Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 28:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದುದರಿಂದ ಯೆರೂಸಲೇಮಿನ ಈ ಜನರನ್ನು ಆಳುವ ಧರ್ಮನಿಂದಕರೇ, ಯೆಹೋವನ ಮಾತನ್ನು ಕೇಳಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆದಕಾರಣ, ಜೆರುಸಲೇಮಿನ ಜನರನ್ನಾಳುವ ಧರ್ಮನಿಂದಕರೇ, ಸರ್ವೇಶ್ವರ ಸ್ವಾಮಿಯ ಮಾತನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದಕಾರಣ ಯೆರೂಸಲೇವಿುನ ಈ ಜನರನ್ನಾಳುವ ಧರ್ಮನಿಂದಕರೇ, ಯೆಹೋವನ ಮಾತನ್ನು ಕೇಳಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದಕಾರಣ ಜೆರುಸಲೇಮಿನಲ್ಲಿರುವ ಅಧಿಪತಿಗಳೇ, ಯೆಹೋವನ ಸಂದೇಶವನ್ನು ನೀವು ಕೇಳಬೇಕು. ಆದರೆ ನೀವು ಅದನ್ನು ಕೇಳಲು ನಿರಾಕರಿಸುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದಕಾರಣ ಯೆರೂಸಲೇಮಿನಲ್ಲಿರುವ ಈ ಜನರನ್ನು ಆಳುವ ಹಾಸ್ಯದ ಜನರಾದ ನೀವು ಯೆಹೋವ ದೇವರ ಮಾತನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 28:14
16 ತಿಳಿವುಗಳ ಹೋಲಿಕೆ  

ಏಕೆಂದರೆ ಭಯಂಕರರು ನಿಶ್ಶೇಷವಾಗುವರು, ಧರ್ಮನಿಂದಕರು ನಿರ್ನಾಮವಾಗುವರು.


ಆದುದರಿಂದ, ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಡಿರಿ; ಭೂಮಂಡಲದಲ್ಲೆಲ್ಲಾ ನಿಶ್ಚಿತಪ್ರಳಯವಾಗಲಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ನುಡಿಯುವುದನ್ನು ಕೇಳಿದ್ದೇನೆ.


ಸೊದೋಮಿನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ. ಗೊಮೋರದ ಪ್ರಜೆಗಳೇ ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ.


“‘ಎಲೈ, ತಿರಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿಹೋಗಿರಿ. ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಸ್ವಲ್ಪವೂ ನಂಬುವುದಿಲ್ಲ’” ಎಂಬುದೇ ಎಂದು ಹೇಳಿದನು.


ನಮ್ಮ ರಾಜನ ದಿನದಲ್ಲಿ ದ್ರಾಕ್ಷಾರಸದ ಉಷ್ಣವು ದೇಶಾಧಿಪತಿಗಳ ತಲೆಗೇರಲು ಆರಂಭವಾಯಿತು; ರಾಜನು ಆ ತುಂಟರ ಕೈಯ ಮೇಲೆ ಕೈ ಹಾಕಿದನು.


ನನ್ನ ಕಿವಿಯಲ್ಲಿ ಸೇನಾಧೀಶ್ವರನಾದ ಯೆಹೋವನು ಹೇಳುವುದೇನೆಂದರೆ, ಸೊಗಸಾದ ಅನೇಕ ದೊಡ್ಡ ಮನೆಗಳಲ್ಲಿ ಜನರು ವಾಸಮಾಡದೆ ಅವು ಖಂಡಿತವಾಗಿ ಹಾಳು ಬೀಳುವುವು.


ಧರ್ಮನಿಂದಕರು ಪಟ್ಟಣಕ್ಕೆ ಬೆಂಕಿಯನ್ನು ಹತ್ತಿಸುವರು, ಜ್ಞಾನಿಗಳೋ ರೋಷಾಗ್ನಿಯನ್ನು ಆರಿಸುವರು.


ಯಾರು ಧರ್ಮವನ್ನು ತಿರಸ್ಕರಿಸುವರೋ ಅವರನ್ನು ಆತನು ತಿರಸ್ಕರಿಸುವನು. ದೀನರಿಗಾದರೋ ತನ್ನ ಕೃಪೆಯನ್ನು ಅನುಗ್ರಹಿಸುವನು.


“ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವುದಕ್ಕೆ ಎಷ್ಟುಕಾಲ ಇಷ್ಟಪಡುವರು? ಜ್ಞಾನಹೀನರು ತಿಳಿವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?


ನನ್ನ ಪ್ರಜೆಗಳನ್ನು ಬಾಲಕರು ಬಾಧಿಸುವರು. ಸ್ತ್ರೀಯರು ಅವರನ್ನು ಆಳುವರು. ನನ್ನ ಪ್ರಜೆಗಳೇ, ನಿಮ್ಮನ್ನು ನಡೆಸುವವರು ದಾರಿತಪ್ಪಿಸುವವರಾಗಿದ್ದಾರೆ. ನೀವು ನಡೆಯತಕ್ಕ ದಾರಿಯನ್ನು ಹಾಳುಮಾಡಿದ್ದಾರೆ.


ಕಿವಿಗೊಟ್ಟು ಕೇಳಿರಿ, ಹೆಮ್ಮೆಪಡಬೇಡಿರಿ; ಯೆಹೋವನೇ ಮಾತನಾಡಿದ್ದಾನೆ.


ಯೆಹೂದಿಯು ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಹಾಗೆಲ್ಲಾ ಅರಸನು ಆಯಾ ಭಾಗಗಳನ್ನು ಕತ್ತರಿಯಿಂದ ಕತ್ತರಿಸಿ ಸುರುಳಿಯು ಸಂಪೂರ್ಣವಾಗಿ ಸುಟ್ಟುಹೋಗುವ ತನಕ ಅದನ್ನು ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಹಾಕುತ್ತಾ ಬಂದನು.


ನೀವು ಲೋ ದೆಬಾರ್ ಪಟ್ಟಣದಲ್ಲಿ ಉಲ್ಲಾಸಪಡುವವರೇ, ಸ್ವಬಲದಿಂದ ಕರ್ನಾಯಿಮ್ ಪಟ್ಟಣವನ್ನು ಪಡೆದುಕೊಂಡಿಲ್ಲವೇ ಎಂದುಕೊಳ್ಳುವವರೇ.


ನಿನ್ನ ಅಧಿಕಾರಿಗಳು ದ್ರೋಹಿಗಳೂ, ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಪ್ರೀತಿಸಿ, ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸುವುದಿಲ್ಲ; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.


ಕಠಿಣ ಹೃದಯದವರೇ, ನೀತಿಗೆ ದೂರವಾದವರೇ, ನನ್ನ ಮಾತಿಗೆ ಕಿವಿಗೊಡಿರಿ.


ಹೀಗಿರಲು ವ್ಯಭಿಚಾರಿಯೇ, ಯೆಹೋವನ ಈ ವಾಕ್ಯವನ್ನು ಕೇಳು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು