Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 29:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿಮ್ಮನ್ನು ನೀವೇ ಬೆರಗು ಮಾಡಿಕೊಂಡು ಬೆರಗಾಗಿರಿ, ಕುರುಡು ಮಾಡಿಕೊಂಡು ಕುರುಡರಾಗಿರಿ! ಇವರು ಅಮಲೇರಿದ್ದಾರೆ, ದ್ರಾಕ್ಷಾರಸದಿಂದಲ್ಲ; ಓಲಾಡುತ್ತಾರೆ ಮದ್ಯದಿಂದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಿಮ್ಮನ್ನು ನೀವೇ ಬೆರಗುಮಾಡಿಕೊಂಡು ನಿಬ್ಬೆರಗಾಗಿರಿ. ಕುರುಡು ಮಾಡಿಕೊಂಡು ಕಡುಕುರುಡರಾಗಿರಿ. ಮದ್ಯಪಾನ ಮಾಡದೆಯೇ ಮತ್ತರಾಗಿರಿ, ಕುಡಿಯದೆಯೇ ಓಲಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಿಮ್ಮನ್ನು ನೀವೇ ಬೆರಗುಮಾಡಿಕೊಂಡು ಬೆರಗಾಗಿರಿ, ಕುರುಡುಮಾಡಿಕೊಂಡು ಕುರುಡರಾಗಿರಿ; ಇವರು ಅಮಲೇರಿದ್ದಾರೆ, ದ್ರಾಕ್ಷಾರಸದಿಂದಲ್ಲ; ಓಲಾಡುತ್ತಾರೆ, ಮದ್ಯದಿಂದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಶ್ಚರ್ಯಪಡಿರಿ! ಬೆರಗಾಗಿರಿ! ನೀವು ಮತ್ತರಾಗಿರುವಿರಿ! ಆದರೆ ದ್ರಾಕ್ಷಾರಸದಿಂದಲ್ಲ. ನೋಡಿ, ಆಶ್ಚರ್ಯಪಡಿರಿ! ನೀವು ಮುಗ್ಗರಿಸಿಬೀಳುವಿರಿ, ಆದರೆ ಮದ್ಯಪಾನದಿಂದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ತಾಮಸ ಮಾಡಿ ಆಶ್ಚರ್ಯಪಡಿರಿ. ಕುರುಡು ಮಾಡಿಕೊಂಡು ದೃಷ್ಟಿಯಿಲ್ಲದವರಾಗಿರಿ ಇವರು ಅಮಲೇರಿದ್ದಾರೆ. ಆದರೆ ದ್ರಾಕ್ಷಾರಸದಿಂದಲ್ಲ. ಅವರು ಕೂಗಾಡುತ್ತಾರೆ, ಆದರೆ ಮದ್ಯದಿಂದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 29:9
25 ತಿಳಿವುಗಳ ಹೋಲಿಕೆ  

ಆ ಸ್ತ್ರೀಯು ನೀತಿವಂತರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿನೀಡಿ ಹತರಾದವರ ರಕ್ತವನ್ನು ಕುಡಿದು ಮತ್ತಳಾಗಿರುವುದನ್ನು ಕಂಡೆನು. ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು.


ನಿನ್ನ ಹಿಂಸಕರು ತಮ್ಮ ಮಾಂಸವನ್ನೇ ತಿನ್ನುವಂತೆ ಮಾಡುವೆನು, ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು. ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು” ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವುದು.


ಯೆಹೋವನು ಅವರ ಅಂತರಾತ್ಮದಲ್ಲಿ ವಕ್ರಬುದ್ಧಿಯನ್ನು ಕಲ್ಪಸಿದ್ದಾನೆ. ಅಮಲೇರಿದವನು ಕಕ್ಕುತ್ತಾ ಓಡಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾರೆ.


ಆತನು ಮೂರನೆಯ ಸಾರಿ ಅವರ ಬಳಿಗೆ ಬಂದು, “ನೀವು ಇನ್ನು ನಿದ್ರಿಸಿ ವಿಶ್ರಾಂತಿ ತೆಗೆದುಕೊಳ್ಳುತ್ತಿರುವಿರಾ? ಸಾಕು, ಆ ಗಳಿಗೆ ಸಮೀಪಿಸಿದೆ; ಮನುಷ್ಯಕುಮಾರನು ಪಾಪಿಗಳ ಕೈಗೆ ಒಪ್ಪಿಸಲ್ಪಡುತ್ತಾನೆ.


ತರುವಾಯ ಆತನು ಶಿಷ್ಯರ ಬಳಿಗೆ ಬಂದು ಅವರಿಗೆ, “ನೀವು ಇನ್ನು ನಿದ್ದೆ ಮಾಡಿ ವಿಶ್ರಮಿಸಿಕೊಳ್ಳುತ್ತಿದ್ದೀರೋ; ಇಗೋ, ಅ ಗಳಿಗೆ ಸಮೀಪಿಸಿತು, ಈಗ ಮನುಷ್ಯಕುಮಾರನು ಪಾಪಿಷ್ಠರ ಕೈಗೆ ಒಪ್ಪಿಸಲ್ಪಡುತ್ತಾನೆ.


ಜನಾಂಗಗಳ ಮಧ್ಯೆ ನಡೆಯುವುದನ್ನು ದೃಷ್ಟಿಸಿ ನೋಡಿ. ಅದರಿಂದ ನೀವು ಬೆರಗಾಗಿ ಹೋಗುವಿರಿ; ನಿಮ್ಮ ಕಾಲದಲ್ಲೇ ನಾನು ಒಂದು ಕಾರ್ಯವನ್ನು ಮಾಡುವೆನು. ನಾನು ಆ ಕಾರ್ಯದ ಬಗ್ಗೆ ನಿಮಗೆ ಎಷ್ಟು ತಿಳಿಹೇಳಿದರೂ ನೀವು ನಂಬುವುದಿಲ್ಲ.


ಊಚ್ ದೇಶದಲ್ಲಿ ವಾಸಿಸುವ ಎದೋಮೆಂಬ ಕನ್ಯೆಯೇ, ಹರ್ಷಿಸು, ಉಲ್ಲಾಸಗೊಳ್ಳು; ಆದರೆ ರೋಷಪಾನದ ಪಾತ್ರೆಯು ನಿನ್ನ ಪಾಲಿಗೂ ಬರುವುದು; ಅಮಲೇರಿದವಳಾಗಿ ನಿನ್ನನ್ನು ನೀನೇ ಬೆತ್ತಲೆಮಾಡಿಕೊಳ್ಳುವಿ.


ಬಾಬೆಲು ಯೆಹೋವನ ಕೈಯಲ್ಲಿನ ಹೊನ್ನಿನ ಪಾತ್ರೆಯ ಹಾಗಿತ್ತು; ಲೋಕದವರೆಲ್ಲರೂ ಅದರಲ್ಲಿ ಕುಡಿದು ಮತ್ತರಾದರು; ಜನಾಂಗಗಳು ಅದರಲ್ಲಿನ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು.


ಇದಲ್ಲದೆ ನನಗೆ ಈ ಅಪ್ಪಣೆಯಾಯಿತು, ನೀನು ಅವರಿಗೆ ನುಡಿಯತಕ್ಕದ್ದೇನೆಂದರೆ, “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಾನು ನಿಮ್ಮಲ್ಲಿಗೆ ಖಡ್ಗವನ್ನು ಕಳುಹಿಸುವೆನು; ಆ ನನ್ನ ರೋಷವನ್ನು ಕುಡಿದು ಅಮಲೇರಿದವರಾಗಿ ಕಕ್ಕಿ ಬಿದ್ದು ಏಳದಿರಿ.”


ಪ್ರವಾದಿಗಳ ವಿಷಯ: ನನ್ನ ಹೃದಯವು ನನ್ನೊಳಗೆ ಒಡೆದುಹೋಗಿದೆ; ನನ್ನ ಎಲುಬುಗಳೆಲ್ಲಾ ಕರಗಿಹೋಗಿವೆ. ನಾನು ಯೆಹೋವನಿಗೂ ಆತನ ಪರಿಶುದ್ಧ ವಾಕ್ಯಗಳಿಗೂ ವಶನಾಗಿ ಅಮಲೇರಿದವನಂತಿದ್ದೇನೆ. ಹೌದು, ದ್ರಾಕ್ಷಾರಸಕ್ಕೆ ಸೋತವನ ಹಾಗಿದ್ದೇನೆ.


ಆಕಾಶಮಂಡಲವೇ, ಇದಕ್ಕೆ ಬೆಚ್ಚಿಬೆರಗಾಗು, ತತ್ತರಿಸು, ಹಾಳಾಗು” ಎಂದು ಯೆಹೋವನು ನುಡಿಯುತ್ತಾನೆ.


ಯೆಹೋವನು ತನ್ನ ರೋಷವನ್ನು ತುಂಬಿಕೊಟ್ಟ ಪಾತ್ರೆಯಿಂದ ಕುಡಿದ ಯೆರೂಸಲೇಮೇ, ಎಚ್ಚೆತ್ತುಕೋ, ಎಚ್ಚೆತ್ತುಕೋ, ಎದ್ದುನಿಲ್ಲು! ಭ್ರಮಣಗೊಳಿಸುವ ಆ ಪಾನದ ಪಾತ್ರೆಯಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿದುಬಿಟ್ಟಿದ್ದಿ.


ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ, ಪ್ರವಾದಿಗಳ ಕಣ್ಣುಗಳನ್ನು ಮುಚ್ಚಿ, ದಿವ್ಯದರ್ಶಿಗಳ ತಲೆಗಳಿಗೆ ಮುಸುಕು ಹಾಕಿದ್ದಾನೆ.


ಆಕಾಶಮಂಡಲವೇ, ಆಲಿಸು! ಭೂಮಂಡಲವೇ ಕೇಳು! ಯೆಹೋವನು ಮಾತನಾಡುತ್ತಿದ್ದಾನೆ. ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹ ಮಾಡಿದ್ದಾರೆ.


ಅಯ್ಯೋ, ಅರೀಯೇಲೇ, ಅರೀಯೇಲೇ ದಾವೀದನು ಸೈನ್ಯಸಮೇತವಾಗಿ ವಾಸಿಸಿದ ಪಟ್ಟಣವೇ, ನಿನ್ನ ಗತಿಯನ್ನು ಏನು ಹೇಳಲಿ! ಈ ವರ್ಷಕ್ಕೆ ಮುಂದಿನ ವರ್ಷವನ್ನು ಸೇರಿಸಿರಿ; ಹಬ್ಬಗಳು ಹೆಚ್ಚಾಗಿ ಬರಲಿ.


ಇವರ ಕಾವಲುಗಾರರು ಕುರುಡರು, ಇವರಲ್ಲಿ ಯಾರಿಗೂ ತಿಳಿವಳಿಕೆಯಿಲ್ಲ; ಇವರೆಲ್ಲರೂ ಬೊಗಳಲಾರದ ಮೂಕ ನಾಯಿಗಳು, ನಿದ್ರೆಯನ್ನಾಶಿಸಿ ಮಲಗಿಕೊಂಡು ಕನವರಿಸುವ ನಾಯಿಗಳು.


ನನ್ನ ಕೋಪದಿಂದ ಜನಾಂಗಗಳನ್ನು ತುಳಿದು ರೋಷವೇರಿದವನಾಗಿ, ಅವುಗಳನ್ನು ಚೂರುಚೂರು ಮಾಡಿ ನೆಲದ ಮೇಲೆ ಅವುಗಳ ಸಾರವನ್ನು ಸುರಿಸಿದೆನು.


ಆ ಕಾಲದಲ್ಲಿ ಅರಸನ ಎದೆಯು ಕುಂದುವುದು, ಅಧಿಪತಿಗಳ ಹೃದಯವು ಕುಗ್ಗುವುದು, ಯಾಜಕರು ಸ್ತಬ್ಧರಾಗುವರು, ಪ್ರವಾದಿಗಳು ಬೆರಗಾಗುವರು” ಎಂದು ಯೆಹೋವನು ನುಡಿಯುತ್ತಾನೆ.


ಕಣ್ಣಿನಿಂದ ನೋಡದಂತೆಯೂ, ಕಿವಿಯಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರಿಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಈ ಜನರ ಹೃದಯವನ್ನು ಕೊಬ್ಬಿಸಿ, ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣಿಗೆ ಅಂಟು ಬಳಿ” ಎಂದು ನನಗೆ ಹೇಳಿದನು.


ಆಗ ನೀನು ಅವರಿಗೆ, “ಯೆಹೋವನ ಈ ಮಾತನ್ನು ಕೇಳಿರಿ, ದಾವೀದನ ಸಿಂಹಾಸನವನ್ನೇರಿದ ಅರಸರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ, ಯೆರೂಸಲೇಮಿನ ಸಕಲ ನಿವಾಸಿಗಳನ್ನೂ ಅಂತು ದೇಶದ ಜನರೆಲ್ಲರನ್ನೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು