Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 3:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಕರ್ತನಾದ ಯೆಹೋವನು ಚೀಯೋನಿನ ಪುತ್ರಿಯರ ನಡುನೆತ್ತಿಯನ್ನೂ ಹುಣ್ಣಿನಿಂದ ಬಾಧಿಸಿ, ಅವರ ಮಾನವನ್ನು ಬಯಲುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಒಡೆಯರಾದ ಸ್ವಾಮಿ ಅವರ ನಡುನೆತ್ತಿಯನ್ನು ಹುಣ್ಣಾಗಿಸಿ ಬೋಳುಮಾಡುವರು. ಅವರ ಮಾನವನ್ನು ಬಯಲುಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಕರ್ತನಾದ ಯೆಹೋವನು ಅವರ ನಡುನೆತ್ತಿಯನ್ನು ಹುಣ್ಣಿನಿಂದ ಬಾಧಿಸಿ ಅವರ ಮಾನವನ್ನು ಬೈಲುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನನ್ನ ಒಡೆಯನಾದ ಯೆಹೋವನು ಚೀಯೋನಿನ ಸ್ತ್ರೀಯರ ತಲೆಯ ಮೇಲೆ ಹುಣ್ಣುಗಳನ್ನು ಬರಮಾಡಿ ಅವರ ತಲೆಕೂದಲು ಉದುರಿ ತಲೆಬೋಳಾಗುವಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದ್ದರಿಂದ ಯೆಹೋವ ದೇವರು ಚೀಯೋನ್ ಪುತ್ರಿಯರ ನಡುನೆತ್ತಿಗೆ ಹುಣ್ಣನ್ನು ಅನುಮತಿಸಿ, ಅವರನ್ನು ಬೋಳುಮಾಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 3:17
15 ತಿಳಿವುಗಳ ಹೋಲಿಕೆ  

“ಇವು ನನಗೆ ಏಕೆ ಸಂಭವಿಸಿದವು” ಎಂದು ನೀನು ಮನದೊಳಗೆ ಅಂದುಕೊಂಡರೆ, ನಿನ್ನ ಉಡುಗೆಯು ಕೀಳಲ್ಪಟ್ಟು, ನಿನ್ನ ಹಿಮ್ಮಡಿಯು ನಾಚಿಕೆಗೆ ಈಡಾದುದ್ದಕ್ಕೆ ನಿನ್ನ ಮಹಾಪಾಪವೇ ಕಾರಣ ಎಂದು ನಿನಗೆ ಗೊತ್ತಾಗುವುದು.


ಆಗ ಮೊದಲನೆಯ ದೇವದೂತನು ಹೋಗಿ ತನ್ನ ಬಟ್ಟಲಲ್ಲಿ ಇದ್ದದ್ದನ್ನು ಭೂಮಿಯ ಮೇಲೆ ಸುರಿಯಲು ಮೃಗದ ಗುರುತನ್ನು ಹಾಕಿಸಿಕೊಂಡವರು, ಅದರ ವಿಗ್ರಹವನ್ನು ಆರಾಧಿಸುವ ಎಲ್ಲಾ ಜನರ ಮೇಲೆ ಭೀಕರವಾದ ಕೆಟ್ಟ ಹುಣ್ಣುಗಳು ಎದ್ದವು.


ಶಾಫೀರಿನವರೇ, ಬೆತ್ತಲೆಯಾಗಿ ಅವಮಾನಪಟ್ಟು ತೊಲಗಿರಿ. ಚಾನಾನಿನವರು ಹೊರಡರು. ಬೇತೆಚೇಲಿನ ಗೋಳಾಟವು ಅದರ ಬೆಂಬಲವನ್ನು ನಿಮಗೆ ತಪ್ಪಿಸುವುದು.


ಈ ರೀತಿಯಾಗಿ ಅಶ್ಶೂರದ ಅರಸನು ಐಗುಪ್ತದ ಸೆರೆಯವರನ್ನೂ, ಕೂಷಿನ ಕೈದಿಗಳನ್ನೂ ಅವರು ದೊಡ್ಡವರಾಗಲಿ, ಚಿಕ್ಕವರಾಗಲಿ ಬಟ್ಟೆ, ಪಾದರಕ್ಷೆಗಳಿಲ್ಲದೆ ಬೆತ್ತಲೆಯಾಗಿ ಐಗುಪ್ತದ ಮಾನಭಂಗಕ್ಕೋಸ್ಕರ ಸೆರೆಗೆ ನಡೆಯುವಂತೆ ಮಾಡುವನು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ಇಗೋ ನಾನು ನಿನಗೆ ವಿರುದ್ಧವಾಗಿದ್ದೇನೆ, ನಿನ್ನ ನೆರಿಗೆಯನ್ನು ನಿನ್ನ ಕಣ್ಣ ಮುಂದೆಯೇ ಕೀಳಿಸುವೆನು, ನಿನ್ನ ಬೆತ್ತಲೆತನವನ್ನು ಜನಾಂಗಗಳಿಗೆ ತೋರಿಸುವೆನು, ನಿನ್ನ ಅವಮಾನವನ್ನು ರಾಜ್ಯಗಳಿಗೆ ತೋರುವಂತೆ ಮಾಡುವೆನು.


ಐಗುಪ್ತ್ಯರ ಹುಣ್ಣು, ಬಾವು, ತುರಿಕಜ್ಜಿ ಮುಂತಾದ ವಾಸಿಯಾಗದ ರೋಗಗಳಿಂದ ಯೆಹೋವನು ನಿಮ್ಮನ್ನು ಬಾಧಿಸುವನು.


ಗೂನು ಇಲ್ಲವೇ ಕುಬ್ಜರಾಗಲಿ, ಹೂಗಣ್ಣ ಅಥವಾ ಕಾಯಿಗಣ್ಣನಾಗಲಿ, ಕಜ್ಜಿ, ತುರಿಗಳುಳ್ಳವನಾಗಲಿ,


ಚೀಯೋನಿನ ಮಹಿಳೆಯರೇ, ಹೊರಟು ಬನ್ನಿ ರಾಜನಾದ ಸೊಲೊಮೋನನನ್ನು ನೋಡ ಬನ್ನಿ. ಅವನು ವಿವಾಹ ದಿನದ ಉತ್ಸವದಂದು ಆತನ ತಾಯಿ ಆತನಿಗೆ ತೊಡಿಸಿದ ಕಿರೀಟವನ್ನು ಆತ ಧರಿಸಿರುವುದನ್ನು ನೋಡಬನ್ನಿ!


ಇದಲ್ಲದೆ ಯೆಹೋವನು ಹೀಗನ್ನುತ್ತಾನೆ, ಚೀಯೋನಿನ ಹೆಂಗಸರು ಅಹಂಕಾರವುಳ್ಳವರಾಗಿ, ಕತ್ತು ತೂಗುತ್ತಾ, ಕಣ್ಣುಗಳನ್ನು ತಿರುಗಿಸುತ್ತಾ, ವಯ್ಯಾರವಾಗಿ ಹೆಜ್ಜೆ ಇಡುತ್ತಾ, ಕಾಲು ಗೆಜ್ಜೆ ಜಣಜಣಿಸುತ್ತಾ ನಡೆಯುವವರಾಗಿರುವುದರಿಂದ,


ಆ ದಿನದಲ್ಲಿ ಕರ್ತನು ಅವರ ಅಂದುಗೆ, ತುರುಬುಬಲೆ, ಅರ್ಧಚಂದ್ರ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು