ಯೆಶಾಯ 30:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆದರೆ ಸರ್ವೇಶ್ವರ ನಿಮಗೆ ಕೃಪೆತೋರಬೇಕೆಂದು ಕಾದಿರುತ್ತಾರೆ. ನಿಮ್ಮನ್ನು ಕರುಣಿಸಲು ಎದ್ದುನಿಂತಿದ್ದಾರೆ. ಅವರು ನ್ಯಾಯಪರರಾದ ದೇವರು, ಅವರಿಗಾಗಿ ಕಾದಿರುವವರೆಲ್ಲರೂ ಧನ್ಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಯೆಹೋವನು ನಿಮಗೆ ಕರುಣೆ ತೋರಿಸಲು ಇಷ್ಟಪಡುತ್ತಾನೆ. ಆತನು ನಿಮ್ಮನ್ನು ಎದುರು ನೋಡುತ್ತಿದ್ದಾನೆ. ಆತನು ಎದ್ದು ನಿಮ್ಮನ್ನು ಸಂತೈಸಲು ಬಯಸುತ್ತಾನೆ. ದೇವರಾದ ಯೆಹೋವನು ನ್ಯಾಯವಂತನಾಗಿದ್ದಾನೆ. ಆತನ ಸಹಾಯವನ್ನು ನಿರೀಕ್ಷಿಸುವವರೆಲ್ಲರೂ ಆಶೀರ್ವದಿಸಲ್ಪಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಹೀಗಿರಲು ಯೆಹೋವ ದೇವರು ನಿಮಗೆ ಕೃಪೆಯನ್ನು ತೋರಿಸಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತವಾಗಿ ಕಾಣಿಸಿಕೊಳ್ಳುವನು. ಏಕೆಂದರೆ ಯೆಹೋವ ದೇವರು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು. ಅಧ್ಯಾಯವನ್ನು ನೋಡಿ |