Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಉರಿಯಿಂದ ಕೆಂಡವನ್ನು ತೆಗೆಯುವುದಕ್ಕಾಗಲಿ, ಬಾವಿಯಿಂದ ನೀರನ್ನು ತೆಗೆಯುವುದಕ್ಕಾಗಲಿ, ಬೋಕಿಯ ತುಂಡುಗಳಲ್ಲಿ ಒಂದೂ ಉಳಿಯದಂತೆ, ಒಬ್ಬನು ಕುಂಬಾರನ ಗಡಿಗೆಯನ್ನು ಚೂರುಚೂರಾಗಿ ಒಡೆದು ಬಿಡುವ ರೀತಿಯಲ್ಲಿ ಆತನು ಆ ಗೋಡೆಯನ್ನು ನಾಶಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆ ಗೋಡೆಯೆಂಬ ಕುಂಬಾರನ ಮಡಕೆಯ ಚೂರಿನಿಂದ, ಬೆಂಕಿಯ ಒಲೆಯಿಂದ ಕೆಂಡವನ್ನು ತೆಗೆಯುವುದಕ್ಕಾಗಲೀ ತೊಟ್ಟಿಯ ನೀರನ್ನು ತೋಡಿಕೊಳ್ಳುವುದಕ್ಕಾಗಲೀ ಸಾಧ್ಯವಾಗದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಉರಿಯಿಂದ ಕೆಂಡವನ್ನು ತೆಗೆಯುವದಕ್ಕಾಗಲಿ, ಬಾವಿಯಿಂದ ನೀರನ್ನು ಗೋಚುವದಕ್ಕಾಗಲಿ ಬೋಕಿಯ ತುಂಡುಗಳಲ್ಲಿ ಒಂದೂ ಉಳಿಯದಂತೆ ಒಬ್ಬನು ಕುಂಬಾರನ ಗಡಿಗೆಯನ್ನು ಚೂರುಚೂರಾಗಿ ಒಡೆದುಬಿಡುವ ರೀತಿಯಲ್ಲಿ ಆತನು ಆ ಗೋಡೆಯನ್ನು ಒಡೆದು ಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಒಂದು ದೊಡ್ಡ ಆವೆಮಣ್ಣಿನ ಭರಣಿ ನಚ್ಚುನೂರಾಗಿ ಹೋಗುವಂತೆ ನೀವಿದ್ದೀರಿ. ಅದರ ತುಂಡುಗಳಿಂದ ಏನೂ ಪ್ರಯೋಜನವಿಲ್ಲ. ಆ ಭರಣಿಯ ಚೂರಿನಿಂದ ಸುಡುವ ಕಲ್ಲಿದ್ದಲನ್ನು ಹೊರತೆಗೆಯಲು ಅಥವಾ ಅದರಿಂದ ನೀರು ಸೇದಲು ಆಗುವದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಒಲೆಯಿಂದ ಕೆಂಡವನ್ನು ತೆಗೆಯುವುದಕ್ಕಾಗಲಿ, ಬಾವಿಯಿಂದ ನೀರನ್ನು ತೆಗೆಯುವುದಕ್ಕಾಗಲಿ, ಬೋಕಿಯ ತುಂಡುಗಳಲ್ಲಿ ಒಂದೂ ಉಳಿಯದಂತೆ ಒಬ್ಬನು ಕುಂಬಾರನ ಗಡಿಗೆಯನ್ನು ಚೂರುಚೂರಾಗಿ ಒಡೆದು ಬಿಡುವ ರೀತಿಯಲ್ಲಿ ಆತನು ಆ ಗೋಡೆಯನ್ನು ಒಡೆದುಬಿಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:14
25 ತಿಳಿವುಗಳ ಹೋಲಿಕೆ  

ನೀನು ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ; ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ” ಎಂದು ಹೇಳಿದನು.


ಗರ್ವಪಡಬೇಡ, ಭಯದಿಂದಿರು. ದೇವರು ಹುಟ್ಟುಕೊಂಬೆಗಳನ್ನು ಉಳಿಸದೆ ಇದ್ದ ಮೇಲೆ ನಿನ್ನನ್ನೂ ಉಳಿಸುವುದಿಲ್ಲ.


ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ, ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೋ?


ನಲವತ್ತು ದಿನ ಮರುಭೂಮಿಯಲ್ಲಿ ನಡಿಸಲ್ಪಡುತ್ತಾ, ಸೈತಾನನಿಂದ ಶೋಧಿಸಲ್ಪಟ್ಟನು. ಆ ದಿನಗಳಲ್ಲಿ ಆತನು ಏನನ್ನೂ ತಿನ್ನಲಿಲ್ಲ. ಆ ದಿನಗಳು ಮುಗಿದ ಮೇಲೆ ಆತನಿಗೆ ಹಸಿವಾಯಿತು.


ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ, “ಇದು ನಡೆಯುವುದು ನಿಶ್ಚಯ, ನಾನು ನೆರವೇರಿಸುವೆನು; ಹಿಂದೆಗೆಯೆನು, ಕ್ಷಮಿಸೆನು, ಕರುಣಿಸೆನು; ನಿನ್ನ ದುರ್ಮಾರ್ಗ, ದುಷ್ಕೃತ್ಯಗಳಿಗೆ ಸರಿಯಾಗಿ ನಿನಗೆ ನ್ಯಾಯತೀರ್ಪು ಆಗುವುದು” ಇದು ಕರ್ತನಾದ ಯೆಹೋವನ ನುಡಿ.


ನಾನಂತು, ಅವರನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು” ಎಂದು ಹೇಳಿದನು.


ಆದಕಾರಣ ನಾನು ಕೋಪೋದ್ರೇಕದಿಂದ ವರ್ತಿಸುವೆನು, ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ಅವರು ಕೂಗಿಕೊಳ್ಳುವ ಮಹಾ ಶಬ್ದವು ನನ್ನ ಕಿವಿಗೆ ಬಿದ್ದರೂ ಆಲಿಸುವುದಿಲ್ಲ.”


ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು, ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಯೆಹೋವನಾದ ನಾನು ದಂಡಿಸುವವನು ಎಂಬುದು ನಿನಗೆ ಗೊತ್ತಾಗುವುದು.


ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ನಿನ್ನ ದುರ್ಮಾರ್ಗದ ಫಲವನ್ನು ನಿನಗೆ ತಿನ್ನಿಸುವೆನು; ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.”


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ, ಅಸಹ್ಯ ವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ನಿನ್ನನ್ನು ಕುಂದಿಸುವೆನು, ನಾನು ನಿನಗೆ ಕರುಣೆ ತೋರಿಸೆನು, ಕಟಾಕ್ಷಿಸೆನು.


ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ, ಚೌಕಗಳಲ್ಲಿಯೂ ರೋದನವು ತುಂಬಿದೆ; “ಮೋವಾಬನ್ನು ಯಾರಿಗೂ ಇಷ್ಟವಲ್ಲದ ಮಡಿಕೆಯಂತೆ ಒಡೆದುಬಿಟ್ಟಿದ್ದೇನೆ” ಎಂದು ಯೆಹೋವನು ಅನ್ನುತ್ತಾನೆ.


ನಾನು ಅಮಲಿನಿಂದ ತುಂಬಿಸಿ ಹಿರಿಕಿರಿಯರಾದ ಸಮಸ್ತರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ನಾನು ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ನಾಶಮಾಡದೆ ಬಿಡೆನು” ಇದು ಯೆಹೋವನ ನುಡಿ.


ಇಗೋ, ಇವರೆಲ್ಲಾ ಕೂಳೆಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡುವುದು; ಜ್ಞಾಲೆಯ ರಭಸದಿಂದ ತಮ್ಮನ್ನು ರಕ್ಷಿಸಿಕೊಳ್ಳಲಾರರು; ಅದು ಕಾಯಿಸಿಕೊಳ್ಳುವ ಕೆಂಡವಲ್ಲ, ಮುಂದೆ ಕುಳಿತರೆ ಹಾಯಾಗಿರುವ ಬೆಂಕಿಯೂ ಅಲ್ಲ.


ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿದುಹೋಗುವವು, ಹೆಂಗಸರು ಬಂದು ಅವುಗಳಿಗೆ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಆ ಪ್ರಜೆಯು ಬುದ್ಧಿಹೀನವಾದವರೇ. ಆದಕಾರಣ ಸೃಷ್ಟಿಸಿದಾತನು ಅವರಿಗೆ ಕರುಣೆ ತೋರಿಸುವುದಿಲ್ಲ, ನಿರ್ಮಿಸಿದಾತನು ಅವರಿಗೆ ದಯೆತೋರಿಸುವುದಿಲ್ಲ.


ನಾನು ಸತ್ತವರಂತೆ ಯಾರ ಜ್ಞಾಪಕಕ್ಕೂ ಬಾರದವನಾದೆನು; ಒಡೆದ ಬೋಕಿಯಂತಿದ್ದೇನೆ.


ಆ ಗಾಳಿಯು ಕರುಣೆ ಇಲ್ಲದೆ ಅವನ ಮೇಲೆ ತನ್ನ ಬಾಣಗಳನ್ನು ಎಸೆಯುತ್ತಲಿರುವನು, ಅವನು ಆತನ ಕೈಯಿಂದ ತಪ್ಪಿಸಿಕೊಳ್ಳಲೇ ಬೇಕೆಂದಿರುವನು.


ಯೆಹೋವನು ಅಂಥವನನ್ನು ಎಂದಿಗೂ ಕ್ಷಮಿಸದೆ ಬಹಳ ಮಹಾಕೋಪದಿಂದ, ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವನು.


ಆದಕಾರಣ ಅವನಿಗೆ ತಟ್ಟನೆ ವಿಪತ್ತು ಸಂಭವಿಸುವುದು, ಏಳದ ಹಾಗೆ ಫಕ್ಕನೆ ಮುರಿಯಲ್ಪಡುವನು.


ಇದಲ್ಲದೆ, ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ಗುಣ ಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಪ್ರಕಾಶಮಾನವಾಗಿತ್ತು.


ಇವರೂ ಇವರ ಪೂರ್ವಿಕರೂ ಬೆಟ್ಟಗುಡ್ಡಗಳಲ್ಲಿ ಧೂಪಹಾಕಿ, ನನ್ನನ್ನು ಹೀನೈಸಿ ನಡೆಸಿದ ಅಪರಾಧ ಕಾರ್ಯದ ಫಲವನ್ನು ಅದರ ಅಳತೆಗೆ ಸರಿಯಾಗಿ ಇವರ ಮಡಿಲಿಗೆ ಸುರಿಯುವೆನು” ಎಂದು ಯೆಹೋವನು ಹೇಳುತ್ತಾನೆ.


ಅಯ್ಯೋ, ಅಪರಂಜಿಯಷ್ಟು ಅಮೂಲ್ಯರಾಗಿದ ಚೀಯೋನಿನ ಪ್ರಜೆಗಳು, ಆದರೆ ಈಗ ಅವರು ಕುಂಬಾರನ ಕೈಕೆಲಸದ ಮಣ್ಣಿನ ಮಡಿಕೆಗಳೋ ಎಂಬಂತೆ ತಿರಸ್ಕರಿಸಲ್ಪಟ್ಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು