ಯೆಶಾಯ 30:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಒಬ್ಬನ ಬೆದರಿಕೆಗೆ ಒಂದು ಸಾವಿರ ಜನರು ಓಡುವರು; ಐವರು ಬೆದರಿಸುವುದರಿಂದ ನೀವು ಓಡಿಹೋಗುವಿರಿ; ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಿನ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಒಬ್ಬ ಸೈನಿಕನ ಬೆದರಿಕೆಗೆ ಸಾವಿರ ಜನರು ಪರಾರಿಯಾಗುವರು. ಐದು ಸೈನಿಕರ ಬೆದರಿಕೆಗೆ ನೀವೆಲ್ಲರೂ ಓಡಿಹೋಗುವಿರಿ. ಕಟ್ಟಕಡೆಗೆ ಬೆಟ್ಟದ ತುದಿಯಲ್ಲಿರುವ ಧ್ವಜಸ್ತಂಭದಂತೆ, ಗುಡ್ಡದ ಮೇಲಿರುವ ಕೈಕಂಬದಂತೆ ಒಬ್ಬಂಟಿಗನಾಗಿ ಉಳಿಯುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಒಬ್ಬನ ಬೆದರಿಕೆಗೆ ಸಾವಿರ ಜನರು ಓಡುವರು; ಐವರು ಬೆದರಿಸುವದರಿಂದ ನೀವು ಓಡಿ ಹೋಗುವಿರಿ; ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಗಣ ಕಂಬದಂತೆಯೂ [ಒಂಟಿಯಾಗಿ] ಉಳಿಯುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಶತ್ರುವಿನಲ್ಲಿ ಒಬ್ಬನು ಬೆದರಿಸಿದರೆ ನಿಮ್ಮಲ್ಲಿರುವ ಸಾವಿರ ಮಂದಿ ಓಡುವರು. ಐದು ಮಂದಿ ವೈರಿಗಳು ಬೆದರಿಕೆ ಹಾಕಿದರೆ ನೀವೆಲ್ಲರೂ ಅವರ ಮುಂದಿನಿಂದ ಓಡಿಹೋಗುವಿರಿ. ಕೊನೆಗೆ ನಿಮ್ಮ ಸೈನ್ಯದಲ್ಲಿ ಉಳಿಯುವ ವಸ್ತು ಯಾವದೆಂದರೆ ಬೆಟ್ಟದ ಮೇಲೆ ನೆಟ್ಟಿರುವ ನಿಮ್ಮ ಧ್ವಜಸ್ತಂಭವೊಂದೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಒಬ್ಬನ ಬೆದರಿಕೆಗೆ ಸಾವಿರ ಜನರು ಓಡುವರು, ಐವರು ಹೆದರಿಸುವುದರಿಂದ ನೀವೆಲ್ಲರೂ ಓಡಿಹೋಗುವಿರಿ, ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಣ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.” ಅಧ್ಯಾಯವನ್ನು ನೋಡಿ |