Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 26:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದುಷ್ಟರನ್ನು ಕರುಣಿಸಿದರೂ, ಅವರು ಧರ್ಮಜ್ಞಾನವನ್ನು ಪಡೆಯರು; ಯೆಹೋವನ ಮಹಿಮೆಯನ್ನು ಲಕ್ಷಿಸದೆ ಯಥಾರ್ಥರ ದೇಶದಲ್ಲಿಯೂ ಅನ್ಯಾಯವನ್ನು ಆಚರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ದಯೆತೋರಿದರೂ ಕಲಿಯನು ದುಷ್ಟನು ಆ ನ್ಯಾಯನೀತಿಯನು ಧರ್ಮಕ್ಷೇತ್ರದೊಳು ಸಹ ಗೈವನು ಅಕ್ರಮವನು ಗೌರವಿಸನು ಸರ್ವೇಶ್ವರನ ಮಹಿಮೆಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದುಷ್ಟರನ್ನು ಕರುಣಿಸಿದರೂ ಅವರು ಧರ್ಮಜ್ಞಾನವನ್ನು ಪಡೆಯರು; ಯೆಹೋವನ ಮಹಿಮೆಯನ್ನು ಲಕ್ಷಿಸದೆ ಯಥಾರ್ಥವಂತರ ದೇಶದಲ್ಲಿಯೂ ಅನ್ಯಾಯವನ್ನಾಚರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದುಷ್ಟರಿಗೆ ದಯೆತೋರಿಸಿದರೆ ಅವರು ಸುಕಾರ್ಯಗಳನ್ನು ಮಾಡಲು ಕಲಿಯುವುದಿಲ್ಲ. ದುಷ್ಟರು ಯಥಾರ್ಥರ ಲೋಕದಲ್ಲಿ ಜೀವಿಸಿದರೂ ಅವರು ದುಷ್ಕೃತ್ಯಗಳನ್ನೇ ಮಾಡುವರು. ಆ ದುಷ್ಟರು ಯೆಹೋವನ ಮಹತ್ವವನ್ನು ಎಂದೂ ಗಮನಿಸಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದುಷ್ಟನಿಗೆ ಕನಿಕರ ತೋರಿಸಿದಾಗ್ಯೂ ನೀತಿಯನ್ನು ಅವನು ಕಲಿಯಲಾರನು. ಯಥಾರ್ಥವಂತನ ದೇಶದಲ್ಲಿ ಅವನು ಅನ್ಯಾಯವನ್ನು ಆಚರಿಸುವನು ಮತ್ತು ಯೆಹೋವ ದೇವರ ಮಹತ್ವವನ್ನು ಲಕ್ಷಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 26:10
36 ತಿಳಿವುಗಳ ಹೋಲಿಕೆ  

ನನ್ನ ಕಡೆಯಿಂದ ತಿರಿಗಿಕೊಳ್ಳುವುದು ನನ್ನ ಜನರ ಗುಣವೇ; ಅವರನ್ನು ಮೇಲಕ್ಕೆ ಕರೆಯುವವರು ಇದ್ದರೂ, ಮೇಲಕ್ಕೆತ್ತುವವರು ಯಾರೂ ಇಲ್ಲ.


ಜಾರತ್ವವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು, ಆದರೆ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಳಿಗೆ ಮನಸ್ಸು ಬರಲಿಲ್ಲ.


ಏಳಿರಿ, ತೊಲಗಿರಿ, ಈ ದೇಶವು ನಿಮ್ಮ ಸುಖವಸತಿಯಾಗದು. ನಾಶನವನ್ನು, ವಿಪರೀತ ನಾಶನವನ್ನು ಉಂಟುಮಾಡುವ ಹೊಲಸು ಇದಕ್ಕೆ ಅಂಟಿಕೊಂಡಿದೆ.


ನಾನು ನಿಮ್ಮನ್ನು ಫಲವತ್ತಾದ ಸೀಮೆಗೆ ಕರೆತಂದು, ಅದರ ಫಲವನ್ನು ಮತ್ತು ಸಾರವನ್ನು ಅನುಭವಿಸುವ ಹಾಗೆ ಮಾಡಿದೆನು. ಆದರೆ ನೀವು ಆ ನನ್ನ ದೇಶವನ್ನು ಪ್ರವೇಶಿಸಿ, ಅದನ್ನು ಹೊಲೆ ಮಾಡಿ, ನನ್ನ ಸ್ವತ್ತನ್ನು ಅಸಹ್ಯಪಡಿಸಿದಿರಿ.


ಇದಲ್ಲದೆ ನಾನು ಲೋಕದಲ್ಲಿ ದೃಷ್ಟಿಸಿ ನ್ಯಾಯಸ್ಥಾನದಲ್ಲಿಯೂ, ಧರ್ಮಸ್ಥಾನದಲ್ಲಿಯೂ ಅಧರ್ಮವಿರುವುದೆಂದು ನೋಡಿದೆನು.


ಮೂಢರು ತಮ್ಮ ಉದಾಸೀನತೆಯಿಂದಲೇ ಹತರಾಗುವರು, ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೇ ನಾಶವಾಗುವರು.


ಆತನು ಅವರನ್ನು ಅನೇಕಾವರ್ತಿ ರಕ್ಷಿಸಿದರೂ, ಅವರು ತಮ್ಮ ಆಲೋಚನೆಯನ್ನೇ ಅನುಸರಿಸಿ ಅವಿಧೇಯರಾದರು; ತಮ್ಮ ಅಕ್ರಮದಿಂದಲೇ ಹೀನಸ್ಥಿತಿಗೆ ಬಂದರು.


ಆದರೆ ಯೆಶುರೂನು ಚೆನ್ನಾಗಿ ತಿಂದು, ಕೊಬ್ಬಿ, ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿದನು.


ಆದರೆ ಆನೆಕಲ್ಲು ಮಳೆ, ಗುಡುಗು ನಿಂತುಹೋದದ್ದನ್ನು ಫರೋಹನು ಕಂಡಾಗ ಅವನೂ, ಅವನ ಪರಿವಾರದವರೂ ತಮ್ಮ ಹೃದಯಗಳನ್ನು ಕಠಿಣಮಾಡಿಕೊಂಡು ಇನ್ನೂ ಪಾಪ ಮಾಡಿದರು.


ಆದರೆ ಫರೋಹನು ಕಪ್ಪೆಗಳ ಕಾಟವು ತೀರಿತೆಂದು ತಿಳಿದುಕೊಂಡಾಗ, ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು. ಯೆಹೋವನು ಹೇಳಿದಂತೆಯೇ ಅವನು, ಮೋಶೆ ಮತ್ತು ಆರೋನನ ಮಾತನ್ನು ಕೇಳದೆ ಹೋದನು.


ಆಹಾರವು ನಿನ್ನವರಿಗೆ ಸಿಕ್ಕಿದಾಗ ಹೊಟ್ಟೆತುಂಬಿಸಿಕೊಂಡರು; ಹೊಟ್ಟೆ ತುಂಬಿದಾಗ ಅವರ ಮನಸ್ಸು ಉಬ್ಬಿಕೊಂಡಿತು; ಇದರಿಂದ ನನ್ನನ್ನು ಮರೆತುಬಿಟ್ಟರು.


ಅವರು ಯೆಹೋವನ ದೇಶದಲ್ಲಿ ಇನ್ನು ವಾಸಿಸರು. ಎಫ್ರಾಯೀಮ್ಯರು ಐಗುಪ್ತಕ್ಕೆ ಹಿಂದಿರುಗುವರು, ಅಶ್ಶೂರದಲ್ಲಿ ಅವರು ಹೊಲಸಾದ ಆಹಾರವನ್ನು ತಿನ್ನುವರು.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವಾಗ ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ, ‘ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ’ ಎಂದು ಮತ್ತೆ ಮಾತನಾಡುವರು.


ಆ ದಿನದಲ್ಲಿ ದೊಡ್ಡ ಕೊಂಬನ್ನೂದಲು ಅಶ್ಶೂರ ದೇಶದಲ್ಲಿ ಹಾಳಾದವರೂ, ಐಗುಪ್ತದಲ್ಲಿ ದೇಶಭ್ರಷ್ಟರಾದವರೂ ಬಂದು ಪರಿಶುದ್ಧ ಪರ್ವತವಾದ ಯೆರೂಸಲೇಮಿನಲ್ಲಿ ಯೆಹೋವನನ್ನು ಆರಾಧಿಸುವರು.


ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ನಿಯಮಗಳನ್ನು ಬದಲಾಯಿಸಿ, ಶಾಶ್ವತವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಅವರ ಹೆಜ್ಜೆಯಿಂದ ಅಪವಿತ್ರವಾಯಿತು.


ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು. ಯೆಹೋವನ ಕೆಲಸವನ್ನೋ ಅವರು ಲಕ್ಷಿಸುವುದಿಲ್ಲ. ಆತನ ಕೈಕೆಲಸವನ್ನು ಆಲೋಚಿಸುವುದಿಲ್ಲ.


ಗವಿಯೊಳಗೆ ನುಗ್ಗು, ಯೆಹೋವನ ಭಯಂಕರತನಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಭೂಮಿಯಲ್ಲಿ ಅವಿತುಕೋ.


ನಿನ್ನ ಚಿತ್ತದಂತೆ ನಡೆಯಲು ನನಗೆ ಕಲಿಸು, ನನ್ನ ದೇವರು ನೀನಲ್ಲವೋ? ಶುಭಕಾರಿಯಾಗಿರುವ ನಿನ್ನ ಆತ್ಮನು ನನ್ನನ್ನು ಸಮದಾರಿಯಲ್ಲಿ ನಡೆಸಲಿ.


ಸಮುವೇಲನು, “ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಯೆಹೋವನು ನಿನಗೆ ಇಸ್ರಾಯೇಲ್ಯರಲ್ಲಿ ರಾಜ್ಯಾಭಿಷೇಕ ಮಾಡಿದ್ದರಿಂದ ನೀನು ಎಲ್ಲಾ ಕುಲಗಳಿಗೆ ಶಿರಸ್ಸನ್ನಾಗಿ ಮಾಡಿದನು.


ಏಕೆಂದರೆ ನೀಚನು ನೀಚವಾಗಿ ಮಾತನಾಡುವನು. ಅವನ ಹೃದಯವು ಕೇಡನ್ನು ಕಲ್ಪಿಸಿ, ನಡೆಯದೆ ಇರುವುದನ್ನು ನಡಿಸಿ ಯೆಹೋವನಿಗೆ ವಿರುದ್ಧವಾಗಿ ಅಸತ್ಯವನ್ನಾಡಿ, ಹಸಿದವನ ಆಶೆಯನ್ನು ಬರಿದುಮಾಡಿ, ಬಾಯಾರಿದವನ ಪಾನವನ್ನು ತಪ್ಪಿಸುವುದು.


ಆಗ ಸೈತಾನನು ಯೇಸುವನ್ನು ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡು ಹೋಗಿ ದೇವಾಲಯದ ಗೋಪುರದ ಮೇಲೆ ನಿಲ್ಲಿಸಿ


ಆದರೂ ನೀನಾಗಲಿ, ನಿನ್ನ ಪರಿವಾರದವರಾಗಲಿ, ದೇವರಾಗಿರುವ ಯೆಹೋವನಿಗೆ ಆಗಲೂ ಭಯಪಡುವುದಿಲ್ಲವೆಂದು ಬಲ್ಲೆನು” ಎಂದನು.


ಅವರ ಅಪರಾಧಗಳು ಒಂದೊಂದಾಗಿ ಹೆಚ್ಚುತ್ತಾ ಬರಲಿ. ನಿನ್ನ ನೀತಿಯಲ್ಲಿ ಅವರಿಗೆ ಪಾಲುಕೊಡಬೇಡ.


ಮೋಸಗಾರನ ಆಯುಧಗಳು ಕೆಟ್ಟವುಗಳೇ, ದೀನದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ, ಅವರನ್ನು ಸುಳ್ಳುಮಾತುಗಳಿಂದ ಕೆಡಿಸುವುದಕ್ಕೆ ಕುಯುಕ್ತಿಗಳನ್ನು ಕಲ್ಪಿಸುವನು.


ಆದರೂ ಇಸ್ರಾಯೇಲರು ತಮ್ಮನ್ನು ಪಾಪಕ್ಕೆ ಪ್ರೇರೇಪಿಸಿದ ಯಾರೊಬ್ಬಾಮನ ಮನೆಯವರ ಮಾರ್ಗದಲ್ಲಿ ನಡೆದರು. ಅದನ್ನು ಬಿಡಲೇ ಇಲ್ಲ. ಸಮಾರ್ಯದಲ್ಲಿ ಅಶೇರ ವಿಗ್ರಹಸ್ತಂಭವು ಇದ್ದೇ ಇತ್ತು.


ಅಪರಾಧಕ್ಕೆ ವಿಧಿಸಿದ ದಂಡನೆಯು ಕೂಡಲೇ ನಡೆಯದಿರುವ ಕಾರಣ ಅಪರಾಧ ಮಾಡಬೇಕೆಂಬ ಯೋಚನೆಯು ಮನುಷ್ಯರ ಹೃದಯದಲ್ಲಿ ತುಂಬಿ ತುಳುಕುವುದು.


ಅಯ್ಯೋ, ನಂಬಿಕೆಯುಳ್ಳ ನಗರಿಯು ಸೂಳೆಯಾದಳಲ್ಲಾ! ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದ ನಗರ ಈಗ ಕೊಲೆಪಾತಕರಿಗೆ ನೆಲೆಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು