Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 27:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವುದು, ಇಸ್ರಾಯೇಲು ಹೂಬಿಟ್ಟು ಚಿಗುರುವುದು, ಆ ವೃಕ್ಷವು ಭೂಮಂಡಲವನ್ನೆಲ್ಲಾ ಫಲದಿಂದ ತುಂಬಿಸುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮುಂಬರುವ ಕಾಲದಲಿ ಬೇರೂರುವುದು ಯಕೋಬ ಸಂತಾನ. ಚಿಗುರಿ ಹೂ ಬಿಡುವುದು ಇಸ್ರಯೇಲ್ ಮನೆತನ, ಆ ವೃಕ್ಷಫಲದಿಂದ ತುಂಬಿರುವುದು ಜಗದೆಲ್ಲ ಜನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವದು, ಇಸ್ರಾಯೇಲು ಹೂಬಿಟ್ಟು ಚಿಗುರುವದು, ಆ ವೃಕ್ಷವು ಭೂಮಂಡಲವನ್ನೆಲ್ಲಾ ಫಲದಿಂದ ತುಂಬಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಜನರು ನನ್ನ ಬಳಿಗೆ ಬರುವರು. ಆ ಜನರು ಮುಂದಿನ ಕಾಲದಲ್ಲಿ ಯಾಕೋಬನನ್ನು ಆಳವಾದ ಬೇರುಳ್ಳ ಗಿಡದಂತೆ ಬಲಶಾಲಿಯನ್ನಾಗಿ ಮಾಡುವರು. ಬೆಳೆದು ಹೂಬಿಡುವ ಗಿಡದಂತೆ ಅವರು ಇಸ್ರೇಲಿಗೆ ಮಾಡುವರು. ಹಣ್ಣುಗಳಂತೆ ಇಸ್ರೇಲರ ಮಕ್ಕಳು ಭೂಮಿಯ ಮೇಲೆ ತುಂಬಿಹೋಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವುದು. ಇಸ್ರಾಯೇಲು ಹೂ ಅರಳಿ ಚಿಗುರುವುದು. ಭೂಲೋಕವನ್ನೆಲ್ಲಾ ಫಲದಿಂದ ತುಂಬಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 27:6
21 ತಿಳಿವುಗಳ ಹೋಲಿಕೆ  

ತಪ್ಪಿಸಿಕೊಂಡು ಉಳಿದ ಯೆಹೂದ್ಯರು ದೇಶದಲ್ಲಿ ನೆಲೆಗೊಂಡು ಅಭಿವೃದ್ಧಿಯಾಗುವರು.


ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವರು; ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು” ಆಗ, ಸೇನಾಧೀಶ್ವರನಾದ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬುದು ನಿನಗೆ ಗೊತ್ತಾಗುವುದು.


ನಾನು ದೇಶದಲ್ಲಿ ಇಜ್ರೇಲನ್ನು ನನಗಾಗಿ ಬಿತ್ತಿಕೊಳ್ಳುವೆನು, ಲೋ ರುಹಾಮಳಿಗೆ ವಾತ್ಸಲ್ಯವನ್ನು ತೋರಿಸುವೆನು; ಲೋ ಅಮ್ಮಿಗೆ ‘ನೀನು ನನ್ನ ಪ್ರಜೆಯೇ’ ಎಂದು ಹೇಳುವೆನು. ಅವರು ನನ್ನನ್ನು ‘ನನ್ನ ದೇವರೇ’ ಎಂದು ಭಜಿಸುವರು” ಎಂದು ನುಡಿಯುತ್ತಾನೆ.


ಚಿಕ್ಕವನಿಂದ ಒಂದು ಕುಲವಾಗುವುದು, ಅಲ್ಪನಿಂದ ಬಲವಾದ ಜನಾಂಗವಾಗುವುದು. ಯೆಹೋವನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಲುಬೇಗನೆ ಉಂಟುಮಾಡುವೆನು.


ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.


ನಿಜವಾದ ಸುನ್ನತಿಯವರು ಯಾರೆಂದರೆ, ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ, ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ, ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವುಗಳೇ.


ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ವಂಶದವರಾಗಿ ಹಾಗೂ ದೇವರ ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.


ಅವುಗಳೊಳಗಿಂದ ಸ್ತೋತ್ರವೂ ಮತ್ತು ಸಂತೋಷದಿಂದ ನಲಿಯುವ ಧ್ವನಿಯೂ ಕೇಳಿಸುವವು. ನಾನು ಆ ಜನರನ್ನು ಹೆಚ್ಚಿಸುವೆನು, ಅವರು ಇನ್ನು ಅಲ್ಪರಾಗಿರರು, ಅವರನ್ನು ಘನಪಡಿಸುವೆನು, ಅವರು ಇನ್ನು ಹೀನರಾಗಿರರು.


ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ, ಅದೂ ಸಹ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ, ಉಳಿಯುವುದು ಬುಡ ಮಾತ್ರ” ಎಂದು ಉತ್ತರಕೊಟ್ಟನು.


ಸಿಡಿಲುಗಳು ಭೂಮಂಡಲದಲ್ಲೆಲ್ಲಾ ತಾನು ವಿಧಿಸುವುದನ್ನೇ ಮಾಡಲಿ ಎಂದು, ಅವುಗಳನ್ನು ನಡಿಸಿ ಸುತ್ತಮುತ್ತಲು ತಿರುಗಿಸುವನು.


ಆ ದಿನದಲ್ಲಿ ಯೆಹೋವನು ದಯಪಾಲಿಸಿದ ಬೆಳೆಯಿಂದ ಇಸ್ರಾಯೇಲರಲ್ಲಿ ಉಳಿದವರಿಗೆ ಸೌಂದರ್ಯವೂ, ಮಹಿಮೆಯೂ ಉಂಟಾಗುವವು. ದೇಶದಿಂದ ಫಲವೂ, ಉನ್ನತಿಯೂ, ಭೂಷಣವೂ ಲಭಿಸುವುದು.


ಅರಣ್ಯವೂ, ಮರುಭೂಮಿಯೂ ಆನಂದಿಸುವವು; ಒಣನೆಲವು ಹರ್ಷಿಸಿ ತಾವರೆಯಂತೆ ಕಳಕಳಿಸುವುದು.


ಅದು ಸಮೃದ್ಧಿಯಾಗಿ ಹೂಬಿಟ್ಟು, ಉತ್ಸಾಹ ಧ್ವನಿಮಾಡುವಷ್ಟು ಉಲ್ಲಾಸಿಸುವುದು. ಲೆಬನೋನಿನ ಮಹಿಮೆಯೂ, ಕರ್ಮೆಲಿನ ಮತ್ತು ಶಾರೋನಿನ ವೈಭವವೂ ಅದಕ್ಕೆ ದೊರೆಯುವವು; ಇವೆಲ್ಲಾ ಯೆಹೋವನ ಮಹಿಮೆಯನ್ನೂ, ನಮ್ಮ ದೇವರ ವೈಭವವನ್ನೂ ಕಾಣುವವು.


ಇಸ್ರಾಯೇಲಿನ ಪರ್ವತಗಳೇ, ನಿಮ್ಮ ಗಿಡಗಳ ಕೊಂಬೆಗಳನ್ನು ಹರಡಿಕೊಂಡು, ನನ್ನ ಜನರಾದ ಇಸ್ರಾಯೇಲರಿಗೆ ಫಲಕೊಡುವವು. ಏಕೆಂದರೆ ಅವರ ಬರುವಿಕೆಯು ಸಮೀಪವಾಗಿದೆ.


ನಿಮ್ಮಲ್ಲಿ ಬಹು ಜನರು ಅಂದರೆ ಇಸ್ರಾಯೇಲ್ ವಂಶದವರೆಲ್ಲರೂ ವಾಸಿಸುವಂತೆ ಮಾಡುವೆನು; ಪಟ್ಟಣಗಳು ಜನಭರಿತವಾಗುವವು, ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು