Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಫರೋಹನ ಆಶ್ರಯವನ್ನು ಪಡೆದು, ಐಗುಪ್ತವನ್ನು ಆಶ್ರಯ ಮಾಡಿಕೊಳ್ಳಬೇಕೆಂದು, ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನನ್ನ ಸಲಹೆಯನ್ನು ಕೇಳದೆ ಈಜಿಪ್ಟಿಗೆ ಪ್ರಯಾಣ ಬೆಳೆಸಿದ್ದಾರೆ. ಫರೋಹನ ಆಶ್ರಯವನ್ನು ಬಯಸುತ್ತಾರೆ. ಈಜಿಪ್ಟಿನವರನ್ನು ಮರೆಹೋಗಬೇಕೆಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಫರೋಹನ ಆಶ್ರಯವನ್ನು ಪಡೆದು ಐಗುಪ್ತವನ್ನು ಮರೆಹೊಗಬೇಕೆಂದು ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಈ ಮಕ್ಕಳು ಈಜಿಪ್ಟಿಗೆ ಸಹಾಯಕ್ಕಾಗಿ ಹೋಗುತ್ತಾರೆ, ಆದರೆ ಅವರು ಹಾಗೆ ಮಾಡುವದು ಸರಿಯೋ ಎಂದು ನನ್ನ ಹತ್ತಿರ ಕೇಳುವದಿಲ್ಲ. ಫರೋಹನು ತಮ್ಮನ್ನು ರಕ್ಷಿಸುತ್ತಾನೆಂದು ಅವರು ತಿಳಿದಿದ್ದಾರೆ. ಈಜಿಪ್ಟೇ ತಮ್ಮನ್ನು ಕಾಪಾಡಬೇಕು ಎಂಬುದು ಅವರ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಫರೋಹನಲ್ಲಿ ತಾವು ಬಲಗೊಳ್ಳುವ ಆಶ್ರಯವನ್ನು ಈಜಿಪ್ಟಿನ ನೆರಳಿನಲ್ಲಿ ಭರವಸವಿಡಬೇಕೆಂದು ನನ್ನ ಮಾತನ್ನು ಕೇಳದೆ, ಈಜಿಪ್ಟಿಗೆ ಪ್ರಯಾಣವಾಗಿ ಹೊರಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:2
26 ತಿಳಿವುಗಳ ಹೋಲಿಕೆ  

“‘ಜಜ್ಜಿದ ದಂಟಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತೀಯಷ್ಟೆ. ಒಬ್ಬನು ಅಂಥ ಕೋಲನ್ನು ಆಧಾರ ಮಾಡಿಕೊಳ್ಳುವುದಾದರೆ ಅದು ಅವನ ಕೈಯನ್ನು ತಿವಿದು ಒಳಕ್ಕೆ ಹೋಗುತ್ತದೆ! ಐಗುಪ್ತದ ಅರಸನಾದ ಫರೋಹನನಲ್ಲಿ ಭರವಸವಿಟ್ಟವರಿಗೆ ಅದೇ ಗತಿಯಾಗುವುದು.


ಇವರೆಲ್ಲರನ್ನೂ ಕಾರೇಹನ ಮಗನಾದ ಯೋಹಾನಾನನೂ, ಸಕಲ ಸೇನಾಧಿಪತಿಗಳೂ ಕರೆದುಕೊಂಡು ಐಗುಪ್ತಕ್ಕೆ ಹೋಗಿ ತಹಪನೇಸ್ ಊರಿಗೆ ಸೇರಿದರು. ಯೆಹೋವನ ಮಾತನ್ನು ಕೇಳಲೇ ಇಲ್ಲ.


ಯೆಹೋವನ ಚಿತ್ತವನ್ನು ತಿಳಿದುಕೊಳ್ಳುವುದಕ್ಕೆ ಅವನು ಮಹಾಯಾಜಕನಾದ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಯೆಹೋವನ ಸನ್ನಿಧಿಯಲ್ಲಿ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನೂ ಮತ್ತು ಇಸ್ರಾಯೇಲರ ಸರ್ವಸಮೂಹದವರೂ ಅವನ ಮಾತಿನಂತೆ ಹೊರಡಬೇಕು, ಹಿಂತಿರುಗಬೇಕು, ಅವನ ಮಾತಿನಂತೆ ನಡೆಯಬೇಕು.” ಎಂದು ಆಜ್ಞಾಪಿಸಿದನು.


ಯಾವನು ನಮಗೆ ಜೀವಶ್ವಾಸವೋ, ಯಾವನು ಯೆಹೋವನ ಅಭಿಷಿಕ್ತನೋ, ಯಾವನನ್ನು ಆಶ್ರಯಿಸಿ ಜನಾಂಗಗಳ ಮಧ್ಯದಲ್ಲಿ ಉಳಿಯುವೆವು ಎಂದು ನಾವು ನಂಬಿಕೊಂಡಿದ್ದೆವೋ ಅವನು ಅವರ ಗುಂಡಿಗಳಲ್ಲಿ ಸಿಕ್ಕಿಬಿದ್ದನು.


ನಿಮ್ಮನ್ನು ನೀವೇ ಮೋಸಪಡಿಸಿಕೊಂಡಿದ್ದೀರಿ; ನೀವು ನನ್ನ ಬಳಿಗೆ ಬಂದು, ‘ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು; ನಮ್ಮ ದೇವರಾದ ಯೆಹೋವನು ಯಾವ ಅಪ್ಪಣೆ ಕೊಡುತ್ತಾನೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು’ ಎಂಬುದಾಗಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನನ್ನನ್ನು ಕಳುಹಿಸಿದಿರಲ್ಲಾ.


ಅವರು ಅವನಿಗೆ, “ದಯಮಾಡು, ನಮ್ಮ ಬಿನ್ನಹವನ್ನು ಲಾಲಿಸು; ನಿನ್ನ ಕಣ್ಣಿಗೆ ಕಾಣುವ ಪ್ರಕಾರ ಅಪಾರ ಜನರಲ್ಲಿ ನಾವು ಕೆಲವರು ಮಾತ್ರ ಉಳಿದಿದ್ದೇವೆ.


ಆಗ ಫರೋಹನ ಸೈನ್ಯವು ಐಗುಪ್ತದಿಂದ ಹೊರಟಿತ್ತು; ಇದನ್ನು ಕೇಳಿ ಯೆರೂಸಲೇಮನ್ನು ಮುತ್ತಿದ್ದ ಕಸ್ದೀಯರು ಬಿಟ್ಟು ಹೋಗಿದ್ದರು.


“ದಯಮಾಡಿ ಯೆಹೋವನ ಚಿತ್ತವೇನೆಂದು ಆತನನ್ನು ನಮಗೋಸ್ಕರ ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮ್ಮ ವಿರುದ್ಧವಾಗಿ ಯುದ್ಧ ಮಾಡುತ್ತಿದ್ದಾನಲ್ಲಾ; ಒಂದು ವೇಳೆ ಯೆಹೋವನು ತನ್ನ ಸಮಸ್ತ ಅದ್ಭುತಕಾರ್ಯಗಳಿಗೆ ಅನುಗುಣವಾಗಿ ನಮ್ಮ ಪಕ್ಷವನ್ನು ವಹಿಸಿ ಈ ಶತ್ರುವು ನಮ್ಮ ಕಡೆಯಿಂದ ತೊಲಗುವಂತೆ ಮಾಡಿಯಾನು” ಎಂದು ಅವರ ಮೂಲಕ ವಿಜ್ಞಾಪಿಸಿದಾಗ ಯೆಹೋವನಿಂದ ಯೆರೆಮೀಯನಿಗೆ ದೈವೋಕ್ತಿಯು ದೊರೆಯಿತು.


“ಇದೂ ನಿನಗೆ ಅಸಾಧ್ಯವಾಗುವುದಾದರೆ ನನ್ನ ಒಡೆಯನ ಸೇನಾಧಿಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವುದು ನಿನ್ನಿಂದ ಹೇಗೆ ಸಾಧ್ಯವಾಗುತ್ತದೆ? ರಥಾಶ್ವಬಲಗಳಿಗಾಗಿ ನೀನು ಐಗುಪ್ತ್ಯರನ್ನು ನಂಬಿಕೊಂಡಿರುವಂತೆ ಕಾಣುತ್ತದೆ.


ಓಹೋ, ಕೂಷಿನ ನದಿಗಳ ಆಚೆಯಲ್ಲಿರುವ ಸೀಮೆ, ರೆಕ್ಕೆಗಳನ್ನು ಪಟಪಟನೆ ಬಡಿಯುವ ನಾಡು,


ಆಲೋಚನೆ ಹೇಳಿರಿ, ತೀರ್ಮಾನಿಸಿರಿ; ನಡು ಮಧ್ಯಾಹ್ನದಲ್ಲಿ ನಿಮ್ಮ ನೆರಳು ರಾತ್ರಿಯ ಕತ್ತಲಿನಂತೆ ದಟ್ಟವಾದ ನೆರಳನ್ನು ಕೊಡಲಿ. ನಿಮ್ಮಲ್ಲಿರುವ ದೀನದಲಿತರನ್ನು ಸಂರಕ್ಷಿಸು, ತಪ್ಪಿಸಿಕೊಂಡು ಹೋಗುವ ಜನರ ವಿಷಯವನ್ನು ಬಯಲುಮಾಡಬೇಡಿ.


ಕೆಲವು ವರ್ಷಗಳಾದ ನಂತರ ಅರಸನಾದ ಹೋಶೇಯನು ಪ್ರತಿವರ್ಷವೂ ಕೊಡಬೇಕಾದ ಕಪ್ಪವನ್ನು ಕೊಡದೆಹೋದುದರಿಂದಲೂ, ಐಗುಪ್ತದ ಅರಸನಾದ ಸೋ ಎಂಬುವವನ ಬಳಿಗೆ ರಾಯಭಾರಿಗಳನ್ನು ಕಳುಹಿಸಿದ್ದರಿಂದಲೂ ಅಶ್ಶೂರದ ಅರಸನು ಇವನನ್ನು ದ್ರೋಹಿಯೆಂದು ತಿಳಿದು ಬಂಧಿಸಿ ಸೆರೆಯಲ್ಲಿಟ್ಟನು.


ಆದರೆ ಯೆಹೋಷಾಫಾಟನು ಇಸ್ರಾಯೇಲ್ಯರ ಅರಸನನ್ನು, “ಯೆಹೋವನ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೆ ಪ್ರವಾದಿಗಳು ಇರುವುದಿಲ್ಲವೋ?” ಎಂದು ಕೇಳಿದನು.


ಅದು, ‘ನೀವು ಯಥಾರ್ಥಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವುದಾದರೆ ಬಂದು ನನ್ನ ನೆರಳನ್ನು ಆಶ್ರಯಿಸಿಕೊಳ್ಳಿರಿ; ಇಲ್ಲವಾದರೆ ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರು ವೃಕ್ಷಗಳನ್ನು ದಹಿಸಿಬಿಡುವುದು’ ಎಂದಿತು.


ಆಗ ಇಸ್ರಾಯೇಲ್ಯರು ಅವರ ಬುತ್ತಿಯಲ್ಲಿ ಸ್ವಲ್ಪ ತೆಗೆದುಕೊಂಡರು. ಆದರೆ ಯೆಹೋವನನ್ನು ವಿಚಾರಿಸಲಿಲ್ಲ.


ನೀವು ಐಗುಪ್ತದೇಶವನ್ನು ತಿರುಗಿ ಎಂದಿಗೂ ನೋಡುವುದಿಲ್ಲವೆಂದು ಯೆಹೋವನು ಹೇಳಿದ್ದರೂ ಆತನು ನಿಮ್ಮನ್ನು ಹಡಗುಗಳನ್ನೇರಿಸಿ ಅಲ್ಲಿಗೆ ತಿರುಗಿ ಹೋಗ ಮಾಡುವನು. ಅಲ್ಲಿ ನೀವು ಶತ್ರುಗಳಿಗೆ ನಿಮ್ಮನ್ನು ದಾಸದಾಸಿಯರನ್ನಾಗಿ ಮಾರಿಕೊಳ್ಳಬೇಕೆಂದು ಅಪೇಕ್ಷಿಸಿದರೂ ಯಾರೂ ನಿಮ್ಮನ್ನು ಕೊಂಡುಕೊಳ್ಳುವುದಿಲ್ಲ.


ಜಜ್ಜಿದ ದಂಟಿಗೆ ಸಮಾನವಾಗಿರುವ ಐಗುಪ್ತದಲ್ಲಿ ಭರವಸವಿಟ್ಟಿರುವೆಯೋ? ಒಬ್ಬನು ಅಂಥ ದಂಟಿನ ಮೇಲೆ ಕೈಯೂರಿಕೊಳ್ಳುವುದಾದರೆ ಅದು ಅವನ ಕೈಯನ್ನು ತಿವಿದು ಒಳಗೆ ಹೋಗುತ್ತದಲ್ಲವೇ; ಐಗುಪ್ತದ ಅರಸನಾದ ಫರೋಹನನಲ್ಲಿ ಭರವಸವಿಟ್ಟವರಿಗೆ ಇದೇ ಗತಿಯಾಗುವುದು.


“ಗುಣಗುಟ್ಟುವ, ಪಿಸುಮಾತನಾಡುವ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನೂ ಆಶ್ರಯಿಸಿರಿ” ಎಂದು ಒಂದು ವೇಳೆ ನಿಮಗೆ ಹೇಳಾರು, “ಜನರು ತಮ್ಮ ದೇವರನ್ನೇ ಆಶ್ರಯಿಸಬಾರದೋ? ಜೀವಿತರಿಗಾಗಿ ಸತ್ತವರಲ್ಲಿ ವಿಚಾರಿಸುವುದು ಯುಕ್ತವೋ?


ನೀನು ಐಗುಪ್ತದ ದಾರಿಯಲ್ಲಿ ನಡೆದದ್ದೇಕೆ? ನೈಲ್ ನದಿಯ ನೀರನ್ನು ಕುಡಿಯ ಅವಶ್ಯಕತೆ ಇತ್ತೆ? ಅಶ್ಶೂರದ ಮಾರ್ಗದಲ್ಲಿ ಹೆಜ್ಜೆಯಿಟ್ಟದ್ದೇಕೆ? ಯೂಫ್ರೆಟಿಸ್ ನದಿಯ ಜಲವನ್ನು ಪಾನಮಾಡುವ ಅವಶ್ಯಕತೆ ಇತ್ತೇ?


ಬೇಡವೇ ಬೇಡ; ನಾವು ಯುದ್ಧ ಕಾಣದೆ, ತುತ್ತೂರಿಯ ಶಬ್ದ ಕೇಳದೆ, ಅನ್ನದ ಕೊರತೆಯಿಂದ ಹಸಿವಾಗದೆ ಇರುವ ಐಗುಪ್ತ ದೇಶಕ್ಕೆ ಹೋಗಿ ಅಲ್ಲೇ ವಾಸಿಸುವೆವು’ ಎಂದುಕೊಂಡರೆ,


ಅವರು ನನ್ನಿಂದ ಅಗಲಿ ಹೋಗಿದ್ದಾರೆ, ಹಾಳಾಗಲಿ! ನನಗೆ ದ್ರೋಹಮಾಡಿದ್ದಾರೆ, ನಾಶವಾಗಲಿ! ನಾನು ಅವರನ್ನು ಉದ್ಧರಿಸಬೇಕೆಂದು ಇರುವಾಗಲೂ ನನ್ನ ವಿಷಯವಾಗಿ ಸುಳ್ಳಾಡಿದ್ದಾರೆ, ಅವರನ್ನು ಹೇಗೆ ಉದ್ಧರಿಸಲಿ!


ಅದು ಒಂಟಿಯಾದ ಕಾಡುಕತ್ತೆಯಂತೆ ಮನಸ್ಸು ಬಂದ ಹಾಗೆ ನಡೆದು ಅಶ್ಶೂರಕ್ಕೆ ಹೋಗಿದೆ. ಎಫ್ರಾಯೀಮು ಹಣಕೊಟ್ಟು ಜಾರರನ್ನು (ವ್ಯಭಿಚಾರಿಗಳನ್ನು) ಸಂಪಾದಿಸಿಕೊಂಡಿದೆ.


ಅದು ಜನಾಂಗಗಳೊಳಗೆ ಜಾರರನ್ನು ಸಂಪಾದಿಸಿದರೂ, ಅದನ್ನು ನಾನು ಈಗ ಸೆರೆಗೆ ಒಳಪಡಿಸುವೆನು. ರಾಜಾಧಿರಾಜನು ಹೊರಿಸುವ ಹೊರೆಯಿಂದ ಅದು ಕುಗ್ಗಿಹೋಗಲಿಕ್ಕೆ ಆರಂಭವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು