Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಇಗೋ, ಯೆಹೋವನ ನಾಮವು ದೂರದಿಂದ ಬರುತ್ತದೆ; ಆತನ ಕೋಪವು ಬೆಂಕಿಯಂತೆ ಉರಿಯುತ್ತದೆ, ಅದರಿಂದೇಳುವ ಹೊಗೆಯು ದಟ್ಟವಾಗಿದೆ; ಆತನ ತುಟಿಗಳು ರೋಷದಿಂದ ತುಂಬಿವೆ, ಆತನ ನಾಲಿಗೆಯು ನುಂಗುವ ಅಗ್ನಿಯಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಇಗೋ, ಸರ್ವೇಶ್ವರ ನಾಮಧೇಯನು ಬರುತಿಹನು ದೂರದಿಂದ; ಭುಗಿಲೇರುತಿದೆ ಆತನ ಕೋಪ ಏಳುತಿದೆ ದಟ್ಟವಾದ ಧೂಮ ಅದರಿಂದ. ದಹಿಸುವ ಅಗ್ನಿಯಂತಿದೆ ಆತನ ನಾಲಗೆ. ಭರಿತವಾಗಿದೆ ಆತನ ತುಟಿಗಳು ರೋಷದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಇಗೋ, ಯೆಹೋವನಾಮಧೇಯನು ದೂರದಿಂದ ಬರುತ್ತಾನೆ; ಆತನ ಕೋಪವು ಉರಿಯುತ್ತಿದೆ, ಅದರಿಂದೇಳುವ ಹೊಗೆಯು ದಟ್ಟವಾಗಿದೆ; ಆತನ ತುಟಿಗಳು ರೋಷದಿಂದ ತುಂಬಿವೆ, ಆತನ ನಾಲಿಗೆಯು ನುಂಗುವ ಅಗ್ನಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಇಗೋ, ಯೆಹೋವನ ನಾಮವು ಬಹುದೂರದಿಂದ ಬರುವದು. ಆತನ ಕೋಪವು ದಟ್ಟವಾದ ಹೊಗೆಯೊಂದಿಗೆ ಇರುವ ಬೆಂಕಿಯೋಪಾದಿಯಲ್ಲಿರುವದು. ಯೆಹೋವನ ಬಾಯಿ ಕೋಪದಿಂದಲೂ ನಾಲಿಗೆಯು ಸುಡುವ ಬೆಂಕಿಯಂತೆಯೂ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಇಗೋ, ಯೆಹೋವ ದೇವರ ನಾಮವು ದೂರದಿಂದ ಬರುತ್ತದೆ. ಆತನ ಕೋಪವು ಉರಿಯುತ್ತದೆ. ಅದರಿಂದೇಳುವ ಹೊಗೆಯು ದಟ್ಟವಾಗಿದೆ. ಆತನ ತುಟಿಗಳು ರೋಷದಿಂದ ತುಂಬಿವೆ. ಆತನ ನಾಲಿಗೆಯು ದಹಿಸುವ ಅಗ್ನಿಯಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:27
26 ತಿಳಿವುಗಳ ಹೋಲಿಕೆ  

ಏಕೆಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.


ಆಗ ಅಧರ್ಮಸ್ವರೂಪನು ಕಾಣಿಸಿಕೊಳ್ಳುವನು, ಅವನನ್ನು ಯೇಸು ಕರ್ತನು ತನ್ನ ಬಾಯಿಯ ಉಸಿರಿನಿಂದ ಕೊಲ್ಲುವನು, ತನ್ನ ಬರುವಿಕೆಯ ಪ್ರತ್ಯಕ್ಷತೆಯಿಂದ ಸಂಹರಿಸುವನು.


ಯೆಹೋವನು ಇಂತೆನ್ನುತ್ತಾನೆ, “ಹೀಗಿರಲು ನನಗಾಗಿ ಕಾದುಕೊಂಡಿರಿ, ನಾನು ಬೇಟೆಹಿಡಿಯಲಿಕ್ಕೆ ಏಳುವ ದಿನವನ್ನು ಎದುರುನೋಡಿರಿ; ಜನಾಂಗರಾಜ್ಯಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನೆಲ್ಲಾ ಹೊಯ್ದು ಬಿಡುವುದಕ್ಕಾಗಿ ಆ ಜನಾಂಗಗಳನ್ನು ಸೇರಿಸಿ ಆ ರಾಜ್ಯಗಳನ್ನು ಕೂಡಿಸಬೇಕೆಂದು ತೀರ್ಮಾನಿಸಿಕೊಂಡಿದ್ದೇನೆ, ಲೋಕವೆಲ್ಲಾ ನನ್ನ ರೋಷಾಗ್ನಿಗೆ ತುತ್ತಾಗುವುದಷ್ಟೇ.


“ನಾನು ನೋಡುತ್ತಿದ್ದ ಹಾಗೆ ನ್ಯಾಯಾಸನಗಳು ಹಾಕಲ್ಪಟ್ಟವು, ಮಹಾವೃದ್ಧನೊಬ್ಬನು ಆಸೀನನಾದನು; ಆತನ ಉಡುಪು ಹಿಮದಂತೆ ಶುಭ್ರವಾಗಿತ್ತು. ಆತನ ತಲೆಯ ಕೂದಲು ನಿರ್ಮಲವಾದ ಬಿಳಿಯ ಉಣ್ಣೆಯಂತಿತ್ತು, ಆತನ ನ್ಯಾಯಾಸನವು ಅಗ್ನಿಜ್ವಾಲೆಗಳು, ಅದರ ಚಕ್ರಗಳು ಧಗಧಗಿಸುವ ಬೆಂಕಿಯೇ.


ನೀವು ಇದನ್ನು ಕಣ್ಣಾರೆ ಕಾಣುವಿರಿ, ನಿಮ್ಮ ಹೃದಯವು ಉಲ್ಲಾಸಿಸುವುದು, ನಿಮ್ಮ ಎಲುಬುಗಳು ಹಸಿ ಹುಲ್ಲಿನಂತೆ ರಸವತ್ತಾಗುವವು; ಆಗ ಯೆಹೋವನು ತನ್ನ ಸೇವಕರ ಮೇಲೆ ಕೃಪಾಹಸ್ತವನ್ನು ವ್ಯಕ್ತಪಡಿಸಿ ತನ್ನ ಶತ್ರುಗಳ ಮೇಲೆ ರೋಷಗೊಳ್ಳುವನು.


ಹೀಗಿರಲು ಪಶ್ಚಿಮದವರು ಯೆಹೋವನ ನಾಮಕ್ಕೆ ಹೆದರುವರು, ಪೂರ್ವ ದಿಕ್ಕಿನವರು ಆತನ ಮಹಿಮೆಗೆ ಅಂಜುವರು; ಬಿರುಗಾಳಿಯಿಂದ ಹೊಡೆಯಲ್ಪಟ್ಟು ಇಕ್ಕಟ್ಟಿನಲ್ಲಿ ಹರಿಯುವ ತೊರೆಯ ಹಾಗೆ ಆತನು ರಭಸದಿಂದ ಬರುವನಷ್ಟೆ.


ಅಲ್ಲಿ ಪ್ರವಾಹಗಳು ಇಳಿಜಾರಾಗಿ ಮಾರ್ಪಡುವವು, ಧೂಳು ಗಂಧಕವಾಗುವುದು, ದೇಶವೆಲ್ಲಾ ಉರಿಯುವ ಇಳಿಜಾರು ಪ್ರದೇಶವಾಗುವುದು.


ಜನಾಂಗಗಳು ಸುಟ್ಟ ಸುಣ್ಣದ ಹಾಗಿರುವವು. ಕತ್ತರಿಸಿದ ಮುಳ್ಳುಕೊಂಪೆಗೆ ಬೆಂಕಿಹಚ್ಚಿದಂತಾಗುವುದು.


ಅಯ್ಯೋ, ಅಶ್ಶೂರವೇ ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೌದ್ರವೇ.


ಯುದ್ಧದ ಗದ್ದಲದಲ್ಲಿ ತುಳಿದಾಡಿದವರೆಲ್ಲರ ಪಾದರಕ್ಷೆಗಳೂ, ರಕ್ತದಲ್ಲಿ ಅದ್ದಿದ ಉಡುಪುಗಳೂ, ಅಗ್ನಿಗೆ ಆಹಾರವಾಗಿ ಸುಟ್ಟುಹೋಗುವವು.


ಯೆಹೋವನೇ, ಇನ್ನೆಷ್ಟರವರೆಗೆ ಕೋಪವುಳ್ಳವನಾಗಿರುವಿ? ನಿನ್ನ ರೋಷಾಗ್ನಿಯು ಸದಾಕಾಲವೂ ಉರಿಯುತ್ತಲಿರಬೇಕೋ?


“ಯೆಹೋವನು ಸೀನಾಯಿಬೆಟ್ಟದಿಂದ ಬಂದು ಸೇಯೀರ್ ಎಂಬ ಬೆಟ್ಟದ ಸೀಮೆಯೊಳಗಿಂದ ಪ್ರಕಾಶಿಸಿ ಪಾರಾನ್ ಪರ್ವತದಿಂದ ಪ್ರಜ್ವಲಿಸಿ, ಲಕ್ಷಾಂತರ ಪರಿಶುದ್ಧದೂತರ ಮಧ್ಯದಿಂದ ಅವರಿಗೋಸ್ಕರ ದಯಮಾಡಿದನು; ಆತನ ಬಲಪಾರ್ಶ್ವದಲ್ಲಿ ಅಗ್ನಿಸದೃಶವಾದ ಧರ್ಮಶಾಸ್ತ್ರವಿತ್ತು.


ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದ ವರೆಗೂ ವ್ಯಾಪಿಸಿ ಬೆಳೆಯ ಸಹಿತವಾಗಿ ಭೂಮಿಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವುದು.


ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದೆ ಉರಿಯುವ ಬೆಂಕಿಯಂತೆ ದ್ರೋಹಿಗಳನ್ನು ದಹಿಸಿಬಿಡುವವನಾಗಿದ್ದಾನೆಂದು ತಿಳಿಯಿರಿ.


ಯೆಹೋವನು ತಾನು ನ್ಯಾಯ ತೀರಿಸುವ ಆಯುಧಗಳೊಡನೆ ದೂರ ದೇಶದಿಂದ ಅಂದರೆ, ಆಕಾಶ ಮಂಡಲದ ಕಟ್ಟಕಡೆಯಿಂದ ಭೂಮಿಯನ್ನೆಲ್ಲಾ ಹಾಳುಮಾಡುವುದಕ್ಕಾಗಿ ಬರುತ್ತಾನೆ.


“ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಆ ಭ್ರಷ್ಟರು ನಡುಕಕ್ಕೆ ಒಳಗಾಗಿ, ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗುವರು” ಎಂದುಕೊಳ್ಳುತ್ತಾರೆ.


ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು, ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು.


ಆಹಾ, ಯೆಹೋವನು ಬೆಂಕಿಯನ್ನು ಕಟ್ಟಿಕೊಂಡು ಬರುವನು; ಆತನ ರಥಗಳು ಬಿರುಗಾಳಿಯಂತಿರುವವು; ರೌದ್ರಾವೇಶದಿಂದ ತನ್ನ ಸಿಟ್ಟನ್ನು ತೀರಿಸುವನು, ಅಗ್ನಿ ಜ್ವಾಲೆಯಿಂದ ಖಂಡಿಸುವನು.


ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿ, ಯೆಹೋವನಿಗಾಗಿ ಸುನ್ನತಿ ಮಾಡಿಕೊಳ್ಳಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ಧಗಧಗಿಸುವುದು” ಎಂದು ಹೇಳುತ್ತಾನೆ.


ಆದಕಾರಣ ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ, ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸ ಮಾಡಿ ಅವರ ದುರ್ನಡತೆಯನ್ನು ಅವರ ತಲೆಗೇ ಕಟ್ಟಿದ್ದೇನೆ.’ ಇದು ಕರ್ತನಾದ ಯೆಹೋವನ ನುಡಿ.”


ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದು ಬಂದಿತು. ಲಕ್ಷೋಪಲಕ್ಷ ದೂತರು ಆತನ ಸೇವೆಗೆ ಸಿದ್ಧರಾಗಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು. ನ್ಯಾಯಸಭೆಯವರು ಕುಳಿತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು.


“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು