ಯೆಶಾಯ 28:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಹೀಗಿರಲು ಯೆಹೋವನ ಮಾತು ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ ಎಂಬುದಾಗಿ ಇವರಿಗೆ ಪರಿಣಮಿಸುವುದು; ಇವರು ನಡೆದು ಹಿಂದೆ ಬಿದ್ದು ಭಂಗಪಡುವರು, ಬೋನಿಗೆ ಸಿಕ್ಕಿ ವಶವಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆದುದರಿಂದಲೇ ಸರ್ವೇಶ್ವರ ನಿಮಗೆ ;ಆಜ್ಞೆಯ ಮೇಲೆ ಅಜ್ಞೆ, ಸೂತ್ರದ ಮೇಲೆ ಸೂತ್ರ, ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ’ ಎಂದು ಹೇಳಿ ಪಾಠಕಲಿಸುವರು. ಆಗ ನೀವು ನಡೆ ನಡೆದೂ ಎಡವಿ ಬೀಳುವಿರಿ, ಗಾಯಗೊಳ್ಳುವಿರಿ. ಉರುಲಿಗೆ ಸಿಕ್ಕಿಬೀಳುವಿರಿ, ಬಂಧನಕ್ಕೊಳಗಾಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಹೀಗಿರಲು ಯೆಹೋವನ ಮಾತು ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ ಎಂಬದಾಗಿ ಇವರಿಗೆ ಪರಿಣವಿುಸುವದು; ಇವರು ನಡೆದು ಹಿಂದೆಬಿದ್ದು ಭಂಗಪಡುವರು, ಬೋನಿಗೆ ಸಿಕ್ಕಿ ವಶವಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆದ್ದರಿಂದ ಆತನ ಮಾತು ಅವರಿಗೆ ಪರಭಾಷೆಯಂತೆ ಕೇಳಿಸುವುದು. “ಸಾ ಲಸಾವ್ ಸಾ ಲಸಾವ್ ಖಾವ್ ಲಖಾವ್ ಖಾವ್ ಲಖಾವ್ ಜೆಯಿರ್ ಶಾಮ್ ಜೆಯಿರ್ ಶಾಮ್.” ಜನರು ತಮ್ಮ ಇಷ್ಟಪ್ರಕಾರ ನಡೆದರು. ಆದ್ದರಿಂದ ಅವರು ಸೋಲಿಸಲ್ಪಟ್ಟರು. ಅವರು ಉರುಲಿಗೆ ಸಿಕ್ಕಿ ಹಾಕಿಕೊಂಡು ಹಿಡಿಯಲ್ಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ಯೆಹೋವ ದೇವರು ಅವರಿಗೆ ಹೀಗೆ ಹೇಳಿದರು: ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ ಇದರಿಂದ ಅವರು ಎಡವಿಬಿದ್ದು ಗಾಯಗೊಳ್ಳಬಹುದು. ಮತ್ತು ಬಲೆಯಲ್ಲಿ ಸಿಕ್ಕಿ ಬೀಳುವರು. ಅಧ್ಯಾಯವನ್ನು ನೋಡಿ |