ಯೆಶಾಯ 3:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವರ ಮುಖಭಾವವೇ ಅವರಿಗೆ ವಿರುದ್ಧ ಸಾಕ್ಷಿಯಾಗಿದೆ. ತಮ್ಮ ಪಾಪವನ್ನು ಮರೆಮಾಡದೇ ಸೊದೋಮಿನವರಂತೆ ಪ್ರಕಟಿಸುತ್ತಾರೆ. ಅಯ್ಯೋ, ಅವರ ಆತ್ಮದ ಗತಿಯೇ! ತಮಗೆ ತಾವೇ ಕೇಡು ಮಾಡಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅವರ ಮುಖಲಕ್ಷಣವೇ ಅವರ ವಿರುದ್ಧ ಸಾಕ್ಷಿಯಾಗಿದೆ. ಅವರು ಸೊದೋಮಿನವರಂತೆ ತಮ್ಮ ಪಾಪಗಳನ್ನು ಮುಚ್ಚುಮರೆಯಿಲ್ಲದೆ ಮೆರೆಯಿಸುತ್ತಾರೆ. ಅಯ್ಯೋ, ಅವರಿಗೆ ಕೇಡು! ತಮಗೆ ತಾವೇ ಕೇಡನ್ನು ಬರಮಾಡಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವರ ಮುಖಭಾವವೇ ಅವರಿಗೆ ವಿರುದ್ಧ ಸಾಕ್ಷಿಯಾಗಿದೆ; ತಮ್ಮ ಪಾಪವನ್ನು ಮರೆಮಾಜದೆ ಸೊದೋವಿುನವರಂತೆ ಮೆರೆಯಿಸುತ್ತಾರೆ. ಅಯ್ಯೋ, ಅವರ ಆತ್ಮದ ಗತಿಯೇ! ತಮಗೆ ತಾವೇ ಕೇಡು ಮಾಡಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಜನರ ಮುಖಭಾವವೇ ಅವರ ದುಷ್ಕೃತ್ಯಗಳನ್ನು ಎತ್ತಿತೋರಿಸುವವು. ಅವರು ತಮ್ಮ ಪಾಪಗಳಿಗಾಗಿ ಹೆಚ್ಚಳಪಡುವರು. ಅವರು ಸೊದೋಮಿನ ಜನರಂತಿದ್ದಾರೆ. ತಮ್ಮ ಪಾಪಗಳನ್ನು ಯಾರು ನೋಡಿದರೂ ಅವರಿಗೆ ಚಿಂತೆಯಿಲ್ಲ. ಇದು ನಿಜವಾಗಿಯೂ ಭಯಂಕರವಾದದ್ದು. ಅವರು ತಮಗೆ ಬಹಳ ಸಂಕಟಗಳನ್ನು ಬರಮಾಡಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವರ ಮುಖಭಾವವೇ ಅವರಿಗೆ ವಿರುದ್ಧವಾಗಿ ಸಾಕ್ಷಿಯಾಗಿದೆ. ತಮ್ಮ ಪಾಪವನ್ನು ಸೊದೋಮಿನಂತೆ ಮರೆಮಾಡದೆ ಪ್ರಕಟ ಮಾಡುತ್ತಾರೆ. ಅವರಿಗೆ ಕಷ್ಟ! ಏಕೆಂದರೆ ತಮಗೆ ತಾವೇ ಕೇಡನ್ನು ಪ್ರತೀಕಾರವಾಗಿ ಮಾಡಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿ |