Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 25:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಏಕೆಂದರೆ ನೀನು ದುರ್ಗವನ್ನು ನಾಶಪಡಿಸಿ, ಪಟ್ಟಣವನ್ನು ಹಾಳು ದಿಬ್ಬವನ್ನಾಗಿಯೂ, ಅನ್ಯರ ಕೋಟೆಯನ್ನು ಯಾರೂ ಎಂದಿಗೂ ಕಟ್ಟಲಾರದ ಹಾಳು ಊರನ್ನಾಗಿಯೂ ಮಾಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಾಶಪಡಿಸಿದೆ ನೀ ನಗರವನು, ದಿಬ್ಬವಾಗಿಸಿದೆ ದುರ್ಗವನು, ಕೆಡವಿದೆ ವಿದೇಶೀಯರ ಕೋಟೆಯನು, ಮರಳಿ ಕಟ್ಟಲಾಗದ ಹಾಳೂರನ್ನಾಗಿಸಿದೆ ಅದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ದುರ್ಗವನ್ನು ನಾಶಪಡಿಸಿ ಪಟ್ಟಣವನ್ನು ಹಾಳು ದಿಬ್ಬವನ್ನಾಗಿಯೂ ಅನ್ಯರ ಕೋಟೆಯನ್ನು ಯಾರೂ ಎಂದಿಗೂ ಕಟ್ಟಬಾರದ ಹಾಳೂರನ್ನಾಗಿಯೂ ಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೀನು ವಿದೇಶದ ಪಟ್ಟಣವನ್ನು ಕೆಡವಿಹಾಕಿರುವೆ. ಆ ಪಟ್ಟಣವು ಮಹಾಗೋಡೆಗಳಿಂದ ಸಂರಕ್ಷಿಸಲ್ಪಟ್ಟದ್ದಾಗಿತ್ತು. ಆದರೆ ಈಗ ಅದು ಕೇವಲ ಕಲ್ಲುಗಳ ರಾಶಿ. ಅರಮನೆಯು ಕೆಡವಲ್ಪಟ್ಟಿದೆ. ಅದನ್ನು ತಿರುಗಿ ಕಟ್ಟಲು ಸಾಧ್ಯವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಏಕೆಂದರೆ ನೀವು ದುರ್ಗವನ್ನು ನಾಶಪಡಿಸಿ, ಪಟ್ಟಣವನ್ನು ಹಾಳುದಿಬ್ಬವನ್ನಾಗಿಯೂ ವಿದೇಶಿಯರ ಕೋಟೆಯನ್ನು ಯಾರೂ ಎಂದಿಗೂ ಕಟ್ಟಬಾರದಂತೆ ಮಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 25:2
24 ತಿಳಿವುಗಳ ಹೋಲಿಕೆ  

ದಮಸ್ಕದ ವಿಷಯವಾದ ದೈವೋಕ್ತಿ. “ಆಹಾ, ದಮಸ್ಕವು ಇನ್ನು ಪಟ್ಟಣವಾಗಿರದೇ ಹಾಳು ದಿಬ್ಬವಾಗಿರುವುದು.


ಅವರ ಕೋಟೆಗಳಲ್ಲಿ ತೋಳಗಳೂ, ಅರಮನೆಗಳಲ್ಲಿ ನರಿಗಳೂ ಕೂಗುವವು. ಸಮಯವು ಹತ್ತಿರವಾಗಿದೆ. ಇನ್ನು ಆ ದಿನಗಳು ಬರುವುದಕ್ಕೆ ತಡವಾಗುವುದಿಲ್ಲ.


ದುರ್ಗಮವಾಗಿಯೂ, ಎತ್ತರವಾಗಿಯೂ ಇರುವ ನಿನ್ನ ಕೋಟೆಗಳನ್ನು ಆತನು ಕೆಡವಿ, ತಗ್ಗಿಸಿ, ನೆಲ ಸಮಮಾಡಿ ಧೂಳಿಗೆ ತರುವನು.


ಅನಂತರ ಅವರು ತಮ್ಮ ತಲೆಗಳ ಮೇಲೆ ಮಣ್ಣನ್ನು ಸುರಿದುಕೊಂಡು, ‘ಅಯ್ಯೋ ಅಯ್ಯೋ ಸಮುದ್ರದ ಮೇಲೆ ಹಡಗುಗಳನ್ನು ಹೊಂದಿದವರೆಲ್ಲರೂ ಅವಳ ಅಮೂಲ್ಯ ದ್ರವ್ಯಗಳಿಂದಲೇ ಐಶ್ವರ್ಯವಂತರಾದರಲ್ಲಾ, ಇವಳು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ’” ಎಂದು ಗೋಳಾಡುತ್ತಾ ದುಃಖಿಸುವರು.


ಮೂಲೆಗಲ್ಲಿಗಾಗಲಿ ಅಥವಾ ಅಸ್ತಿವಾರಕ್ಕಾಗಲಿ ಯಾರೂ ನಿನ್ನಿಂದ ಕಲ್ಲನ್ನು ತೆಗೆಯರು, ನೀನು ನಿತ್ಯನಾಶಕ್ಕೆ ಗುರಿಯಾಗುವಿ, ಇದು ಯೆಹೋವನ ನುಡಿ” ಎಂಬುದೇ.


ಇಗೋ, ಕಸ್ದೀಯರ ದೇಶವು! ಈ ಜನಾಂಗವು ನಿರ್ನಾಮವಾಯಿತು. ಅಶ್ಶೂರ್ಯರು ಈ ದೇಶವನ್ನು ಕಾಡುಮೃಗಗಳಿಗೆ ಈಡುಮಾಡಿದರು. ಗೋಪುರಗಳನ್ನು ಕಟ್ಟಿಕೊಂಡು ಅದರ ಕೋಟೆಗಳನ್ನು ಕೆಡವಿ ಅದನ್ನು ನಾಶಪಡಿಸಿದರು.


ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ.” ಅವನು ಕೂಗಿ, “ಬಾಬೆಲ್ ಬಿದ್ದು ಹೋಯಿತು, ಬಾಬೆಲ್ ಬಿದ್ದು ಹೋಯಿತು! ಅದರ ದೇವತೆಗಳ ವಿಗ್ರಹಗಳನ್ನು ಒಡೆದು ನೆಲಸಮ ಮಾಡಿಬಿಟ್ಟರು” ಎಂದು ಹೇಳುವನು.


“ನಾನು ಆ ಪ್ರದೇಶವನ್ನು ಜವುಗು ನೆಲವನ್ನಾಗಿಯೂ, ಗೂಬೆಗಳ ಸೊತ್ತನ್ನಾಗಿಯೂ ಮಾಡುವೆನು. ನಾಶವೆಂಬ ಬರಲಿನಿಂದ ಗುಡಿಸಿಬಿಡುವೆನು” ಎಂದು ಸೇನಾಧೀಶ್ವರನಾದ ಯೆಹೋವನು ಹೇಳುತ್ತಾನೆ.


ಅದರಲ್ಲಿರುವ ಎಲ್ಲಾ ಸಾಮಾನುಗಳನ್ನು ಗ್ರಾಮಮಧ್ಯದಲ್ಲಿ ಕೂಡಿಸಿ, ಊರನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಿಮ್ಮ ದೇವರಾದ ಯೆಹೋವನಿಗೋಸ್ಕರ ಸಂಪೂರ್ಣವಾಗಿ ಸುಟ್ಟುಬಿಡಬೇಕು. ಅದು ಪುನಃ ಕಟ್ಟಲ್ಪಡದೆ ಯಾವಾಗಲೂ ಹಾಳುದಿಬ್ಬವಾಗಿರಬೇಕು.


ಎಫ್ರಾಯೀಮಿಗೆ ರಕ್ಷಣೆಯಾಗಿರುವ ಕೋಟೆಯೂ, ದಮಸ್ಕವು ನಡೆಸುವ ರಾಜ್ಯಾಧಿಕಾರವೂ ಇಲ್ಲವಾಗುವವು. ಅರಾಮ್ಯರಲ್ಲಿ ಉಳಿದವರು ಇಸ್ರಾಯೇಲರ ಮಕ್ಕಳ ವೈಭವದಂತೆ ಇರುವರು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಇಗೋ, ಯಾರೂ ಕಟ್ಟದ ಹಾಗೆ ಕೆಡವಿಬಿಡುವನು, ಯಾರೂ ಬಿಡಿಸದಂತೆ ಸೆರೆಹಾಕುವನು.


ಯೆಹೋವನು ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ. ಕಾನಾನಿನ ದುರ್ಗಗಳನ್ನು ನಾಶಮಾಡಲು ಅದರ ವಿಷಯವಾಗಿ ಯೆಹೋವನು ಅಪ್ಪಣೆಕೊಟ್ಟಿದ್ದಾನೆ.


ಆತನು ಹೆಮ್ಮೆಯಿಂದ ವಾಸಿಸುವವರನ್ನು ಇಳಿಸಿದ್ದಾನೆ. ಅವರ ಉನ್ನತ ಪಟ್ಟಣವನ್ನು ತಗ್ಗಿಸಿದ್ದಾನೆ. ಅದನ್ನು ಕೆಡವಿ, ನೆಲಸಮಮಾಡಿ ಧೂಳಿಗೆ ತಂದಿದ್ದಾನೆ.


ಕೋಟೆಕೊತ್ತಲದ ಪಟ್ಟಣವು ಹಾಳಾಗಿ, ಕಾಡಿನಂತೆ ಜನರಿಲ್ಲದೆ ಶೂನ್ಯ ನಿವಾಸ ಸ್ಥಾನವಾಗಿದೆ; ಅಲ್ಲಿ ಕರುಗಳು ಮೇದು ಮಲಗುವುದು, ಅಲ್ಲಿನ ಚಿಗುರುಗಳನ್ನು ತಿಂದುಬಿಡುವುದು.


ಅರಮನೆಯು ಪಾಳುಬೀಳುವುದು, ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವುದು, ಓಫೆಲ್ ಗುಡ್ಡವೂ, ಗೋಪುರವೂ ಶಾಶ್ವತವಾದ ಗುಹೆಗಳಾಗಿಯೂ, ಕಾಡುಕತ್ತೆಗಳಿಗೆ ಉಲ್ಲಾಸಕರವಾದ ಸ್ಥಳವಾಗಿಯೂ, ದನಕುರಿಗಳ ಹಿಂಡುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುದು.


ಆದರೆ ಕಲ್ಮಳೆ ಸುರಿಯಲು ವನವು ಹಾಳಾಗುವುದು, ಪಟ್ಟಣವು ನೆಲಸಮವಾಗುವುದು.


ಅಲ್ಲಿನ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವವು, ಅದರ ಕೋಟೆಗಳಲ್ಲಿ ಮುಳ್ಳುಗಿಡಗಳೂ, ದತ್ತೂರಿಯೂ ಹಬ್ಬಿಕೊಳ್ಳುವವು. ಅದು ನರಿಗಳಿಗೆ ಗುಹೆಯಾಗಿಯೂ, ಉಷ್ಟ್ರಪಕ್ಷಿಗಳಿಗೆ ನಿವಾಸವಾಗಿಯೂ ಇರುವುದು.


ಇದನ್ನು ನೀನು ಕೇಳಲಿಲ್ಲವೋ? ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದೆನು. ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದುದರಿಂದ ಕೋಟೆಕೊತ್ತಲುಗಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವುದು ನಿನಗೆ ಸಾಧ್ಯವಾಯಿತು.


ನಾನು ಯೆರೂಸಲೇಮನ್ನು ಹಾಳು ದಿಬ್ಬವನ್ನಾಗಿಯೂ, ನರಿಗಳ ಹಕ್ಕೆಯನ್ನಾಗಿಯೂ ಮಾಡುವೆನು ಮತ್ತು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ಯೆಹೋವನು ಹೇಳಿದ್ದಾನಲ್ಲಾ.


ಅದು ಎಂದಿಗೂ ನಿವಾಸ ಸ್ಥಳವಾಗದು. ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಯಾವ ಅರಬಿಯನೂ ಗುಡಾರ ಹಾಕನು ಅಥವಾ ಕುರುಬರು ಮಂದೆಯನ್ನು ತಂಗಿಸರು.


ಕಾಡು ಮೃಗಗಳು ಅಲ್ಲಿ ಮಲಗುವವು. ಅವರ ಮನೆಗಳು ಗೂಬೆಗಳಿಂದ ತುಂಬಿರುವವು. ಅಲ್ಲಿ ಉಷ್ಟ್ರಪಕ್ಷಿಗಳು ವಾಸಿಸುವವು ಮತ್ತು ಕಾಡಿನ ಟಗರುಗಳು ಅಲ್ಲಿ ಕುಣಿದಾಡುವವು.


ಹಾಳುಪಟ್ಟಣವು ಬಿದ್ದುಹೋಗಿದೆ, ಯಾರೂ ಹೋಗದಂತೆ ಪ್ರತಿಯೊಂದು ಮನೆಯೂ ಮುಚ್ಚಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು