Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 29:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆ ಮೇಲೆ ನಾನು ಅರೀಯೇಲನ್ನು ಬಾಧಿಸುವೆನು; ಅರಚಾಟ ಕಿರಿಚಾಟಗಳಿಂದ ತುಂಬುವುದು; ಆ ಪಟ್ಟಣವು ನನಗೆ ಅರೀಯೇಲಾಗಿಯೇ ಪರಿಣಮಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅನಂತರ ನಾನು ಅರೀಯೇಲನ್ನು ಬಾಧಿಸುವೆನು. ಅಲ್ಲಿ ಅರಚಾಟ ಕಿರಿಚಾಟ ಇರುವುದು. ಆ ಪಟ್ಟಣವು ವಾಸ್ತವವಾಗಿ ನನಗೆ ಅರೀಯೇಲಾಗಿಯೇ ಪರಿಣಮಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆ ಪಟ್ಟಣವು ನನಗೆ ಅರೀಯೇಲಾಗಿಯೇ ಪರಿಣವಿುಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ಅರೀಯೇಲನ್ನು ಶಿಕ್ಷಿಸಿದ್ದೇನೆ. ಆ ನಗರವು ದುಃಖರೋಧನಗಳಿಂದ ತುಂಬಿದೆ. ಆದರೆ ಆಕೆ ಯಾವಾಗಲೂ ನನ್ನ ಅರೀಯೇಲಾಗಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದಾಗ್ಯೂ ನಾನು ಅರೀಯೇಲಿಗೆ ಇಕ್ಕಟ್ಟನ್ನು ಉಂಟುಮಾಡುವೆನು. ಅಲ್ಲಿ ಕಷ್ಟವೂ, ದುಃಖವೂ ಇರುವುದು. ಅವಳು ನನಗೆ ಬಲಿಪೀಠದ ಒಲೆಯಂತೆ ಇರುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 29:2
19 ತಿಳಿವುಗಳ ಹೋಲಿಕೆ  

ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನರಪುತ್ರನೇ, ಎಲ್ಲಾ ಬಗೆಯ ಪಕ್ಷಿಗಳಿಗೂ, ಸಮಸ್ತ ಭೂಜಂತುಗಳಿಗೂ ಹೀಗೆ ನುಡಿ, ‘ನೀವು ಕೂಡಿಬನ್ನಿರಿ; ನಾನು ಇಸ್ರಾಯೇಲಿನ ಪರ್ವತಗಳ ಮೇಲೆ ನಿಮಗಾಗಿ ಅರ್ಪಿಸುವ ಮಹಾಯಜ್ಞಕ್ಕೆ ಎಲ್ಲಾ ಕಡೆಯಿಂದಲೂ ನೆರೆದು ಬಂದು, ಮಾಂಸವನ್ನು ತಿಂದು, ರಕ್ತವನ್ನು ಕುಡಿಯಿರಿ.


ಆದಕಾರಣ ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ, ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸ ಮಾಡಿ ಅವರ ದುರ್ನಡತೆಯನ್ನು ಅವರ ತಲೆಗೇ ಕಟ್ಟಿದ್ದೇನೆ.’ ಇದು ಕರ್ತನಾದ ಯೆಹೋವನ ನುಡಿ.”


ಕರ್ತನು ವೈರಿಯಾಗಿ ಇಸ್ರಾಯೇಲನ್ನು ನುಂಗಿದ್ದಾನೆ; ಅದರ ಅರಮನೆಗಳನ್ನೆಲ್ಲಾ ತಿಂದುಬಿಟ್ಟು ಅದರ ಕೋಟೆಕೊತ್ತಲಗಳನ್ನು ನಾಶಮಾಡಿದ್ದಾನೆ; ಯೆಹೂದ ಸೀಮೆಯಲ್ಲಿ ಪ್ರಲಾಪ ಮತ್ತು ಗೋಳಾಟವನ್ನು ಹೆಚ್ಚಿಸಿದ್ದಾನೆ.


ಆಗ ಅವರು ಯೆಶಾಯನಿಗೆ, “ಹಿಜ್ಕೀಯನು ಹೀಗೆ ಹೇಳುತ್ತಾನೆ, ‘ಈ ದಿನದಲ್ಲಿ ನಮಗೆ ಮಹಾಕಷ್ಟವೂ, ಶಿಕ್ಷೆಯೂ, ನಿಂದೆಯೂ ಸಂಭವಿಸಿರುತ್ತದೆ. ಹೆರಿಗೆಯ ಕಾಲ ಬಂದದೆ; ಆದರೆ ಹೆರುವುದಕ್ಕೆ ಬಲ ಸಾಲದು.


ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.


ಯೆಹೋವನ ಖಡ್ಗವು ರಕ್ತದಿಂದ ತುಂಬಿದೆ. ಅದು ಕುರಿ ಮತ್ತು ಹೋತಗಳ ರಕ್ತದಿಂದಲೂ, ಟಗರುಗಳ ಮೂತ್ರಪಿಂಡದ ಕೊಬ್ಬಿನಿಂದಲೂ ಲೇಪಿತವಾಗಿದೆ. ಏಕೆಂದರೆ ಯೆಹೋವನು ಬೊಚ್ರದಲ್ಲಿ ಬಲಿಯನ್ನೂ, ಎದೋಮ್ ಸೀಮೆಯಲ್ಲಿ ದೊಡ್ಡ ಹತ್ಯೆಯನ್ನೂ ಮಾಡಬೇಕೆಂದಿದ್ದಾನೆ.


ಇಗೋ, ಸಂಜೆಯಲ್ಲಿ ಹೆದರಿ ಉದಯದೊಳಗಾಗಿ ಇಲ್ಲವಾಗುವರು! ನಮ್ಮನ್ನು ಸೂರೆ ಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ.


ಇದೇ ದಿನ ಶತ್ರುಗಳು ನೋಬಿನಲ್ಲಿ ಬೀಡುಬಿಡುವರು. ಚೀಯೋನ್ ನಗರಿಯ ಪರ್ವತದ ಕಡೆಗೆ ಯೆರೂಸಲೇಮಿನ ಬೆಟ್ಟದ ಕಡೆಗೆ ಕೈ ಬೀಸುತ್ತಾರೆ.


ಅವಳ ಪುರದ್ವಾರಗಳಲ್ಲಿ ಪ್ರಲಾಪವೂ, ದುಃಖವೂ ತುಂಬಿರುವವು. ಅವಳು ಹಾಳಾಗಿ ನೆಲದ ಮೇಲೆ ಕುಳಿತುಕೊಳ್ಳುವಳು.


ನಿಮ್ಮ ಅಮಾವಾಸ್ಯೆಗಳನ್ನೂ, ಹುಣ್ಣಿಮೆಹಬ್ಬ, ಉತ್ಸವ ದಿನಗಳನ್ನೂ ದ್ವೇಷಿಸುತ್ತೇನೆ; ಇವು ನನಗೆ ಭಾರ; ಸಹಿಸಲು ಬೇಸರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು