Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 28:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆದುದರಿಂದ ಅವನು ಜೀರಿಗೆಯನ್ನು ಒಕ್ಕುವುದು ಯಂತ್ರದಿಂದಲ್ಲ ಅಥವಾ ಗಾಡಿಯ ಚಕ್ರದಿಂದಲ್ಲ ಆದರೆ ಕೋಲಿನಿಂದಲೇ; ಅಗಸೆಯನ್ನು ಒಕ್ಕುವುದು ಕೋಲಿನಿಂದಲೇ, ಜೀರಿಗೆಯನ್ನು ಒಕ್ಕುವುದು ದೊಣ್ಣೆಯಿಂದಲೇ, ಕಣದ ಗುಂಡಿನಿಂದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಸದಾಪನ್ನು ಒಕ್ಕುವುದು ಕಣದ ಗುಂಡಿನಿಂದಲ್ಲ, ದೊಣ್ಣೆಯಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆದಕಾರಣ ಅವನು ಕರಿಯ ಜೀರಿಗೆಯನ್ನು ಒಕ್ಕುವದು ಹಲಿವೆಯಿಂದಲ್ಲ, ಕೋಲಿನಿಂದಲೇ; ಜೀರಿಗೆಯನ್ನು ಒಕ್ಕುವದು ಕಣದ ಗುಂಡಿನಿಂದಲ್ಲ, ದೊಣ್ಣೆಯಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ವ್ಯವಸಾಯಗಾರನು ಜೀರಿಗೆಯನ್ನು ಒಕ್ಕುವದು ಹಲಿವೆಯಿಂದಲ್ಲ, ಕೋಲಿನಿಂದಲೇ. ಜೀರಿಗೆಯನ್ನು ಕುದುರೆಯಿಂದ ಗುಂಡನ್ನು ಉರುಳಿಸಿ ನುಚ್ಚುನೂರು ಮಾಡುವನೋ? ಇಲ್ಲ! ಅವನೊಂದು ಸಣ್ಣ ಕೋಲನ್ನು ಉಪಯೋಗಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅಗಸೆಯನ್ನು ತುಳಿಯುವ ಯಂತ್ರದಿಂದ ತುಳಿಯುವುದಿಲ್ಲ. ಜೀರಿಗೆಯನ್ನು ಒಕ್ಕುವುದು ಬಂಡಿಯ ಚಕ್ರ ತಿರುಗಿಸುವುದರಿಂದ ಅಲ್ಲ. ಅಗಸೆಯು ಕೋಲಿನಿಂದಲೂ, ಜೀರಿಗೆಯನ್ನು ಒಕ್ಕುವುದು ದೊಣ್ಣೆಯಿಂದ ಆಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 28:27
10 ತಿಳಿವುಗಳ ಹೋಲಿಕೆ  

“ಇಗೋ, ನಾನು ನಿನ್ನನ್ನು ಮಸೆದ ಮೊನೆಹಲ್ಲಿನ ಹೊಸ ಹಂತಿಕುಂಟೆಯನ್ನಾಗಿ ಮಾಡಿದ್ದೇನೆ, ನೀನು ಬೆಟ್ಟಗಳನ್ನು ಒಡೆದು ಪುಡಿಪುಡಿಮಾಡಿ ಗುಡ್ಡಗಳನ್ನು ಹೊಟ್ಟು ಮಾಡುವಿ.


ಯೆಹೋವನು ಇಂತೆನ್ನುತ್ತಾನೆ, “ದಮಸ್ಕವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅದು ಗಿಲ್ಯಾದನ್ನು ಕಬ್ಬಿಣದ ಹಂತಿ ಕುಂಟೆಗಳಿಂದ ಒಕ್ಕಿ ನುಗ್ಗುಮಾಡಿತಷ್ಟೆ.


ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ, ನಾನು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಅಟ್ಟಿದ್ದೆನೋ ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು; ನಿನ್ನನ್ನೋ ನಿರ್ಮೂಲಮಾಡೆನು. ಮಿತಿಮೀರಿ ಶಿಕ್ಷಿಸೆನು, ಆದರೆ ಶಿಕ್ಷಿಸದೆ ಬಿಡುವುದಿಲ್ಲ. ಇದು ಯೆಹೋವನ ನುಡಿ.”


ಯೆಹೋವನೇ, ನನ್ನನ್ನು ಶಿಕ್ಷಿಸು, ಆದರೆ ಮಿತಿಮೀರ ಬೇಡ. ರೋಷದಿಂದ ದಂಡಿಸದಿರು. ನಾನು ಕೇವಲ ಕ್ಷೀಣನಾದೇನು.


ಯೆಹೋವಾಹಾಜನಿಗೆ ಐವತ್ತು ಮಂದಿ ರಾಹುತರು, ಹತ್ತು ರಥಗಳು, ಹತ್ತು ಸಾವಿರ ಮಂದಿ ಕಾಲಾಳುಗಳು ಮಾತ್ರ ಉಳಿದರು. ಅರಾಮ್ಯರ ಅರಸನು ಬೇರೆ ಎಲ್ಲರನ್ನೂ ಸಂಹರಿಸಿ ಕಣದ ಧೂಳಿನಂತೆ ಮಾಡಿದನು.


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪುದೀನ, ಮರುಗಪತ್ರೆ, ಸಬಸಿಗೆಸೊಪ್ಪು, ಜೀರಿಗೆಗಳಲ್ಲಿ ದಶಮ ಭಾಗವನ್ನು ಕೊಡುತ್ತೀರಿ ಸರಿ, ಆದರೆ ಧರ್ಮಶಾಸ್ತ್ರದಲ್ಲಿ ಮುಖ್ಯವಾದುದನ್ನು ಅಂದರೆ ನ್ಯಾಯವನ್ನೂ, ಕರುಣೆಯನ್ನೂ ನಂಬಿಕೆಯನ್ನೂ ಬಿಟ್ಟುಬಿಟ್ಟಿದ್ದೀರಿ. ಇವುಗಳನ್ನು ಮಾಡಬೇಕು; ಅವುಗಳನ್ನೂ ಬಿಡಬಾರದು.


ಜ್ಞಾನಿಯಾದ ಅರಸನು ದುಷ್ಟರ ಮೇಲೆ ಕಣದ ಗುಂಡನ್ನು ಉರುಳಿಸಿ, ಅವರನ್ನು ತೂರಿಬಿಡುವನು.


ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ, ತಿದ್ದುತ್ತಾನೆ.


ಗೋದಿಯ ಕಾಳನ್ನು ನುಚ್ಚು ಮಾಡುವನೋ? ತನ್ನ ಕುದುರೆಗಳ ಗಾಡಿಯ ಚಕ್ರವನ್ನು ಹೊಡೆಯುತ್ತಾ ಗುಂಡನ್ನು ಉರುಳಿಸುತ್ತಾ ಯಾವಾಗಲೂ ಒಕ್ಕುತ್ತಿರುವುದಿಲ್ಲ, ನುಚ್ಚು ಮಾಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು