Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 3:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ದಿನದಲ್ಲಿ ಅವನು ಗಟ್ಟಿಯಾಗಿ ಕೂಗುತ್ತಾ, ‘ನಾನು ನಿಮ್ಮನ್ನು ಸ್ವಸ್ಥಪಡಿಸುವುದಿಲ್ಲ. ನನ್ನ ಮನೆಯಲ್ಲಿ ಅನ್ನವಾಗಲೀ, ವಸ್ತ್ರವಾಗಲೀ ಇಲ್ಲ: ಜನರನ್ನು ಆಳುವ ಒಡೆಯನನ್ನಾಗಿ ನನ್ನನ್ನು ಮಾಡಬೇಡಿರಿ’” ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಆ ಸಹೋದರನು ಹೂಂಕರಿಸಿ, “ಈ ನಾಡಿಗೆ ವ್ರಣವೈದ್ಯನಾಗಿರಲು ನನಗಿಷ್ಟವಿಲ್ಲ. ಮನೆಯಲ್ಲಿ ತಿನ್ನಲು ಅನ್ನವಿಲ್ಲ, ಉಡಲು ಬಟ್ಟೆಯಿಲ್ಲ. ನನ್ನನ್ನು ಜನನಾಯಕನನ್ನಾಗಿ ಮಾಡುವುದು ಬೇಡ,” ಎಂದು ತಿರಸ್ಕಾರದಿಂದ ಉತ್ತರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅಣ್ಣನು ಹೂಂಕರಿಸಿ ದೇಶದ ವ್ರಣವೈದ್ಯನಾಗಿರುವದಕ್ಕೆ ನನಗಿಷ್ಟವಿಲ್ಲ, ನನ್ನ ಮನೆಯಲ್ಲಿ ಅನ್ನವೆಲ್ಲಿ, ಅಂಗಿಯೆಲ್ಲಿ? ನನ್ನನ್ನು ಜನದೊಡೆಯನನ್ನಾಗಿ ಮಾಡಬೇಡಿರಿ ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಆ ಸಹೋದರನು ಎದ್ದುನಿಂತು, “ನನ್ನಿಂದ ಆಗುವುದಿಲ್ಲ, ನನ್ನ ಮನೆಯಲ್ಲಿ ಸಾಕಷ್ಟು ಧಾನ್ಯವಾಗಲಿ ಬಟ್ಟೆಯಾಗಲಿ ಇಲ್ಲ. ನನ್ನನ್ನು ನಾಯಕನನ್ನಾಗಿ ಮಾಡಬೇಡಿ” ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆ ದಿನದಲ್ಲಿ ಅವನು ಆಣೆಯಿಟ್ಟು, “ನಾನು ಉಪಶಮನ ಮಾಡುವವನಾಗುವುದಿಲ್ಲ. ಏಕೆಂದರೆ ನನ್ನ ಮನೆಯಲ್ಲಿ ಅನ್ನವಾಗಲಿ, ವಸ್ತ್ರವಾಗಲಿ ಇಲ್ಲ; ನನ್ನನ್ನು ಪ್ರಜಾಧಿಪತಿಯನ್ನಾಗಿ ಮಾಡಬೇಡಿರಿ,” ಎಂದು ಉತ್ತರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 3:7
10 ತಿಳಿವುಗಳ ಹೋಲಿಕೆ  

ಹೀಗಿರಲು ಎಫ್ರಾಯೀಮು ತಾನು ರೋಗಿಯೆಂದು ತಿಳುಕೊಂಡಿತು, ಯೆಹೂದವು ತನ್ನ ವ್ರಣವನ್ನು ನೋಡಿಕೊಂಡಿತು; ಆಗ ಎಫ್ರಾಯೀಮು ಅಶ್ಶೂರದ ಕಡೆಗೆ ತಿರುಗಿಕೊಂಡು ಜಗಳಗಂಟ ಮಹಾರಾಜನ ಬಳಿಗೆ ದೂತರನ್ನು ಕಳುಹಿಸಿತು; ಆದರೆ ಅವನು ನಿಮ್ಮನ್ನು ಸ್ವಸ್ಥಮಾಡಲಾರನು, ನಿಮ್ಮ ಗಾಯವನ್ನು ಗುಣಪಡಿಸಲಾರನು.


ಅವರು, “ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥ ಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು.


ನೀವು ದುರ್ಬಲವಾದವುಗಳನ್ನು ಬಲಗೊಳಿಸುವುದಿಲ್ಲ, ರೋಗದವುಗಳನ್ನು ಸ್ವಸ್ಥಮಾಡುವುದಿಲ್ಲ, ಮುರಿದ ಅಂಗಗಳನ್ನು ಕಟ್ಟುವುದಿಲ್ಲ, ಕಳೆದು ಹೋದವುಗಳನ್ನು ಹುಡುಕುವುದಿಲ್ಲ, ಓಡಿಸಿದನ್ನು ನೀವು ಹಿಂದಕ್ಕೆ ತರುವುದಿಲ್ಲ, ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ.


ಯೆರೂಸಲೇಮ್ ಕನ್ಯೆಯೇ, ನಾನು ನಿನಗೆ ಏನು ಹೇಳಲಿ, ನಿನ್ನನ್ನು ಯಾವುದಕ್ಕೆ ಹೋಲಿಸಲಿ? ಚೀಯೋನ್ ಕನ್ಯೆಯೇ, ನಿನ್ನನ್ನು ಸಂತೈಸಲು ಸಮಾಧಾನಕರ ಮಾತುಗಳನ್ನು ಎಲ್ಲಿಂದ ತರಲಿ? ನಿನ್ನ ನಾಶನವು ಸಾಗರದಷ್ಟು ಅಪಾರ, ನಿನ್ನನ್ನು ಯಾರು ಸ್ವಸ್ಥಮಾಡಬಲ್ಲರು?


ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ? ಚೀಯೋನನ್ನು ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದಿಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟುಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮ ಕಾಲವನ್ನೂ ಎದುರುನೋಡಿದೆವು, ಹಾ, ಅಂಜಿಕೆಯೇ!


ನಿಮ್ಮ ಸಂತಾನದವರು ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ಪುನಃ ಕಟ್ಟುವರು. ನೀವು ತಲತಲಾಂತರಗಳಿಂದ ಹಾಳುಬಿದ್ದಿರುವ ಅಸ್ತಿವಾರಗಳ ಮೇಲೆ ಕಟ್ಟಡಗಳನ್ನು ಎಬ್ಬಿಸುವಿರಿ; “ಬಿದ್ದ ಗೋಡೆಯನ್ನು ಕಟ್ಟುವ ಜನಾಂಗ, ಹಾದಿಗಳನ್ನು ತಿರುಗಾಡುವ ಸ್ಥಿತಿಗೆ ತರುವ ಜನಾಂಗ” ಎಂಬ ಬಿರುದುಗಳು ನಿಮಗುಂಟಾಗುವವು.


ನಾನು ಆಕಾಶದ ಕಡೆಗೆ ಕೈಯೆತ್ತಿ ನಾನು ಸದಾಕಾಲ ಜೀವಿಸುವವನೆಂಬುದು ಎಷ್ಟು ನಿಶ್ಚಯ ಎಂದು ಖಂಡಿತವಾಗಿ ಪ್ರಮಾಣಮಾಡುವೆನು,


ಅಬ್ರಾಮನು, ಸೊದೋಮಿನ ಅರಸನಿಗೆ,


ನಮ್ಮ ಆಹಾರವು ನಮ್ಮ ಕಣ್ಣೆದುರಿಗೆ ಹಾಳಾಯಿತಲ್ಲಾ, ಸಂತೋಷವೂ ಹಾಗೂ ಉಲ್ಲಾಸವೂ ನಮ್ಮ ದೇವರ ಆಲಯವನ್ನು ಬಿಟ್ಟುಹೋಯಿತ್ತಲ್ಲಾ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು