ಯೆಶಾಯ 30:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ದಕ್ಷಿಣ ಸೀಮೆಯ ನೀರಾನೆಯ ವಿಷಯವಾದ ದೈವೋಕ್ತಿ. ರಾಯಭಾರಿಗಳು ಗಂಡು ಕತ್ತೆಗಳ ಬೆನ್ನುಗಳ ಮೇಲೆ ತಮ್ಮ ಧನವನ್ನೂ, ಒಂಟೆಗಳ ಡುಬ್ಬಗಳ ಮೇಲೆ ತಮ್ಮ ದ್ರವ್ಯವನ್ನೂ ಹೊರಿಸಿಕೊಂಡು, ಮೃಗೇಂದ್ರ, ಸಿಂಹ, ಸರ್ಪ, ಹಾರುವ ಉರಿಮಂಡಲ ಇವುಗಳಿಂದ ಭಯಂಕರವಾಗಿಯೂ, ಶ್ರಮಸಂಕಟಗಳನ್ನು ಉಂಟು ಮಾಡುವ ದೇಶದ ಮಾರ್ಗವಾಗಿ ನಿಷ್ಪ್ರಯೋಜಕವಾದ ಜನಾಂಗದ ಬಳಿಗೆ ಹೋಗುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನೆಗೇಬಿನ ಮೃಗಗಳನ್ನು ಕುರಿತ ದೈವವಾಣಿ : ಸಿಂಹಸಿಂಹಿಣಿಗಳಿಂದಲೂ ವಿಷಸರ್ಪ - ಘಟಸರ್ಪಗಳಿಂದಲೂ ಕೂಡಿದ ಭಯಂಕರ ಹಾಗೂ ಸಂಕಟಕರವಾದ ಆ ನಾಡಿನ ಮಾರ್ಗವಾಗಿ ತಮ್ಮ ಧನಕನಕಗಳನ್ನು ಕತ್ತೆಗಳ ಮೇಲೂ ಆಸ್ತಿಪಾಸ್ತಿಗಳನ್ನು ಒಂಟೆಗಳ ಮೇಲೂ ಹೊರಿಸಿಕೊಂಡು ನಿಷ್ಪ್ರಯೋಜಕವಾದ ಆ ರಾಷ್ಟ್ರಕ್ಕೆ ಹೋಗುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ದಕ್ಷಿಣ ಸೀಮೆಯ ನೀರಾನೆಯ ವಿಷಯವಾದ ದೈವೋಕ್ತಿ. [ರಾಯಭಾರಿಗಳು] ಕತ್ತೆಗಳ ಬೆನ್ನುಗಳ ಮೇಲೆ ತಮ್ಮ ಧನವನ್ನೂ ಒಂಟೆಗಳ ಡುಬ್ಬಗಳ ಮೇಲೆ ತಮ್ಮ ದ್ರವ್ಯವನ್ನೂ ಹೊರಿಸಿಕೊಂಡು ಮೃಗೇಂದ್ರ, ಸಿಂಹ, ವಿಷಸರ್ಪ, ಹಾರುವ ಉರಿಮಂಡಲ ಇವುಗಳಿಂದ ಭಯಂಕರವಾಗಿಯೂ ಶ್ರಮಸಂಕಟಗಳನ್ನು ಉಂಟುಮಾಡುವದಾಗಿಯೂ ಇರುವ ದೇಶದ ಮಾರ್ಗವಾಗಿ ನಿಷ್ಪ್ರಯೋಜನವಾದ ಜನಾಂಗದ ಬಳಿಗೆ ಹೋಗುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನೆಗೆವ್‌ನಲ್ಲಿರುವ ಪ್ರಾಣಿಗಳ ದುಃಖಕರವಾದ ಸಂದೇಶ: ನೆಗೆವ್ ಬಹು ಅಪಾಯಕಾರಿ ಸ್ಥಳ. ಸಿಂಹ, ವಿಷದ ಹಾವುಗಳು, ವೇಗವಾಗಿ ಚಲಿಸುವ ಹಾವುಗಳಿಂದ ಅದು ತುಂಬಿದೆ. ಆದರೆ ಕೆಲವರು ನೆಗೆವ್ ಮೂಲಕ ಪ್ರಯಾಣ ಮಾಡಿ ಈಜಿಪ್ಟಿಗೆ ಹೋಗುತ್ತಾರೆ. ಅವರು ತಮ್ಮ ಸಂಪತ್ತನ್ನೆಲ್ಲಾ ಕತ್ತೆಯ ಮೇಲೆ ಹೊರಿಸಿರುತ್ತಾರೆ. ಅವರು ತಮ್ಮ ಧನವನ್ನು ಒಂಟೆಯ ಮೇಲೆ ಹೊರಿಸಿರುತ್ತಾರೆ. ತಮಗೆ ಸಹಾಯ ಮಾಡಲಾರದ ದೇಶದ ಮೇಲೆ ಜನರು ಭರವಸವಿಟ್ಟಿದ್ದಾರೆ ಎಂಬುದೇ ಇದರರ್ಥ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನೆಗೆವಿನ ಮೃಗಗಳ ವಿಷಯವಾದ ಪ್ರವಾದನೆ: ಇಕ್ಕಟ್ಟಾದ ಶ್ರಮೆಯುಳ್ಳ ದೇಶಕ್ಕೆ ಪ್ರಾಯ ಮತ್ತು ಮುದಿ ಸಿಂಹವೂ, ಸರ್ಪವೂ, ಹಾರುವ ಉರಿಮಂಡಲ ಸರ್ಪವೂ ಬರುವಲ್ಲಿಗೆ ಅವರು ಕತ್ತೆಮರಿಗಳ ಬೆನ್ನ ಮೇಲೆ ತಮ್ಮ ಬದುಕನ್ನೂ, ಒಂಟೆಗಳ ಮೇಲೆ ತಮ್ಮ ದ್ರವ್ಯಗಳನ್ನು ತಮಗೆ ಪ್ರಯೋಜನವಿಲ್ಲದ ಜನಕ್ಕೆ ತೆಗೆದುಕೊಂಡು ಹೋಗುತ್ತಾರೆ. ಅಧ್ಯಾಯವನ್ನು ನೋಡಿ |