ಯೆಶಾಯ 26:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಮೃತರಾದ ನಿನ್ನ ಜನರು ಬದುಕುವರು, ನಮ್ಮ ಹೆಣಗಳು ಜೀವದಿಂದ ಏಳುವವು, ಧೂಳಿನ ನಿವಾಸಿಗಳೇ, ಎಚ್ಚರಗೊಂಡು ಹರ್ಷಧ್ವನಿಗೈಯಿರಿ! ಯೆಹೋವನೇ, ನೀನು ಸುರಿಸುವ ಇಬ್ಬನಿಯು ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಗೆ ಹಾಕುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಬದುಕುವರು ನಿಧನರಾದ ನಮ್ಮ ಜನರು ಜೀವದಿಂದೇಳುವುವು ನಮ್ಮವರ ಶವಗಳು. ಎದ್ದು ಹರ್ಷಧ್ವನಿಗೈಯಲಿ ನೆಲದಲಿ ಬಿದ್ದಿರುವವರು. ನೀ ಸುರಿಸುವ ಇಬ್ಬನಿ ಜ್ಯೋತಿರ್ಮಯ, ಆದುದರಿಂದ ಸತ್ತವರು ಪುನರುತ್ಥಾನಹೊಂದುವರು ನೆಲದಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಜೀವದಿಂದೇಳುವವು, ಮಣ್ಣಿನಲ್ಲಿ ಪವಳಿಸಿರುವವರೇ, ಎಚ್ಚತ್ತು ಹರ್ಷಧ್ವನಿಗೈಯಿರಿ! [ಯೆಹೋವನೇ,] ನೀನು ಸುರಿಯುವ ಇಬ್ಬನಿಯು ಜ್ಯೋತಿರ್ಮಯವಾದದ್ದು, ಭೂವಿುಯು ಸತ್ತವರನ್ನು ಹೊರಪಡಿಸುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆದರೆ ಯೆಹೋವನು ಹೇಳುವುದೇನೆಂದರೆ, “ನಿನ್ನ ಜನರು ಸತ್ತಿದ್ದಾರೆ. ಆದರೆ ಅವರು ಮತ್ತೆ ಬದುಕುವರು. ನನ್ನ ಜನರ ದೇಹಗಳು ಸತ್ತವರೊಳಗಿಂದ ಏಳುವವು. ಭೂಮಿಯ ಮೇಲೆ ಸತ್ತಿರುವ ಜನರೇ, ಎದ್ದುನಿಂತು ಸಂತೋಷಿಸಿರಿ. ನಿಮ್ಮನ್ನು ಆವರಿಸಿದ ಮಂಜು ಮುಂಜಾನೆಯ ಬೆಳಕಿನಂತೆ ಪ್ರಕಾಶಿಸುತ್ತದೆ. ಭೂಮಿಯು ತನ್ನಲ್ಲಿರುವ ಸತ್ತವರನ್ನು ಒಪ್ಪಿಸಿಕೊಡುವಾಗ ಪ್ರಾರಂಭವಾಗುವ ಹೊಸ ದಿನವನ್ನು ಅದು ಸೂಚಿಸುವದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆದರೆ ಮೃತರಾದ ನಿನ್ನ ಜನರು ಬದುಕುವರು. ಅವರ ದೇಹಗಳು ಏಳುವುವು. ಧೂಳಿನ ನಿವಾಸಿಗಳೇ, ಎಚ್ಚೆತ್ತು ಹರ್ಷಧ್ವನಿಗೈಯಿರಿ! ಯೆಹೋವ ದೇವರೇ, ನಿಮ್ಮ ಇಬ್ಬನಿ ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಪಡಿಸುವುದು. ಅಧ್ಯಾಯವನ್ನು ನೋಡಿ |