Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಮತ್ತು ಯೆಹೋವನು ಸಂಕಲ್ಪಿಸಿದ ದಂಡದ ಪ್ರತಿಯೊಂದು ಪೆಟ್ಟು, ದಮ್ಮಡಿ, ಕಿನ್ನರಿಗಳ ನಾದದೊಡನೆ ಅವರ ಮೇಲೆ ಬೀಳುವುದು. ಆತನು ಅವರೊಂದಿಗೆ ಹೋರಾಡುತ್ತಾ ಯುದ್ಧಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಸರ್ವೇಶ್ವರ ಸ್ವಾಮಿ ವಿಧಿಸುವ ಪ್ರತಿಯೊಂದು ಪೆಟ್ಟು ತಾಳ ತಮ್ಮಟೆಯಂತೆ ಅವರ ಮೇಲೆ ಬೀಳುವುದು. ಸರ್ವೇಶ್ವರ ತಾವೇ ಅವರ ವಿರುದ್ಧವಾಗಿ ಕೈಬೀಸಿ ಯುದ್ಧಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಮತ್ತು ಯೆಹೋವನು ಸಂಕಲ್ಪಿಸಿದ ದಂಡದ ಪ್ರತಿಯೊಂದು ಪೆಟ್ಟೂ ದಮ್ಮಡಿ ಕಿನ್ನರಿಗಳ ನಾದದೊಡನೆ ಅವರ ಮೇಲೆ ಬೀಳುವದು. ಆತನು ಅವರೊಂದಿಗೆ ಹೋರಾಡುತ್ತಾ ಕೈಬೀಸಿ ಯುದ್ಧಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಅಶ್ಶೂರವನ್ನು ಆತನು ಹೊಡೆಯುವಾಗ ಹಾರ್ಪ್‌ವಾದ್ಯಗಳನ್ನು ಮತ್ತು ದಮ್ಮಡಿಗಳನ್ನು ಬಾರಿಸಿದಂತಾಗುವದು. ಯೆಹೋವನು ಅಶ್ಶೂರವನ್ನು ತನ್ನ ಮಹಾಶಕ್ತಿಯಿಂದ ಸೋಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಯೆಹೋವ ದೇವರು ಅದರ ಮೇಲೆ ತರುವಂಥ ನೇಮಿಸಿದ ದಂಡವು ಹಾದು ಹೋಗುವಲ್ಲೆಲ್ಲಾ ಅದು ದಮ್ಮಡಿ, ಕಿನ್ನರಿಗಳ ಸಂಗಡ ಇರುವುದು. ಆತನು ಅವರೊಂದಿಗೆ ಯುದ್ಧಗಳಲ್ಲಿ ಹೋರಾಡುತ್ತಾ ಕೈಬೀಸಿ ಯುದ್ಧಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:32
20 ತಿಳಿವುಗಳ ಹೋಲಿಕೆ  

ಆಗ ಯೆಹೋವನು ಐಗುಪ್ತ ಸಮುದ್ರದ ಕೊಲ್ಲಿಯನ್ನು ಸಂಪೂರ್ಣವಾಗಿ ನಾಶಮಾಡುವನು. ಯೂಫ್ರೆಟಿಸ್ ನದಿಯ ಮೇಲೆ ಕೈ ಜಾಡಿಸಿ, ತನ್ನ ಬಿಸಿಗಾಳಿಯಿಂದ ಅದನ್ನು ಏಳು ನದಿಗಳನ್ನಾಗಿ ಒಡೆದು, ಜನರ ಪಾದರಕ್ಷೆಗಳು ನೆನೆಯದಂತೆ ಅವರನ್ನು ದಾಟಿಸುವನು.


ಆ ದಿನದಲ್ಲಿ, ಐಗುಪ್ತ್ಯರು ಅಶ್ರಯವಿಲ್ಲದ ಹೆಂಗಸರ ಹಾಗೆ ಭಯಗ್ರಸ್ತರಾಗಿರುವರು. ಸೇನಾಧೀಶ್ವರನಾದ ಯೆಹೋವನು ಅವರ ಮೇಲೆ ತನ್ನ ಕೈಯನ್ನು ಬೀಸುತ್ತಿರುವುದರಿಂದ ಅವರು ಭಯಪಟ್ಟು ನಡುಗುವರು.


ಯೆಹೋವನು ಭೂಮಂಡಲವನ್ನು ನಡುಗಿಸಲು ಏಳುವಾಗ, ಮನುಷ್ಯರು ಆತನ ಭಯಂಕರ ಕೋಪಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಗವಿಗಳಲ್ಲಿಯೂ, ನೆಲದ ಹಳ್ಳಕೊಳ್ಳಗಳಲ್ಲಿಯೂ ಅಡಗಿಕೊಳ್ಳುವರು.


ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು. ಈಗಲಾದರೋ ಆತನು, “ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆ” ಎಂದು ವಾಗ್ದಾನಮಾಡಿ ಹೇಳಿದ್ದಾನೆ.


ಹೌದು, ಅನೇಕ ಜನಾಂಗಗಳು ನಿನ್ನ ವಿಷಯದಲ್ಲಿ ಬೆಚ್ಚಿಬೆರಗಾಗುವಂತೆ ಮಾಡುವೆನು, ನಾನು ನನ್ನ ಖಡ್ಗವನ್ನು ಅವುಗಳ ಅರಸರ ಕಣ್ಣೆದುರಿಗೆ ಬೀಸುವಾಗ, ಅವರು ನಿನ್ನ ದುರ್ಗತಿಯನ್ನು ನೆನಸಿ ಭಯಭ್ರಾಂತರಾಗುವರು; ನಿನ್ನ ಸೋಲಿನ ದಿನದಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣದ ಬಗ್ಗೆ ಕ್ಷಣಕ್ಷಣವೂ ನಡುಗುವನು.”


ನೀವೋ, ಹಬ್ಬದ ಸೌರಣೆಯ ರಾತ್ರಿಯಲ್ಲೋ ಎಂಬಂತೆ ಹಾಡುವಿರಿ. ಇಸ್ರಾಯೇಲರ ಶರಣನ ಸಾನ್ನಿಧ್ಯವನ್ನು ಬಯಸಿ, ಯೆಹೋವನ ಪರ್ವತಕ್ಕೆ ಕೊಳಲಿನ ನಾದದೊಡನೆ ಹೋಗುವವನಂತೆ ಹೃದಯಾನಂದಪಡುವಿರಿ.


ದಮ್ಮಡಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸಿಗಳ ಕೋಲಾಹಲವು ಕೊನೆಗೊಂಡಿದೆ, ಕಿನ್ನರಿಯ ಆನಂದವು ಅಡಗಿದೆ.


ನಾನು ನೆಮ್ಮದಿಯಿಂದಿದ್ದಾಗ ಆತನು ನನ್ನನ್ನು ಒಡೆದು ಹಾಕಿದನು; ಕತ್ತುಹಿಡಿದು ನನ್ನನ್ನು ಚೂರು ಚೂರು ಮಾಡಿದನು. ಬಾಣ ಪ್ರಯೋಗಿಸಲು ನನ್ನನ್ನು ಗುರಿಮಾಡಿಕೊಂಡಿದ್ದಾನೆ.


ಅಲ್ಲಿಂದ ಫಿಲಿಷ್ಟಿಯರ ದಂಡು ಇರುವ ದೇವಗಿರಿಯನ್ನು ಮುಟ್ಟಿದಾಗ ಮುಂಭಾಗದಲ್ಲಿ ಸ್ವರಮಂಡಲ, ದಮ್ಮಡಿ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದ ಇಳಿದು ಬರುತ್ತಿರುವ ಪ್ರವಾದಿಗಳ ಸಮೂಹವನ್ನು ಕಾಣುವಿ. ಅವರು ಪರವಶರಾಗಿ ಪ್ರವಾದಿಸುವರು.


ಯಾಕೆ ನನ್ನನ್ನು ಮೋಸಗೊಳಿಸಿ ಕಳ್ಳತನದಿಂದ ಹೊರಟು ಬಂದಿ? ನನಗೆ ತಿಳಿಸಿದ್ದರೆ ನಾನು ಸಂತೋಷದಿಂದ ಹಾಡು, ವೀಣೆ, ತಾಳ ಮುಂತಾದ ವಾದ್ಯಗಳೊಡನೆ ನಿನ್ನನ್ನು ಕಳುಹಿಸುತ್ತಿದ್ದೆನು.


ದಾವೀದನು ಫಿಲಿಷ್ಟಿಯನನ್ನು ಸಂಹರಿಸಿ, ಸರ್ವಜನರೊಡನೆ ಹಿಂದಿರುಗಿ ಬರುವಾಗ ಇಸ್ರಾಯೇಲ್ಯರ ಎಲ್ಲಾ ಪಟ್ಟಣಗಳಿಂದ ಸ್ತ್ರೀಯರೂ ಹೊರಗೆ ಬಂದು ದಮ್ಮಡಿತಾಳಗಳನ್ನು ಹಿಡಿದು, ಸಂತೋಷದಿಂದ ಹಾಡುತ್ತಾ, ಕುಣಿಯುತ್ತಾ, ಅರಸನಾದ ಸೌಲನನ್ನು ಎದುರುಗೊಂಡರು.


ಆದುದರಿಂದ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ, “ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಐಗುಪ್ತರು ಮಾಡಿದಂತೆ, ನಿಮ್ಮನ್ನು ಕೋಲಿನಿಂದ ಹೊಡೆದು, ನಿಮ್ಮ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.


ಇಗೋ, ಯೆಹೋವನು ಭೂಮಿಯನ್ನು ಬರಿದುಮಾಡಿ, ಎಲ್ಲಾ ಪ್ರದೇಶವನ್ನು ನಿರ್ಜನಮಾಡಿ, ಅದನ್ನು ವಿಕಾರಪಡಿಸಿ, ಅದರ ನಿವಾಸಿಗಳನ್ನು ಚದುರಿಸಿಬಿಡುವವನಾಗಿದ್ದಾನೆ.


ಇಸ್ರಾಯೇಲೆಂಬ ಯುವತಿಯೇ, ನಾನು ನಿನ್ನ ಹಾಳುಪ್ರದೇಶಗಳನ್ನು ಪುನಃ ಕಟ್ಟುವೆನು; ಅವು ಕಟ್ಟಡಗಳಾಗುವವು. ನೀನು ಮತ್ತೆ ದಮ್ಮಡಿಗಳಿಂದ ವೈಭವಗೊಂಡು ವಿನೋದಪಡುವವರ ನಾಟ್ಯಗಳಲ್ಲಿ ಸೇರಿಕೊಳ್ಳುವಿ.


ದೇವರ ಉದ್ಯಾನವನವಾದ ಏದೆನಿನಲ್ಲಿ ನೀನಿದ್ದೆ; ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇಧಿಕ, ಕೆಂಪು ಸ್ಫಟಿಕ, ಚಿನ್ನ ಈ ಅಮೂಲ್ಯ ರತ್ನಗಳಿಂದ ಭೂಷಿತವಾಗಿದ್ದೆ. ನಿನ್ನಲ್ಲಿರುವ ಈ ರತ್ನಗಳು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.


ಅವನಿಗಿರುವ ಸಹಾಯವು ನಶ್ವರವಾದ ತೋಳುಬಲ; ನಮಗಾದರೋ ನಮ್ಮ ಸಹಾಯಕನು ದೇವರಾದ ಯೆಹೋವನೇ. ಆತನು ನಮಗೆ ನೆರವಾಗಿ, ಯುದ್ಧಗಳಲ್ಲಿ ನಮಗೋಸ್ಕರ ಕಾದಾಡುವನು” ಎಂದು ಹೇಳಿ ಧೈರ್ಯಪಡಿಸಿದನು. ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸೆಯುಳ್ಳವರಾದರು.


ಸೇನಾಧೀಶ್ವರನಾದ ಯೆಹೋವನು ಓರೇಬ ಬಂಡೆಯ ಹತ್ತಿರ ಮಿದ್ಯಾನ್ಯರನ್ನು ಹತಮಾಡಿದಂತೆ, ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತರ ಮೇಲೆ ಎತ್ತಿದಂತೆ ಎತ್ತುವನು.


ಯೆಹೋವನು ನನಗೆ ಹೀಗೆ ಹೇಳಿದ್ದಾನೆ, “ಸಿಂಹವು, ಪ್ರಾಯದ ಸಿಂಹವು, ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ, ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿಬಂದರೂ ಅದು ಅವರ ಕೂಗಾಟಕ್ಕೆ ಹೆದರದೆ, ಅವರ ಗದ್ದಲದಿಂದ ಹೇಗೆ ಧೈರ್ಯಗುಂದುವುದಿಲ್ಲವೋ ಹಾಗೆಯೇ ಸೇನಾಧೀಶ್ವರನಾದ ಯೆಹೋವನು ಯುದ್ಧಮಾಡಲು ಚೀಯೋನ್ ಪರ್ವತದ ಶಿಖರದ ಮೇಲೆ ಇಳಿಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು