ಯೆಶಾಯ 28:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಹಾ, ಕರ್ತನು ಒಬ್ಬ ಮಹಾಬಲಿಷ್ಠನನ್ನು ನೇಮಿಸಿದ್ದಾನೆ; ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ, ನಾಶಕರವಾದ ಬಿರುಗಾಳಿಯಂತೆಯೂ, ಮುಳುಗಿಸುವ ಅತಿಧಾರಾವೃಷ್ಟಿಯಂತೆಯೂ ಬಲಾತ್ಕಾರದಿಂದ ಆ ಪಟ್ಟಣವನ್ನು ತನ್ನ ಕೈಯಿಂದ ಅಧೋಗತಿಗೆ ತರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇದೋ, ಸರ್ವೇಶ್ವರ ಸ್ವಾಮಿ ಬಳಿ ಮಹಾ ಬಲಿಷ್ಠನೊಬ್ಬನು ಇದ್ದಾನೆ. ಆತನು ರಭಸವಾಗಿರುವ ಕಲ್ಮಳೆಯಂತೆ, ವಿನಾಶಕರವಾದ ಬಿರುಗಾಳಿಯಂತೆ, ಕೊಚ್ಚಿ ಹರಿಯುವ ತುಂಬು ಪ್ರವಾಹದಂತೆ ಬರುವನು. ಆ ನಗರ ನೆಲಕ್ಕೆ ಕುಸಿದುಬಿದ್ದು ನೆಲಸಮವಾಗುವಂತೆ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಹಾ, ಕರ್ತನು ಒಬ್ಬ ಮಹಾ ಬಲಿಷ್ಠನನ್ನು ನೇವಿುಸಿದ್ದಾನೆ; ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ ನಾಶಕವಾದ ಬಿರುಗಾಳಿಯೋಪಾದಿಯಲ್ಲಿಯೂ ಮುಣುಗಿಸುವ ಅತಿಧಾರಾವೃಷ್ಟಿಯ ಹಾಗೂ ಬಲಾತ್ಕಾರದಿಂದ [ಆ ಪಟ್ಟಣವನ್ನು] ನೆಲಕ್ಕೆ ಬೀಳಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಇಗೋ, ನನ್ನ ಒಡೆಯನಿಗೆ ಬಲಿಷ್ಠನೂ ಧೈರ್ಯವಂತನೂ ಆಗಿರುವ ಒಬ್ಬನಿದ್ದಾನೆ. ಅವನು ದೇಶದೊಳಗೆ ಆಲಿಕಲ್ಲಿನ ಮಳೆಯಿಂದ ಕೂಡಿದ ಬಿರುಗಾಳಿಯಂತೆಯೂ ನದಿಯ ಬಲವಾದ ಪ್ರವಾಹವು ದೇಶದೊಳಗೆ ನುಗ್ಗಿಬರುವಂತೆಯೂ ಅವನು ಬರುವನು. ಆ ಕಿರೀಟವನ್ನು (ಸಮಾರ್ಯ) ನೆಲದ ಮೇಲೆ ಬಿಸಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಇಗೋ, ಕರ್ತರಿಗೆ ಒಬ್ಬ ಮಹಾ ಬಲಿಷ್ಠನು ಇದ್ದಾನೆ. ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ, ಹೊಡೆದು ಬಿಡುವ ಬಿರುಗಾಳಿಯಂತೆಯೂ, ಪ್ರಳಯ ಮಾಡುವ ದೊಡ್ಡ ನೀರನ್ನು ತರುವ ಬಿರುಗಾಳಿಯಂತೆಯೂ ಅದನ್ನು ಕೈಯಿಂದ ಬೀಳಿಸುವನು. ಅಧ್ಯಾಯವನ್ನು ನೋಡಿ |