ಯೆಶಾಯ 29:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಹಸಿದವನು ಕನಸು ಕಂಡು ಆಹಾ, ತಿನ್ನುತ್ತಿದ್ದೇನೆ ಎಂದುಕೊಂಡಂತಾಗುವುದು; ಎಚ್ಚೆತ್ತಾಗ ಅವನ ಹೊಟ್ಟೆ ಬರಿದಾಗಿಯೇ ಇರುವುದು. ಬಾಯಾರಿದವನು ಸ್ವಪ್ನದಲ್ಲಿ ಇಗೋ ನೀರು ಕುಡಿಯುತ್ತಿದ್ದೇನೆ ಎಂದುಕೊಂಡಂತಾಗುವುದು; ನಿದ್ರೆಯಿಂದ ಎಚ್ಚೆತ್ತಾಗ ಬಲಹೀನನಾಗಿದ್ದು, ಬಳಲಿ ನೀರನ್ನು ಬಯಸುತ್ತಾ ಬಾಯಾರಿಕೆಯಿಂದ ಇರುವನು. ಚೀಯೋನ್ ಪರ್ವತಕ್ಕೆ ವಿರುದ್ಧವಾಗಿ ಹೋರಾಡುವ ಸಕಲ ಜನಾಂಗಗಳಿಗೂ ಇದೇ ಗತಿಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಸಿಯೋನ್ ಪರ್ವತಕ್ಕೆ ವಿರುದ್ಧವಾಗಿ ಹೋರಾಡುವ ಸಕಲ ರಾಷ್ಟ್ರಗಳ ಸಮುದಾಯದ ಗತಿ ಸ್ವಪ್ನಕಾಣುವವನ ಗತಿಯಾಗುವುದು. ಹಸಿದಿರುವ ಅವನು ಉಣ್ಣುವಂತೆ ಕನಸುಕಂಡರೂ ಎಚ್ಚರವಾದಾಗ ಅವನ ಹೊಟ್ಟೆ ಬರಿದಾಗಿಯೇ ಇರುತ್ತದೆ. ಬಾಯಾರಿದ ಅವನು ಕುಡಿಯುವಂತೆ ಕನಸು ಕಂಡರೂ ಎಚ್ಚರವಾದಾಗ ಅವನ ಹೊಟ್ಟೆ ಬರಿದಾಗಿಯೇ ಇರುತ್ತದೆ. ಬಾಯಾರಿದ ಅವನು ಕುಡಿಯುವಂತೆ ಕನಸು ಕಂಡರೂ ಎಚ್ಚರವಾದಾಗ ಬಳಲಿ ಬಾಯಾರಿಕೆಯಿಂದಲೇ ಇರುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಹಸಿದವನು ಕನಸು ಕಂಡು ಆಹಾ, ಉಣ್ಣುತ್ತೇನೆ ಎಂದು ಕೊಂಡಂತಾಗುವದು; ಎಚ್ಚತ್ತಾಗ ಅವನ ಹೊಟ್ಟೆ ಬರಿದೇ. ಬಾಯಾರಿದವನು ಸ್ವಪ್ನದಲ್ಲಿ ಇಗೋ ಕುಡಿಯುತ್ತೇನೆ ಎಂದುಕೊಂಡ ಹಾಗೂ ಆಗುವದು; ನಿದ್ರೆ ತಿಳಿದಾಗ ಬಳಲಿ ನೀರನ್ನು ಬಯಸುವನು. ಚೀಯೋನ್ ಪರ್ವತಕ್ಕೆ ವಿರುದ್ಧವಾಗಿ ಹೋರಾಡುವ ಸಕಲಜನಾಂಗಗಳ ಗುಂಪಿಗೆ ಈ ಗತಿಯಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅದು ಕೂಡಾ ಸೈನ್ಯದವರಿಗೆ ಒಂದು ಕನಸಿನಂತಿರುವದು. ಅವರಿಗೆ ಬೇಕಾದದ್ದು ದೊರಕುವದಿಲ್ಲ. ಹಸಿವೆಯಲ್ಲಿರುವ ಒಬ್ಬನು ಆಹಾರದ ಕನಸು ಕಂಡಂತಿರುವದು. ಅವನು ಎಚ್ಚರವಾದಾಗ ಹಸಿವಿನಿಂದಲೇ ಇರುವನು. ಬಾಯಾರಿದ ಮನುಷ್ಯನು ನೀರಿಗಾಗಿ ಕಾಣುವ ಕನಸಿನಂತಿರುವುದು. ಅವನು ಎಚ್ಚರಗೊಂಡಾಗ ಬಾಯಾರಿಕೆಯು ಇನ್ನೂ ಇರುವದು. ಚೀಯೋನಿಗೆ ವಿರುದ್ಧ ಯುದ್ಧಮಾಡುವ ಆ ಜನಾಂಗಗಳ ಗತಿಯು ಅಂತೆಯೇ ಇರುವದು. ಅವರು ತಾವು ಆಶಿಸುವ ವಸ್ತುಗಳನ್ನು ಹೊಂದುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಹಸಿದ ಮನುಷ್ಯನು ಕನಸು ಕಂಡು ಇಗೋ, ಉಣ್ಣುತ್ತೇನೆ ಎಂದುಕೊಂಡಂತಾಗುವುದು. ಆದರೆ ಅವನು ಎಚ್ಚೆತ್ತಾಗ ಪ್ರಾಣ ತುಂಬಿದ ಹಾಗೆಯೂ, ಬಾಯಾರಿದವನು ಸ್ವಪ್ನದಲ್ಲಿ ಇಗೋ, ಕುಡಿಯುತ್ತೇನೆ ಎಂದುಕೊಂಡಂತಾಗುವುದು. ಆದರೆ ಅವನು ಎಚ್ಚರವಾದಾಗ ಬಲಹೀನನಾಗಿದ್ದು, ಪ್ರಾಣ ಆಶಿಸುವ ಹಾಗೆಯೇ ಚೀಯೋನ್ ಪರ್ವತಕ್ಕೆ ವಿರೋಧವಾಗಿ ಯುದ್ಧಮಾಡುವ ಎಲ್ಲಾ ಜನಾಂಗಗಳ ಸಮೂಹವಿರುವುದು. ಅಧ್ಯಾಯವನ್ನು ನೋಡಿ |