ಯೆಶಾಯ 30:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಇದಲ್ಲದೆ, ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ಗುಣ ಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಪ್ರಕಾಶಮಾನವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಇದಲ್ಲದೆ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವುದು. ಸೂರ್ಯನ ಬೆಳಕು ಏಳ್ಮಡಿ ಹೆಚ್ಚುವುದು. ಏಳು ದಿನಗಳ ಬೆಳಕು ಒಂದೇ ದಿನದ ಬೆಳಕಿನಂತಾಗುವುದು. ಅಂದು ಸರ್ವೇಶ್ವರ ತಮ್ಮ ಜನರ ಹುಣ್ಣುಗಳನ್ನು ಕಟ್ಟುವರು. ತಮ್ಮ ಪೆಟ್ಟಿನಿಂದ ಜನರಿಗಾದ ಗಾಯಗಳನ್ನು ಗುಣಪಡಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಇದಲ್ಲದೆ ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ ಅವರ ಪೆಟ್ಟಿನ ಗಾಯವನ್ನು ಗುಣಮಾಡುವ ದಿವಸದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವದು, ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಿ ಏಳು ದಿನಗಳ ಬೆಳಕಿನಂತಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆ ಸಮಯದಲ್ಲಿ ಚಂದ್ರನ ಪ್ರಕಾಶವು ಸೂರ್ಯನಂತಿರುವದು. ಸೂರ್ಯನ ಪ್ರಕಾಶವು ಈಗ ಇರುವದಕ್ಕಿಂತ ಏಳರಷ್ಟು ಹೆಚ್ಚಾಗಿರುವದು. ಸೂರ್ಯನ ಒಂದು ದಿವಸದ ಬೆಳಕು ಒಂದು ವಾರದ ಬೆಳಕಿನಷ್ಟಿರುವದು. ಯೆಹೋವನು ತನ್ನ ಮುರಿದುಹೋದ ಜನರಿಗೆ ಆದ ಗಾಯದ ಪೆಟ್ಟುಗಳನ್ನು ಗುಣಪಡಿಸುವಾಗ ಇವೆಲ್ಲಾ ಸಂಭವಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಇಷ್ಟೇ ಅಲ್ಲದೆ ಯೆಹೋವ ದೇವರು ತನ್ನ ಜನರ ವ್ರಣವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ, ಏಳು ದಿನಗಳ ಬೆಳಕಿನಂತಾಗುವುದು. ಅಧ್ಯಾಯವನ್ನು ನೋಡಿ |