Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 26:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಬಾಗಿಲುಗಳನ್ನು ತೆರೆಯಿರಿ! ಧರ್ಮಸತ್ಯಗಳನ್ನು ಕೈಗೊಳ್ಳುವ ಜನಾಂಗವು ಒಳಗೆ ಪ್ರವೇಶಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ತೆರೆಯಿರಿ ನಗರ ದ್ವಾರಗಳನು, ಪ್ರವೇಶಿಸಲಿ ವಿಶ್ವಾಸವುಳ್ಳ ಸಜ್ಜನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಬಾಗಿಲುಗಳನ್ನು ತೆರೆಯಿರಿ! ಧರ್ಮಸತ್ಯಗಳನ್ನು ಕೈಕೊಳ್ಳುವ ಜನಾಂಗವು ಪ್ರವೇಶಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದ್ವಾರಗಳನ್ನು ತೆರೆಯಿರಿ. ಒಳ್ಳೆಯ ಜನರು ಅದರಲ್ಲಿ ಪ್ರವೇಶಿಸುವರು. ಅವರು ದೇವರ ನಿಯಮಗಳನ್ನು ಅನುಸರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಬಾಗಿಲುಗಳನ್ನು ತೆರೆಯಿರಿ. ಸತ್ಯವನ್ನು ಕೈಗೊಳ್ಳುವ ನೀತಿಯುಳ್ಳ ಜನಾಂಗವು ಒಳಗೆ ಪ್ರವೇಶಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 26:2
25 ತಿಳಿವುಗಳ ಹೋಲಿಕೆ  

ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.


ಇದು ಯೆಹೋವನ ಮಂದಿರದ್ವಾರವು; ಇದರೊಳಗೆ ಪ್ರವೇಶಿಸತಕ್ಕವರು ನೀತಿವಂತರೇ.


ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.


ಜನಾಂಗಗಳ ಐಶ್ವರ್ಯವನ್ನು ನಿನ್ನಲ್ಲಿಗೆ ತರುತ್ತಿರುವರು. ಅವುಗಳ ಅರಸರು ಮೆರವಣಿಗೆಯಾಗಿ ಬರುತ್ತಿರುವರು; ಇದರಿಂದ ನಿನ್ನ ಬಾಗಿಲುಗಳು ಹಗಲಿರುಳೂ ಮುಚ್ಚದೆ ಸದಾ ತೆರೆದಿರುವವು.


ಊರ ಬಾಗಿಲುಗಳಲ್ಲಿ ಹಾದು ಬನ್ನಿರಿ, ಹಾದು ಬನ್ನಿರಿ, ಜನರಿಗೆ ದಾರಿಯನ್ನು ಸರಿಮಾಡಿರಿ, ರಾಜಮಾರ್ಗವನ್ನು ಎತ್ತರಿಸಿರಿ, ಸರಿಪಡಿಸಿರಿ. ಕಲ್ಲುಗಳನ್ನು ತೆಗೆದುಹಾಕಿರಿ, ಜನಾಂಗಗಳಲ್ಲಿ ಧ್ವಜವನ್ನೆತ್ತಿರಿ!


ಜನಾಂಗಗಳು ನಿನ್ನ ಧರ್ಮವನ್ನು, ಸಕಲ ರಾಜರು ನಿನ್ನ ವೈಭವವನ್ನು ನೋಡುವರು; ಯೆಹೋವನ ಬಾಯಿ ನೇಮಿಸಿದ ಹೊಸ ಹೆಸರು ನಿನಗೆ ದೊರೆಯುವುದು.


ಅವರೆಲ್ಲರೂ ದೇವರನ್ನು ಕೊಂಡಾಡುವವರಾಗಿಯೂ, ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ಪ್ರತಿದಿನ ಅವರೊಂದಿಗೆ ಸಭೆಗೆ ಸೇರಿಸುತ್ತಿದ್ದನು.


ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ, ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.


ಧರ್ಮವೇ ನಿನಗೆ ಆಧಾರ; ನೀನು ಹಿಂಸೆಗೆ ದೂರವಾಗಿರುವಿ, ನಿನಗೆ ಹೆದರಿಕೆ ಇರುವುದಿಲ್ಲ, ನಾಶನವು ದೂರವಾಗಿರುವುದು, ನಿನ್ನ ಹತ್ತಿರಕ್ಕೆ ಬಾರದು.


ಆಗ ನೀನು ಆರಿಸಿಕೊಂಡ ಪ್ರಜೆಯ ಏಳಿಗೆಯನ್ನು ನೋಡಿ, ನಾನೂ ಅವರೊಂದಿಗೆ ಸಂತೋಷಿಸುವೆನು; ನಿನ್ನ ಸ್ವಕೀಯರೊಂದಿಗೆ ನಾನೂ ಹಿಗ್ಗುವೆನು.


ನೀವು ನನಗೆ ಶ್ರೇಷ್ಠ ಯಾಜಕರೂ, ಪರಿಶುದ್ಧ ಜನರೂ ಆಗಿರುವಿರಿ’ ನೀನು ಇಸ್ರಾಯೇಲರಿಗೆ ಹೇಳಬೇಕಾದ ಮಾತುಗಳು ಇವೇ” ಅಂದನು.


ಅದರ ಬೆಳಕಿನಿಂದ ಜನಾಂಗಗಳವರು ನಡೆದಾಡುವರು. ಭೂರಾಜರು ತಮ್ಮ ವೈಭವವನ್ನು ಅದರೊಳಗೆ ತರುವರು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ಮುಂದೆ ಜನಾಂಗಗಳೂ, ದೊಡ್ಡ ಪಟ್ಟಣಗಳ ನಿವಾಸಿಗಳೂ ಬರುವರು;


ಇದನ್ನು ಆಚರಿಸುವಾಗ ನಿಮಗೆ ಬೆಳಕು ಉದಯದಂತೆ ಮೂಡಿ ಬರುವುದು, ನಿಮ್ಮ ಕ್ಷೇಮವು ಬೇಗನೆ ಬೆಳೆಯುವುದು; ನಿಮ್ಮ ಧರ್ಮವು ನಿಮಗೆ ಮುಂಬಲವಾಗಿರುವುದು, ಯೆಹೋವನ ಮಹಿಮೆಯು ನಿಮಗೆ ಹಿಂಬಲವಾಗಿರುವುದು.


ಪ್ರಿಯರೇ, ನಮಗೆ ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನ ಮಾಡುತ್ತಿದ್ದಾಗ, ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ, ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.


ಆದರೂ ನಾವು ದೇವರ ವಾಗ್ದಾನದ ಪ್ರಕಾರ ನೂತನ ಆಕಾಶ ಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಎದುರುನೋಡುತ್ತಾ ಇದ್ದೇವೆ. ಅವುಗಳಲ್ಲಿ ನೀತಿಯು ವಾಸವಾಗಿರುವುದು.


ದ್ವಾರಗಳೇ, ಉನ್ನತವಾಗಿರ್ರಿ! ಪುರಾತನವಾದ ಕದಗಳೇ ತೆರೆದುಕೊಂಡಿರ್ರಿ! ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ.


ನೀತಿದ್ವಾರಗಳನ್ನು ತೆರೆಯಿರಿ; ನಾನು ಒಳಗೆ ಪ್ರವೇಶಿಸಿ ಯೆಹೋವನನ್ನು ಕೊಂಡಾಡುವೆನು.


ಇಸ್ರಾಯೇಲಿನ ಸಮಸ್ತ ಸಂತತಿಯವರೂ ಯೆಹೋವನ ಮೂಲಕ ಸತ್ಯವಂತರಾಗಿ ಆತನಲ್ಲಿ ಆನಂದಿಸುವರು” ಎಂದು ನನ್ನ ವಿಷಯವಾಗಿ ಜನರು ಅಂದುಕೊಳ್ಳುತ್ತಾರೆ.


ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ, ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ” ಎಂದು ಯೆಹೋವನು ಅನ್ನುತ್ತಾನೆ.


ನಿನ್ನ ದೇಶದಲ್ಲಿ ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು, ನಿನ್ನ ಪ್ರಾಂತ್ಯಗಳೊಳಗೆ ಭಂಗನಾಶನಗಳ ವಾರ್ತೆಯೇ ಕೇಳಿಬರುವುದಿಲ್ಲ; ಆಗ ದೇವರಕ್ಷಣೆಯು ನನ್ನ ಪೌಳಿಗೋಡೆಗಳು, ದೇವಸ್ತೋತ್ರವು ನನ್ನ ಬಾಗಿಲುಗಳು ಎಂದು ಅಂದುಕೊಳ್ಳುವಿ.


ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.


ಚೀಯೋನಿನ ಧರ್ಮವು ಪ್ರಕಾಶಗೊಳ್ಳುವ ತನಕ, ಯೆರೂಸಲೇಮಿನ ರಕ್ಷಣೆಯು ದೀವಿಟಿಗೆಯಂತೆ ಪ್ರಜ್ವಲಿಸುವವರೆಗೆ, ನಾನು ಮೌನವಾಗಿರದೆ ಚೀಯೋನಿನ ಹಿತವನ್ನು ಲಕ್ಷಿಸುತ್ತಿರುವೆನು; ಮೌನವಾಗಿರದೆ ಯೆರೂಸಲೇಮಿನ ಕ್ಷೇಮವನ್ನು ಚಿಂತಿಸುತ್ತಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು