ಯೆಶಾಯ 3:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇದಲ್ಲದೆ ಯೆಹೋವನು ಹೀಗನ್ನುತ್ತಾನೆ, ಚೀಯೋನಿನ ಹೆಂಗಸರು ಅಹಂಕಾರವುಳ್ಳವರಾಗಿ, ಕತ್ತು ತೂಗುತ್ತಾ, ಕಣ್ಣುಗಳನ್ನು ತಿರುಗಿಸುತ್ತಾ, ವಯ್ಯಾರವಾಗಿ ಹೆಜ್ಜೆ ಇಡುತ್ತಾ, ಕಾಲು ಗೆಜ್ಜೆ ಜಣಜಣಿಸುತ್ತಾ ನಡೆಯುವವರಾಗಿರುವುದರಿಂದ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸ್ವಾಮಿ ಇಂತೆನ್ನುತ್ತಾರೆ: ಸಿಯೋನಿನ ಮಹಿಳೆಯರ ಒನಪು ಒಯ್ಯಾರಗಳನ್ನು ನೋಡಿರಿ. ಅವರು ಕತ್ತುತೂಗುತ್ತಾ, ಕಡೆಗಣ್ಣು ಹಾಕುತ್ತಾ, ಕುಲುಕಿ ಹೆಜ್ಜೆಯಿಡುತ್ತಾ, ಕಾಲುಗೆಜ್ಜೆ ಜಣಜಣಿಸುತ್ತಾ ನಡೆಯುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇದಲ್ಲದೆ ಯೆಹೋವನು ಹೀಗನ್ನುತ್ತಾನೆ - ಚೀಯೋನಿನ ಹೆಂಗಸರು ವಯ್ಯಾರವುಳ್ಳವರಾಗಿ ಕತ್ತು ತೂಗುತ್ತಾ ಕಡೆಗಣ್ಣುಹಾಕುತ್ತಾ ಕುಲುಕಿ ಹೆಜ್ಜೆಯಿಡುತ್ತಾ ಕಾಲುಗೆಜ್ಜೆ ಜಣಜಣಿಸುತ್ತಾ ನಡೆಯುವವರಾಗಿರುವದರಿಂದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯೆಹೋವನು ಹೇಳುವುದೇನೆಂದರೆ: “ಚೀಯೋನಿನ ಸ್ತ್ರೀಯರು ವಯ್ಯಾರದಿಂದ ತಲೆಯಾಡಿಸುತ್ತಾ, ಕುಡಿನೋಟ ಬೀರುತ್ತಾ, ಕುಲುಕಿ ಹೆಜ್ಜೆಯಿಡುತ್ತಾ, ಕಾಲುಗೆಜ್ಜೆಯನ್ನು ಝಣಝಣಿಸುತ್ತಾ ನಡೆಯುತ್ತಾರೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇದಲ್ಲದೆ ಯೆಹೋವ ದೇವರು ಇಂತೆನ್ನುತ್ತಾರೆ: “ಚೀಯೋನ್ ಪುತ್ರಿಯರು ಅಹಂಕಾರಿಗಳಾಗಿದ್ದು, ಕತ್ತು ತೂಗುತ್ತಾ, ಕಣ್ಣುಗಳನ್ನು ತಿರುಗಿಸುತ್ತಾ, ನಾಜೂಕಿನಿಂದ ಹೆಜ್ಜೆ ಇಡುತ್ತಾ, ಕಾಲುಗೆಜ್ಜೆ ಜಣಜಣಿಸುತ್ತಾ ನಡೆಯುತ್ತಾರೆ; ಅಧ್ಯಾಯವನ್ನು ನೋಡಿ |