Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 28:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಗೋದಿಯ ಕಾಳನ್ನು ನುಚ್ಚು ಮಾಡುವನೋ? ತನ್ನ ಕುದುರೆಗಳ ಗಾಡಿಯ ಚಕ್ರವನ್ನು ಹೊಡೆಯುತ್ತಾ ಗುಂಡನ್ನು ಉರುಳಿಸುತ್ತಾ ಯಾವಾಗಲೂ ಒಕ್ಕುತ್ತಿರುವುದಿಲ್ಲ, ನುಚ್ಚು ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಗೋದಿಯನ್ನು ಒಕ್ಕುವಾಗ ಕುದುರೆಗಳನ್ನು ಹೊಡೆದು ಗುಂಡನ್ನು ಉರುಳಿಸಿ ಕಾಳನ್ನು ಪುಡಿಪುಡಿಮಾಡುವನೋ? ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಗೋದಿಯ ಕಾಳನ್ನು ನುಚ್ಚು ನುಚ್ಚು ಮಾಡುವನೋ? ತನ್ನ ಕುದುರೆಗಳನ್ನು ಹೊಡೆಯುತ್ತಾ ಗುಂಡನ್ನು ಗಿರ್ರನೆ ಉರುಳಿಸುತ್ತಾ ಯಾವಾಗಲೂ ಒಕ್ಕುತ್ತಿರುವದಿಲ್ಲ; ನುಚ್ಚು ನುಚ್ಚು ಮಾಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಸ್ತ್ರೀಯು ರೊಟ್ಟಿಯನ್ನು ತಯಾರಿಸುವಾಗ ಹಿಟ್ಟನ್ನು ಕೈಯಲ್ಲಿ ನಾದಿ ಅದನ್ನು ಚೆನ್ನಾಗಿ ಹದಗೊಳಿಸುವಳು. ಆದರೆ ಆಕೆ ಹಾಗೆಯೇ ಮಾಡುತ್ತಾ ಇರುವದಿಲ್ಲ. ಅದೇ ರೀತಿಯಲ್ಲಿ ಯೆಹೋವನು ಜನರನ್ನು ಶಿಕ್ಷಿಸುವನು. ಆತನು ಬಂಡಿಯ ಚಕ್ರದಿಂದ ಬೆದರಿಸುವನು. ಆದರೆ ಅವರನ್ನು ಸಂಪೂರ್ಣವಾಗಿ ಪುಡಿಪುಡಿ ಮಾಡುವದಿಲ್ಲ. ಅವರನ್ನು ತುಳಿದುಬಿಡಲು ಅನೇಕ ಕುದುರೆಗಳನ್ನು ಉಪಯೋಗಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ರೊಟ್ಟಿಗಾಗಿ ಗೋಧಿಯ ಕಾಳನ್ನು ಪುಡಿಮಾಡಬೇಕು; ಯಾವಾಗಲೂ ಅದನ್ನು ಒಕ್ಕುತ್ತಿರುವುದಿಲ್ಲ. ಅವನ ಬಂಡಿಯ ಚಕ್ರದಿಂದ ಅದರ ಮೇಲೆ ಒಡೆಯುವುದಿಲ್ಲ ಅವನ ಕುದುರೆ ಸವಾರದಿಂದ ಒಕ್ಕುತ್ತಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 28:28
12 ತಿಳಿವುಗಳ ಹೋಲಿಕೆ  

ನಾವು ದೇವರ ಜೊತೆಕೆಲಸದವರು. ನೀವು ದೇವರ ಹೊಲವೂ. ದೇವರ ಮಂದಿರವೂ ಆಗಿದ್ದೀರಿ.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು. ಆದರೆ ಅದು ಸತ್ತರೆ ಬಹಳ ಫಲ ಕೊಡುವುದು


ಹೊಟ್ಟನು ತೂರುವ ಮೊರವನ್ನು ಆತನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನು ಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟು ಬಿಡುವನು” ಎಂದು ಹೇಳಿದನು.


“ಇಗೋ, ಧಾನ್ಯವನ್ನು ಜರಡಿಯಲ್ಲಿ ಜಾಲಿಸುವ ಪ್ರಕಾರ, ಇಸ್ರಾಯೇಲರನ್ನು ಸಕಲ ಜನಾಂಗಗಳಲ್ಲಿ ಹಾಕಿ ಜಾಲಿಸಬೇಕು” ಆದರೂ ಒಂದು ಕಾಳಾದರೂ ನೆಲಕ್ಕೆ ಬೀಳುವುದಿಲ್ಲ, ಎಂದು ಅಪ್ಪಣೆ ಕೊಡುವೆನು.


ನನ್ನ ಕಣದ ದವಸವೇ, ನನ್ನ ಬಡಿತಕ್ಕೆ ಈಡಾದವರೇ! ಇಸ್ರಾಯೇಲರ ದೇವರಾಗಿರುವ ಸೇನಾಧೀಶ್ವರನಾದ ಯೆಹೋವನಿಂದ, ನಾನು ಕೇಳಿದ್ದನ್ನೇ ನಿಮಗೆ ತಿಳಿಸಿದ್ದೇನೆ.


ಅವರು ಆರು ಕಮಾನು ಬಂಡಿಯನ್ನೂ ಮತ್ತು ಹನ್ನೆರಡು ಎತ್ತುಗಳನ್ನೂ ಯೆಹೋವನ ಸನ್ನಿಧಿಗೆ ಕಾಣಿಕೆಯಾಗಿ ತಂದರು. ನಾಯಕರಾದ ಇಬ್ಬರಿಬ್ಬರೂ ಒಂದು ಕಮಾನು ಬಂಡಿಯನ್ನೂ, ಪ್ರತಿ ನಾಯಕನು ಒಂದು ಜೋಡಿ ಎತ್ತನ್ನೂ, ದೇವದರ್ಶನ ಗುಡಾರದ ಮುಂದೆ ತಂದರು. ಹೀಗೆ ಆರು ಜೊತೆ ಬಂಡಿ ಆರು ಜೊತೆ ಎತ್ತುಗಳನ್ನು ತಂದು ಅರ್ಪಿಸಿದರು.


ಆದುದರಿಂದ ಅವನು ಜೀರಿಗೆಯನ್ನು ಒಕ್ಕುವುದು ಯಂತ್ರದಿಂದಲ್ಲ ಅಥವಾ ಗಾಡಿಯ ಚಕ್ರದಿಂದಲ್ಲ ಆದರೆ ಕೋಲಿನಿಂದಲೇ; ಅಗಸೆಯನ್ನು ಒಕ್ಕುವುದು ಕೋಲಿನಿಂದಲೇ, ಜೀರಿಗೆಯನ್ನು ಒಕ್ಕುವುದು ದೊಣ್ಣೆಯಿಂದಲೇ, ಕಣದ ಗುಂಡಿನಿಂದಲ್ಲ.


ಈ ವಿವೇಕವು ಸಹ ಅತಿಶಯವಾದ ಆಲೋಚನಾಪರನೂ, ಸುಜ್ಞಾನ ಶ್ರೇಷ್ಠನೂ ಆಗಿರುವ, ಸೇನಾಧೀಶ್ವರನಾದ ಯೆಹೋವನಿಂದಲೇ ಉಂಟಾಗುತ್ತದೆ.


ಯೆಹೋವನೇ, ನನ್ನನ್ನು ಶಿಕ್ಷಿಸು, ಆದರೆ ಮಿತಿಮೀರ ಬೇಡ. ರೋಷದಿಂದ ದಂಡಿಸದಿರು. ನಾನು ಕೇವಲ ಕ್ಷೀಣನಾದೇನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು