ಯೆಶಾಯ 30:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅವುಗಳನ್ನೇ ಆಧಾರ ಮಾಡಿಕೊಂಡಿದ್ದರಿಂದ ಎತ್ತರವಾದ ಗೋಡೆಯ ಒಂದು ಭಾಗವು ಬಾಗುತ್ತಾ, ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಕೊಳ್ಳುವ ಹಾಗೆ, ನಿಮ್ಮ ಅಪರಾಧವೂ ನಿಮಗೆ ಅಪಾಯಕರವಾಗುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಇದ್ದಕ್ಕಿದ್ದಂತೆ ಆ ಗೋಡೆ ತಟ್ಟನೆ ಬಿದ್ದುಹೋಗುವುದು. ಅಂತೆಯೇ ನಿಮ್ಮ ಅಪರಾಧ ನಿಮಗೆ ಅಪಾಯಕರವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಎತ್ತರವಾದ ಗೋಡೆಯ ಒಂದು ಭಾಗವು ಬೊಗ್ಗುತ್ತಾ ತಟ್ಟನೆ ಕ್ಷಣ ಮಾತ್ರದಲ್ಲಿ ಕವಚಿಕೊಳ್ಳುವ ಹಾಗೆ ನಿಮ್ಮ ಅಪರಾಧವೂ ನಿಮಗೆ ಅಪಾಯಕರವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನೀವು ತಪ್ಪಿತಸ್ಥರಾಗಿದ್ದೀರಿ. ನೀವು ಬಿರುಕು ಬಿಟ್ಟಿರುವ ಎತ್ತರದ ಗೋಡೆಯಂತಿದ್ದೀರಿ. ಆ ಗೋಡೆಯು ಇದ್ದಕ್ಕಿದ್ದಂತೆ ನೆಲಕ್ಕುರುಳಿ ಚೂರುಚೂರಾಗುವದು. ಒಳ್ಳೆಯ ಸಮಯವು ಬರುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಎತ್ತರವಾದ ಗೋಡೆಯ ಒಂದು ಭಾಗವು ಉಬ್ಬಿಕೊಂಡು ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿ ಬೀಳುವ ಹಾಗೆ ನಿಮ್ಮ ಅಪರಾಧವು ನಿಮಗೆ ಅಪಾಯಕರವಾಗಿರುವುದು. ಅಧ್ಯಾಯವನ್ನು ನೋಡಿ |