯ ರೊಚ್ಚಿನಲ್ಲಿ ಒಣಹುಲ್ಲು ತುಳಿಯಲ್ಪಡುವ ಹಾಗೆ ತಾನಿದ್ದಲ್ಲೇ ತುಳಿಯಲ್ಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಏಕೆಂದರೆ ಯೆಹೋವನ ಬಲವು ಈ ಪರ್ವತದಲ್ಲಿದೆ. ಮೋವಾಬ್ ಸೋಲಿಸಲ್ಪಡುವದು. ಯೆಹೋವನು ವೈರಿಯನ್ನು ಹುಲ್ಲಿನಂತೆ ತುಳಿದುಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಈ ಪರ್ವತದಲ್ಲಿ ಯೆಹೋವ ದೇವರ ಕೈ ವಿಶ್ರಮಿಸಿಕೊಳ್ಳುವುದು. ಒಣಹುಲ್ಲನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ತುಳಿತಕ್ಕೆ ಈಡಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 25:10
27 ತಿಳಿವುಗಳ ಹೋಲಿಕೆ  

ಇಸ್ರಾಯೇಲರ ದೇವರಾದ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಸೊದೋಮಿನ ಗತಿಯೇ ಮೋವಾಬಿಗೂ ಆಗುವುದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವುದು; ಆ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ, ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯ ನಾಶನಕ್ಕೆ ಈಡಾಗುವವು; ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು. ಅಳಿದುಳಿದ ನನ್ನ ಜನರಿಗೆ ಅವು ಸ್ವಾಸ್ತ್ಯವಾಗುವವು.”


ಮೋವಾಬಿನ ಕೀರ್ತಿಯು ಮಾಯವಾಯಿತು; ಶತ್ರುಗಳು ಹೆಷ್ಬೋನಿನಲ್ಲಿ ದೇಶಕ್ಕೆ ಕೇಡನ್ನು ಕಲ್ಪಿಸಿ, ‘ಮೋವಾಬ್ ಇನ್ನು ಜನಾಂಗವೆನಿಸಿಕೊಳ್ಳದಂತೆ ಅದನ್ನು ನಿರ್ಮೂಲಮಾಡೋಣ ಬನ್ನಿರಿ’ ಎಂದು ಆಲೋಚಿಸಿಕೊಂಡಿದ್ದಾರೆ. ಮದ್ಮೆನೇ, ನೀನು ಸಹ ಸುಮ್ಮನಾಗುವಿ; ಖಡ್ಗವು ನಿನ್ನನ್ನು ಹಿಂದಟ್ಟುವುದು.


ಇದಲ್ಲದೆ, ಸೇನಾಧೀಶ್ವರನಾದ ಯೆಹೋವನು ಈ ಪರ್ವತದಲ್ಲಿ ಸಕಲ ಜನಾಂಗಗಳಿಗೆ ಸಾರವತ್ತಾದ ಕೊಬ್ಬಿದ ಮೃಷ್ಟಾನ್ನದಿಂದಲೂ, ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸದಿಂದಲೂ ಕೂಡಿದ ಔತಣವನ್ನು ಸಿದ್ಧಮಾಡುವನು.


ಚೀಯೋನ್ ನಗರಿಯೇ ಎದ್ದು ಒಕ್ಕಣೆ ಮಾಡು, ನಾನು ನಿನ್ನ ಕೊಂಬನ್ನು ಕಬ್ಬಿಣದ ಕೊಂಬನ್ನಾಗಿಯೂ, ನಿನ್ನ ಗೊರಸನ್ನು ತಾಮ್ರದ ಗೊರಸನ್ನಾಗಿಯೂ ಮಾಡುವೆನು. ನೀನು ಬಹು ಜನಾಂಗಗಳನ್ನು ಚೂರುಚೂರಾಗಿ ತುಳಿದುಬಿಡುವಿ, ಆ ದೇಶಗಳು ಕೊಳ್ಳೆ ಹೊಡೆದು ಸಂಪಾದಿಸಿದ್ದ ಐಶ್ವರ್ಯವನ್ನು ನೀನು ಯೆಹೋವನಿಗಾಗಿ ಮೀಸಲಾಗಿಡುವೆ. ಅವರ ಆಸ್ತಿಯನ್ನು ಲೋಕದ ಕರ್ತನ ಮುಂದೆ ಸಮರ್ಪಿಸುವಿ.


ಪಟ್ಟಣದ ಸುತ್ತಳತೆಯು ಹದಿನೆಂಟು ಸಾವಿರ ಮೊಳವು; ಅದನ್ನು ನಿರ್ಮಿಸಿದ ದಿನದಿಂದ ಆ ಪಟ್ಟಣಕ್ಕೆ “ಯೆಹೋವನ ನೆಲೆ” ಎಂದು ಹೆಸರಾಗುವುದು.


ಕರ್ತನು ನನ್ನ ಶೂರರನ್ನೆಲ್ಲಾ ನನ್ನ ಕಣ್ಣೆದುರಿಗೆ ಹೊರಳಾಡಿಸಿದ್ದಾನೆ; ನನ್ನ ಯುವಕರನ್ನು ಸದೆಬಡಿದಿದ್ದಾನೆ. ನನ್ನ ಕೇಡಿಗಾಗಿಯೇ ಮಹೋತ್ಸವವನ್ನು ಏರ್ಪಡಿಸಿದ್ದಾನೆ; ಕರ್ತನು ಯೆಹೂದವೆಂಬ ಕನ್ಯೆಯನ್ನು ತೊಟ್ಟಿಯಲ್ಲಿನ ದ್ರಾಕ್ಷಿಯ ಹಾಗೆ ತುಳಿದಿದ್ದಾನೆ.


ಅದು ಕಾಲು ತುಳಿತಕ್ಕೆ ಈಡಾಗಿದೆ. ದಿಕ್ಕಿಲ್ಲದ ಬಡವರೂ ಅದನ್ನು ಕಾಲಿನಿಂದ ತುಳಿದು ಬಿಡುತ್ತಾರೆ.


ಯೆಹೋವನು ನನಗೆ ಹೇಳುವುದೇನೆಂದರೆ, “ಬಿಸಿಲಿನಲ್ಲಿ ಜಳಜಳಿಸುವ ಧಗೆಯಂತೆಯೂ, ಸುಗ್ಗಿಯಲ್ಲಿನ ಮಂಜಿನ ಮೋಡದ ಹಾಗೂ ನಾನು ನನ್ನ ವಾಸಸ್ಥಾನದಲ್ಲಿ ಸುಮ್ಮನಿದ್ದು ದೃಷ್ಟಿಸುತ್ತಿರುವೆನು” ಎಂಬುದೇ.


ಆದರೆ ನೀನಾದರೋ ನಿನ್ನ ಸಮಾಧಿಗೆ ದೂರವಾಗಿ ಕೆಟ್ಟ ಕೊಂಬೆಯಂತೆ ಬಿಸಾಡಲ್ಪಟ್ಟಿದ್ದೀ; ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಹೊದಿಕೆಯಂತೆಯೂ,


ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.


ಆದರೆ ಅವರು ಪಶ್ಚಿಮದಲ್ಲಿ ಫಿಲಿಷ್ಟಿಯರ ಭುಜದ ಮೇಲೆ ಎರಗುವರು. ಅವರು ಜೊತೆಯಾಗಿ ಪೂರ್ವದವರನ್ನು ಸೂರೆಮಾಡುವರು. ಎದೋಮಿನ ಮತ್ತು ಮೋವಾಬಿನ ಮೇಲೆ ಕೈಮಾಡುವರು. ಅಮ್ಮೋನಿಯರು ಅವರಿಗೆ ಅಧೀನರಾಗುವರು.


ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಾಂತಿಯ ಸ್ಥಳವು ವೈಭವವುಳ್ಳದ್ದಾಗಿರುವುದು.


ಮದ್ಮೇನ ದಿಕ್ಕಾಪಾಲಾಯಿತು. ಗೇಬೀಮಿನ ನಿವಾಸಿಗಳು ವಲಸೆ ಹೋದರು.


ನಾನು ಅವನನ್ನು ಭ್ರಷ್ಟಜನರ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆ ಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡುವೆನು.


ಹೀಗಿರಲು ಯೆಹೋವನು ತನ್ನ ಜನರ ಮೇಲೆ ಕೋಪಗೊಂಡು, ಅವರ ಮೇಲೆ ಕೈಯೆತ್ತಿ, ಅವರನ್ನು ಹೊಡೆದುಬಿಡುವನು. ಆಗ ಬೆಟ್ಟಗಳು ನಡಗುವವು. ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೇ ಕೈಯೆತ್ತಿಯೇ ಇರುವುದು.


ಅವರು ಎಂದೋರಿನಲ್ಲಿ ವಧಿಸಲ್ಪಟ್ಟು, ಹೊಲದ ಗೊಬ್ಬರವಾಗಿ ಹೋದರಲ್ಲಾ.


ನಾನು ಅವನನ್ನು ನೋಡುವೆನು, ಈಗಲ್ಲ. ಆತನನ್ನು ದೃಷ್ಟಿಸುವೆನು, ಆದರೆ ಸಮೀಪದಲ್ಲಿ ಅಲ್ಲ. ಯಾಕೋಬ ವಂಶದವರಲ್ಲಿ ನಕ್ಷತ್ರವು ಉದಯಿಸುವುದು. ಇಸ್ರಾಯೇಲರಲ್ಲಿ ರಾಜದಂಡವು ಏಳುವುದು. ಅದು ಮೋವಾಬ್ಯರ ತಲೆಯನ್ನು ಸೀಳಿಹಾಕುವುದು ಸೇತನ ಎಲ್ಲಾ ಮಕ್ಕಳನ್ನು ಸಂಹರಿಸಿವುದು.


ಆಗ ಯೆಹೋವನು ತಿರುಗಿ ಹೇಳಿದ್ದೇನೆಂದರೆ, “ಮೂರು ವರ್ಷದೊಳಗೆ ಮೋವಾಬಿನ ವೈಭವವು ಕಣ್ಮರೆಯಾಗುವುದು. ಅವರ ದೊಡ್ಡ ಗುಂಪು ನಾಶವಾಗುವುದು ಅವರ ಜನರಲ್ಲಿ, ಉಳಿದವರು ಕೇವಲ ಚಿಕ್ಕ ಗುಂಪಾಗಿ ಬಲಹೀನರಾಗುವರು” ಎಂಬುದೇ.


ಮೋವಾಬನನ್ನು ಕುರಿತು ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಅಯ್ಯೋ ನೆಬೋ ಊರಿನ ಗತಿಯನ್ನು ಏನು ಹೇಳಲಿ! ಅದು ಹಾಳಾಯಿತು; ಕಿರ್ಯಾತಯಿಮು ಶತ್ರುವಿನ ಕೈಗೆ ಸಿಕ್ಕಿ ಮಾನಭಂಗ ಹೊಂದಿದೆ, ಮಿಸ್ಗಾಬ್ ಕೆಡವಲ್ಪಟ್ಟು ಅವಮಾನಕ್ಕೆ ಗುರಿಯಾಗಿದೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ಯೆಹೂದ ವಂಶವು ಎಲ್ಲಾ ಜನಾಂಗಗಳ ಹಾಗೆಯೇ ಇದೆ, ವಿಶೇಷವೇನು? ಎಂದು ಮೋವಾಬೂ ಮತ್ತು ಸೇಯೀರೂ ಅಂದುಕೊಂಡಿದೆ.


ಮೋವಾಬ್ಯರ ಅಹಂಕಾರವನ್ನು, ಗರ್ವವನ್ನು, ಕೊಚ್ಚಿಕೊಳ್ಳುವಿಕೆಯನ್ನು, ಕೋಪವನ್ನು ನಾವು ಕೇಳಿದ್ದೇವೆ. ಅವರು ಕೊಚ್ಚಿಕೊಳ್ಳುವುದೆಲ್ಲಾ ಬರೀ ವ್ಯರ್ಥವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು