“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.
ಸಮಾರ್ಯ ಬೆಟ್ಟದಲ್ಲಿನ, ಬಾಷಾನಿನ ಕೊಬ್ಬಿದ ಹಸುಗಳಂತಿರುವ ಸ್ತ್ರೀಯರೇ, ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಜಜ್ಜಿ, ನೀವು ನಿಮ್ಮ ಪತಿಗಳಿಗೆ, “ಪಾನಗಳನ್ನು ತರಿಸಿ, ಕುಡಿಯೋಣ” ಎಂದು ಹೇಳುವವರೇ, ಈ ಮಾತನ್ನು ಕೇಳಿರಿ.
ನಿನ್ನವರು ರಕ್ತ ಸುರಿಸುವುದಕ್ಕೆ ಲಂಚ ತೆಗೆದುಕೊಂಡಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ದೋಚಿಕೊಂಡು ನನ್ನನ್ನು ಮರೆತೇ ಬಿಟ್ಟಿದ್ದಾರೆ ಇದು ಕರ್ತನಾದ ಯೆಹೋವನ ನುಡಿ.
ಪಾಪಿಷ್ಠ ಜನಾಂಗವೇ, ಅಧರ್ಮದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರು ಯೆಹೋವನನ್ನು ತೊರೆದಿದ್ದಾರೆ. ಇಸ್ರಾಯೇಲರ ಸದಮಲಸ್ವಾಮಿಯನ್ನು ಧಿಕ್ಕರಿಸಿದ್ದಾರೆ. ಆತನಿಗೆ ಬೆನ್ನು ಮಾಡಿ ಬೇರೆಯಾಗಿದ್ದಾರೆ.
ಎಲೀಷನು ಅಲ್ಲಿಂದ ಬೇತೇಲಿಗೆ ಹೊರಟು ಅಲ್ಲಿನ ಗುಡ್ಡವನ್ನು ಹತ್ತುತ್ತಿರುವಾಗ, ಆ ಊರಿನ ಹುಡುಗರು ಹೊರಗೆ ಬಂದು, “ಬೋಳು ಮಂಡೆಯವನೇ ಏರಿ ಬಾ, ಬೋಳು ಮಂಡೆಯವನೇ ಏರಿ ಬಾ” ಎಂದು ಕೂಗಿ ಅವನನ್ನು ಪರಿಹಾಸ್ಯ ಮಾಡಿದರು.
“ಐಗುಪ್ತರನ್ನು ಐಗುಪ್ತ್ಯರ ಮೇಲೆಯೇ ಎಬ್ಬಿಸುವೆನು: ಸಹೋದರನಿಗೆ ವಿರುದ್ಧವಾಗಿ ಸಹೋದರನು, ನೆರೆಯವನಿಗೆ ವಿರುದ್ಧವಾಗಿ ನೆರೆಯವನೂ, ಪಟ್ಟಣಕ್ಕೆ ವಿರುದ್ಧವಾಗಿ ಪಟ್ಟಣವೂ, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಹೋರಾಡುವವು.