Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 31:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ! ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು, ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲರ ಸದಮಲಸ್ವಾಮಿಯ ಕಡೆಗೆ ದೃಷ್ಟಿಯಿಡುವುದಿಲ್ಲ, ಯೆಹೋವನನ್ನು ಆಶ್ರಯಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಆಶ್ರಯಿಸದೆ, ಸಹಾಯಕ್ಕಾಗಿ ಈಜಿಪ್ಟಿಗೆ ತೆರಳುವವರಿಗೆ ಧಿಕ್ಕಾರ ! ಅವರಿಗೆ ಬೇಕು ಆ ನಾಡಿನ ಅಶ್ವಬಲ, ರಥಗಳ ಸಂಖ್ಯಾಬಲ, ಸವಾರರ ಶೌರ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ! ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸಪಡುತ್ತಾರೆ; ಆದರೆ ಇಸ್ರಾಯೇಲ್ಯರ ಸದಮಲಸ್ವಾವಿುಯ ಕಡೆಗೆ ದೃಷ್ಟಿಯಿಡುವದಿಲ್ಲ, ಯೆಹೋವನನ್ನು ಆಶ್ರಯಿಸುವದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಹಾಯಕ್ಕಾಗಿ ಈಜಿಪ್ಟಿಗೆ ಹೋಗುವ ಜನರನ್ನು ನೋಡಿರಿ. ಆ ಜನರು ಕುದುರೆಗಳಿಗಾಗಿ ಕೇಳುತ್ತಿದ್ದಾರೆ. ಕುದುರೆಗಳು ಅವರನ್ನು ರಕ್ಷಿಸುತ್ತವೆ ಎಂದು ಅವರು ಭಾವಿಸುತ್ತಾರೆ. ಈಜಿಪ್ಟಿನ ಬಹಳ ರಥಗಳು ಮತ್ತು ಬಹಳ ಕುದುರೆಗಳು ಅವರನ್ನು ಕಾಪಾಡುವವು ಎಂದು ಜನರು ತಿಳಿದುಕೊಳ್ಳುತ್ತಾರೆ. ಸೈನ್ಯವು ದೊಡ್ಡದಾಗಿರುವದರಿಂದ ಯಾವ ಅಪಾಯವೂ ಬಾರದು ಎಂದು ಅವರು ತಿಳಿದುಕೊಳ್ಳುತ್ತಾರೆ. ಜನರು ಇಸ್ರೇಲಿನ ಪರಿಶುದ್ಧನನ್ನು ನಂಬುವದಿಲ್ಲ. ಅವರು ಯೆಹೋವನ ಸಹಾಯವನ್ನು ಕೋರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸಹಾಯಕ್ಕಾಗಿ ಈಜಿಪ್ಟನ್ನು ಸೇರಿ, ಅಶ್ವಬಲವನ್ನು, ಆಶ್ರಯಿಸುವವರಿಗೆ ಕಷ್ಟ! ಏಕೆಂದರೆ ರಥಗಳು ಬಹಳವೆಂದೂ, ಅವರ ನಂಬಿಕೆಯು ರಥಗಳ ಮೇಲೆ ಏಕೆಂದರೆ ಅವರು ಅನೇಕರು, ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವುದಿಲ್ಲ. ಇಲ್ಲವೆ ಯೆಹೋವ ದೇವರಿಂದ ಸಹಾಯವನ್ನು ಬಯಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 31:1
39 ತಿಳಿವುಗಳ ಹೋಲಿಕೆ  

ಕೆಲವರು ರಥಬಲದಲ್ಲಿ, ಕೆಲವರು ಅಶ್ವಬಲದಲ್ಲಿ ಹೆಚ್ಚಳಪಡುತ್ತಾರೆ; ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ ಹೆಚ್ಚಳಪಡುತ್ತೇವೆ.


ಯೆಹೋವನು ಹೀಗೆನ್ನುತ್ತಾನೆ, “ಮಾನವ ಮಾತ್ರದವರಲ್ಲಿ ಭರವಸವಿಟ್ಟು, ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು, ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ಥನು.


ಅವನು ಕುದುರೆಯ ದಂಡನ್ನು ಕೂಡಿಸಿಕೊಳ್ಳಬಾರದು. ಕುದುರೆಗಳನ್ನು ಕೊಂಡುಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಐಗುಪ್ತದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಬಾರದು ಎಂದು ಯೆಹೋವನು ಆಜ್ಞಾಪಿಸಿದ್ದಾನಲ್ಲಾ.


ಮೋಶೆಯ ಧರ್ಮನಿಯಮಗಳಲ್ಲಿ ಬರೆದಂತೆಯೇ ಈ ವಿಪತ್ತೆಲ್ಲಾ ನಮ್ಮ ಮೇಲೆ ಬಂದಿದೆ; ಆದರೂ ನಾವು ನಮ್ಮ ದುರ್ಮಾರ್ಗಗಳನ್ನು ತೊರೆದುಬಿಟ್ಟು ನಿನ್ನ ಸತ್ಯೋಪದೇಶವನ್ನು ಗ್ರಹಿಸಿ ನಡೆಯುವಂತೆ ನಮ್ಮ ದೇವರಾದ ಯೆಹೋವನೆಂಬ ನಿನ್ನ ದಯೆಯನ್ನು ಬೇಡಿಕೊಳ್ಳಲಿಲ್ಲ.


“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಅವರು ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟುಬಿಟ್ಟು ತಮಗೋಸ್ಕರ ತೊಟ್ಟಿಗಳನ್ನು ತೋಡಿಕೊಂಡಿದ್ದಾರೆ. ಅವರು ಬಿರುಕು ಬಿಟ್ಟ, ನೀರು ನಿಲ್ಲದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.


“ಇದೂ ನಿನಗೆ ಅಸಾಧ್ಯವಾಗುವುದಾದರೆ ನನ್ನ ಒಡೆಯನ ಸೇನಾಧಿಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವುದು ನಿನ್ನಿಂದ ಹೇಗೆ ಸಾಧ್ಯವಾಗುತ್ತದೆ? ರಥಾಶ್ವಬಲಗಳಿಗಾಗಿ ನೀನು ಐಗುಪ್ತ್ಯರನ್ನು ನಂಬಿಕೊಂಡಿರುವಂತೆ ಕಾಣುತ್ತದೆ.


ನೀವು, ‘ಬೇಡವೇ ಬೇಡ, ಕುದುರೆಗಳ ಮೇಲೆ ಓಡುವೆವು’ ಎಂದುಕೊಂಡಿದ್ದರಿಂದ ನೀವು ಓಡಿಯೇ ಹೋಗುವಿರಿ, ನೀವು, ‘ವೇಗವಾಗಿ ಸವಾರಿ ಮಾಡುವೆವು’ ಎಂದುಕೊಂಡಿದ್ದರಿಂದ ವೇಗಿಗಳೇ ನಿಮ್ಮನ್ನು ಅಟ್ಟಿಬಿಡುವರು.


“‘ಜಜ್ಜಿದ ದಂಟಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತೀಯಷ್ಟೆ. ಒಬ್ಬನು ಅಂಥ ಕೋಲನ್ನು ಆಧಾರ ಮಾಡಿಕೊಳ್ಳುವುದಾದರೆ ಅದು ಅವನ ಕೈಯನ್ನು ತಿವಿದು ಒಳಕ್ಕೆ ಹೋಗುತ್ತದೆ! ಐಗುಪ್ತದ ಅರಸನಾದ ಫರೋಹನನಲ್ಲಿ ಭರವಸವಿಟ್ಟವರಿಗೆ ಅದೇ ಗತಿಯಾಗುವುದು.


ಅಶ್ಶೂರವು ನಮ್ಮನ್ನು ರಕ್ಷಿಸುವುದೆಂದು ನಂಬುವುದಿಲ್ಲ, ಐಗುಪ್ತದ ಕುದುರೆಗಳನ್ನು ಹತ್ತುವುದಿಲ್ಲ, ನಮ್ಮ ಕೈಕೆಲಸದ ಬೊಂಬೆಗಳಿಗೆ, ‘ನೀವು ನಮ್ಮ ದೇವರುಗಳು’ ಎಂದು ಇನ್ನು ಹೇಳುವುದಿಲ್ಲ; ನೀನೇ ದಿಕ್ಕಿಲ್ಲದ ಈ ಅನಾಥರನ್ನು ಕರುಣಿಸುವವನು” ಎಂಬುದಾಗಿ ಅರಿಕೆಮಾಡಿಕೊಳ್ಳಿರಿ.


ಎಲ್ಲರೂ ಒಲೆಯಂತೆ ಝಳವೇರಿ ತಮ್ಮ ನ್ಯಾಯಾಧೀಶ್ವರರನ್ನು ನುಂಗಿಬಿಡುತ್ತಾರೆ; ಅವರ ಸಕಲ ರಾಜರು ಬಿದ್ದಿರುತ್ತಾರೆ, ಅವರೊಳಗೆ ನನ್ನನ್ನು ಪ್ರಾರ್ಥಿಸುವವರೇ ಇಲ್ಲ.


ಆದರೆ ಅವನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದು ಕುದುರೆಗಳನ್ನೂ ಮತ್ತು ಬಹಳ ಮಂದಿ ಸೈನಿಕರನ್ನೂ ನಮಗೆ ಒದಗಿಸೆಂದು ಐಗುಪ್ತಕ್ಕೆ ರಾಯಭಾರಿಗಳನ್ನು ಕಳುಹಿಸಿದನು. ಆದರೂ ಇವನು ಗೆಲ್ಲುವನೋ? ಇಂಥಾ ಕೃತ್ಯಗಳನ್ನು ನಡೆಸಿದವನು ಪಾರಾಗುವನೋ? ಒಡಂಬಡಿಕೆಯನ್ನು ಮೀರಿದವನು ತಪ್ಪಿಸಿಕೊಂಡಾನೇ?”


ಹೀಗಿದ್ದರೂ ಆ ಜನರು ತಮ್ಮನ್ನು ಹೊಡೆದಾತನ ಕಡೆಗೆ ತಿರುಗಿಕೊಳ್ಳಲೂ ಇಲ್ಲ, ಸೇನಾಧೀಶ್ವರನಾದ ಯೆಹೋವನನ್ನು ಸೇವಿಸಲೂ ಇಲ್ಲ.


ಎರಡು ಗೋಡೆಗಳ ನಡುವೆ ಹಳೆಯ ಕೊಳದ ನೀರಿಗಾಗಿ ತೊಟ್ಟಿಯನ್ನು ಮಾಡಿದ್ದೀರಿ; ಆದರೆ ಇದನ್ನೆಲ್ಲಾ ನಡೆಸಿದಾತನ ಕಡೆಗೆ ನೀವು ದೃಷ್ಟಿಯಿಡಲಿಲ್ಲ, ಪುರಾತನ ಕಾಲದಲ್ಲಿ ಸಂಕಲ್ಪಿಸಿದಾತನನ್ನು ನೀವು ಲಕ್ಷಿಸಲಿಲ್ಲ.


ಆ ಕಾಲದಲ್ಲಿ ದರ್ಶಕನಾದ ಹನಾನಿಯು ಯೆಹೂದ್ಯರ ಅರಸನಾದ ಆಸನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ದೇವರಾದ ಯೆಹೋವನನ್ನು ಆಶ್ರಯಿಸಿಕೊಳ್ಳದೆ ಅರಾಮ್ಯರ ಅರಸನನ್ನು ಆಶ್ರಯಿಸಿಕೊಂಡದ್ದರಿಂದ ಅರಾಮ್ ರಾಜನ ಸೈನ್ಯವು ನಿನ್ನ ಕೈಗೆ ಬೀಳದಂತೆ ತಪ್ಪಿಸಿಕೊಂಡಿತು.


ಬಹು ಸುಗಂಧದ್ರವ್ಯಗಳನ್ನು ಕೂಡಿಸಿ, ತೈಲವನ್ನೂ ತೆಗೆದುಕೊಂಡು, ಪರರಾಜನ ಬಳಿಗೆ ಪ್ರಯಾಣಮಾಡಿದ್ದಿ; ನಿನ್ನ ರಾಯಭಾರಿಗಳನ್ನು ದೂರ ದೂರ ಕಳುಹಿಸಿದ್ದಿ; ನಿನ್ನನ್ನು ಪಾತಾಳದವರೆಗೂ ತಗ್ಗಿಸಿಕೊಂಡಿದ್ದಿ.


ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು. ಯೆಹೋವನ ಕೆಲಸವನ್ನೋ ಅವರು ಲಕ್ಷಿಸುವುದಿಲ್ಲ. ಆತನ ಕೈಕೆಲಸವನ್ನು ಆಲೋಚಿಸುವುದಿಲ್ಲ.


ಅವರ ದೇಶವು ಬೆಳ್ಳಿಬಂಗಾರಗಳಿಂದ ತುಂಬಿದೆ. ಅವರ ನಿಧಿನಿಕ್ಷೇಪಗಳಿಗೆ ಮಿತಿಯಿಲ್ಲ. ಅವರ ದೇಶವು ಅಶ್ವಬಲದಿಂದ ತುಂಬಿದೆ. ಅವರ ರಥಗಳಿಗೆ ಮಿತಿಯೇ ಇಲ್ಲ.


ಇಸ್ರಾಯೇಲ್ ಐಗುಪ್ತ ದೇಶಕ್ಕೆ ಹಿಂದಿರುಗದು; ಅದು ನನ್ನ ಕಡೆಗೆ ಹಿಂದಿರುಗಲು ಒಪ್ಪದ ಕಾರಣ ಅಶ್ಶೂರವೇ ಅದಕ್ಕೆ ರಾಜನಾಗಬೇಕು.


ಈಗ ನಿನ್ನ ಹೆಸರೆತ್ತಿ ಪ್ರಾರ್ಥಿಸಿ, ನಿನ್ನನ್ನು ಆಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ; ನೀನು ನಮಗೆ ವಿಮುಖನಾಗಿ ನಮ್ಮನ್ನು ನಮ್ಮ ಅಪರಾಧಗಳಿಗೆ ವಶಮಾಡಿದ್ದಿಯಲ್ಲಾ.


ನೀವು ನಿಮ್ಮ ಶತ್ರುಗಳಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟಾಗ ಅವರ ಹತ್ತಿರ ಕುದುರೆಗಳೂ, ರಥಗಳೂ ಮತ್ತು ನಿಮಗಿಂತ ಹೆಚ್ಚಾದ ಕಾಲ್ಬಲವೂ ಇರುವುದನ್ನು ಕಂಡರೆ ಹೆದರಬಾರದು. ಏಕೆಂದರೆ ಐಗುಪ್ತದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಯೆಹೋವನು ನಿಮ್ಮ ಕಡೆ ಇದ್ದಾನಲ್ಲಾ.


ಇಸ್ರಾಯೇಲರ ಪರಂಜ್ಯೋತಿಯು ದಹಿಸುವ ಅಗ್ನಿಯಾಗುವುದು. ಅವರ ಪರಿಶುದ್ಧನು ಜ್ವಾಲೆಯಂತಿರುವನು. ಅದು ಒಂದೇ ದಿನದಲ್ಲಿ ಅಶ್ಶೂರದ ಮುಳ್ಳುಗಿಳ್ಳನ್ನು ಸುಟ್ಟು ನುಂಗಿಬಿಡುವುದು.


ಆಗ ನನ್ನ ಜನರು ತಾವು ನಿರೀಕ್ಷಿಸಿಕೊಂಡಿದ್ದ ಕೂಷಿನ ನಿಮಿತ್ತವಾಗಿಯೂ, ಕೊಚ್ಚಿಕೊಂಡಿದ್ದ ಐಗುಪ್ತದ ವಿಷಯವಾಗಿಯೂ ಬೆಚ್ಚಿಬೆರಗಾಗಿ ನಾಚಿಕೆಪಡುವರು.


ನಾನು ಯೆಹೋವನು, ನಿಮ್ಮ ಸದಮಲಸ್ವಾಮಿಯು, ಇಸ್ರಾಯೇಲನ್ನು ಸೃಷ್ಟಿಸಿದವನು, ನಿಮ್ಮ ಅರಸನೂ ಆಗಿದ್ದೇನೆ.


“ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ನನ್ನನ್ನು ವಿಚಾರಿಸುವುದಕ್ಕೆ ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದ ಯೆಹೂದದ ಅರಸನಿಗೆ ಹೀಗೆ ಹೇಳಿರಿ, ‘ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶವಾದ ಐಗುಪ್ತಕ್ಕೆ ಹಿಂದಿರುಗುವುದು.


ಬೇಡವೇ ಬೇಡ; ನಾವು ಯುದ್ಧ ಕಾಣದೆ, ತುತ್ತೂರಿಯ ಶಬ್ದ ಕೇಳದೆ, ಅನ್ನದ ಕೊರತೆಯಿಂದ ಹಸಿವಾಗದೆ ಇರುವ ಐಗುಪ್ತ ದೇಶಕ್ಕೆ ಹೋಗಿ ಅಲ್ಲೇ ವಾಸಿಸುವೆವು’ ಎಂದುಕೊಂಡರೆ,


ಐಗುಪ್ತವು ಇನ್ನು ಇಸ್ರಾಯೇಲ್ ವಂಶದವರ ಭರವಸೆಯಾಗದೆ, ಅದರ ಕಡೆಗೆ ಕಣ್ಣೆತ್ತುವ ದೇವದ್ರೋಹದ ನೆನಪು ಇಸ್ರಾಯೇಲರಲ್ಲಿ ಐಗುಪ್ತದಿಂದ ಇನ್ನು ಹುಟ್ಟುವುದಿಲ್ಲ. ನಾನೇ ಯೆಹೋವನು’” ಎಂದು ಅವರಿಗೆ ತಿಳಿಯುವುದು.


ನನ್ನ ಉಗ್ರಕೋಪವನ್ನು ತೀರಿಸೆನು, ಎಫ್ರಾಯೀಮನ್ನು ನಾಶಮಾಡಲು ತಿರಿಗಿಕೊಳ್ಳೆನು. ನಾನು ಮನುಷ್ಯನಲ್ಲ, ದೇವರೇ; ನಾನು ನಿಮ್ಮಲ್ಲಿ ನೆಲೆಯಾಗಿರುವ ಸದಮಲಸ್ವಾಮಿ, ನಾನು ನಿನ್ನ ಬಳಿಗೆ ರೋಷದಿಂದ ಬಾರೆನು.


ನನ್ನ ದೇವರಾದ ಯೆಹೋವನೇ, ನನ್ನ ಸದಮಲಸ್ವಾಮಿಯೇ, ನೀನು ಅನಾದಿಯಿಂದಿದ್ದೀಯಲ್ಲಾ, ನಾವು ಖಂಡಿತ ಸಾಯುವುದಿಲ್ಲ. ಯೆಹೋವನೇ ನಮ್ಮ ನ್ಯಾಯತೀರ್ಪಿಗಾಗಿ ಅವರನ್ನು ನೇಮಿಸಿರುವೆ; ಶರಣನೇ, ನಮ್ಮನ್ನು ಶಿಕ್ಷಿಸುವುದಕ್ಕಾಗಿ ಅವರನ್ನು ನಮ್ಮ ಮುಂದೆ ನಿಲ್ಲಿಸಿರುವೆ.


ತೇಮಾನಿನಿಂದ ಕರುಣಾಸಾಗರನಾದ ದೇವರು ಬರುತ್ತಿದ್ದಾನೆ, ಸದಮಲಸ್ವಾಮಿಯು ಪಾರಾನ್ ಪರ್ವತದಿಂದ ಬರುತ್ತಾನೆ; ಸೆಲಾ. ಆತನ ಪ್ರಭಾವವು ಆಕಾಶಮಂಡಲವನ್ನೆಲ್ಲಾ ಆವರಿಸಿಕೊಂಡಿದೆ, ಆತನ ಮಹಿಮೆಯು ಭೂಮಂಡಲವನ್ನು ತುಂಬುತ್ತಿದೆ;


ಅವರು ತಮ್ಮ ಕುರಿದನಗಳನ್ನು ಯೋಸೇಫನ ಬಳಿಗೆ ತೆಗೆದುಕೊಂಡು ಬರಲು, ಅವನು ಅವರ ಕುದುರೆಗಳನ್ನೂ, ಕುರಿದನಗಳನ್ನೂ, ಕತ್ತೆಗಳನ್ನೂ ತೆಗೆದುಕೊಂಡು ಅವರಿಗೆ ಧಾನ್ಯವನ್ನು ಕೊಟ್ಟನು. ಆ ವರ್ಷದಲ್ಲಿ ಅವರ ಕುರಿದನಗಳನ್ನೆಲ್ಲಾ ತೆಗೆದುಕೊಂಡು ಧಾನ್ಯವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು.


ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಠಿಯನ್ನು ಹರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿರುವೆ; ಇನ್ನು ಮುಂದೆ ನಿನಗೆ ಯುದ್ಧಗಳು ಇದ್ದೇ ಇರುತ್ತವೆ” ಎಂದು ಹೇಳಿದನು.


ಬಲ ಹೆಚ್ಚಾಗಿರುವುದರಿಂದ ಅದರಲ್ಲಿ ನಂಬಿಕೆಯಿಟ್ಟು, ನಿನ್ನ ಕೆಲಸವನ್ನು ಅದಕ್ಕೆ ಒಪ್ಪಿಸಿಬಿಡುವೆಯೋ?


ಅವರ ಮುಂದೆ ಪೂರ್ವದಿಂದ ಅರಾಮ್ಯರನ್ನು ಮತ್ತು ಅವರ ಹಿಂದೆ ಪಶ್ಚಿಮದಿಂದ ಫಿಲಿಷ್ಟಿಯರನ್ನು ಒಟ್ಟುಗೂಡಿಸುವನು. ಇವರು ಇಸ್ರಾಯೇಲರನ್ನು ಬಾಯಿದೆರೆದು ನುಂಗುವರು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.


ಇವರು ವೀರರಾಗಿ ರಣರಂಗದೊಳಗೆ ಶತ್ರುಗಳನ್ನು ಬೀದಿಗಳ ಕೆಸರಿನಲ್ಲಿ ತುಳಿದುಬಿಡುವರು; ಯೆಹೋವನು ನಮ್ಮ ಸಂಗಡ ಇದ್ದಾನೆಂದು ಯುದ್ಧಮಾಡುವರು; ಎದುರಿಸುವ ಸವಾರರು ಭಂಗಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು