Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 31:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ನನಗೆ ಹೀಗೆ ಹೇಳಿದ್ದಾನೆ, “ಸಿಂಹವು, ಪ್ರಾಯದ ಸಿಂಹವು, ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ, ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿಬಂದರೂ ಅದು ಅವರ ಕೂಗಾಟಕ್ಕೆ ಹೆದರದೆ, ಅವರ ಗದ್ದಲದಿಂದ ಹೇಗೆ ಧೈರ್ಯಗುಂದುವುದಿಲ್ಲವೋ ಹಾಗೆಯೇ ಸೇನಾಧೀಶ್ವರನಾದ ಯೆಹೋವನು ಯುದ್ಧಮಾಡಲು ಚೀಯೋನ್ ಪರ್ವತದ ಶಿಖರದ ಮೇಲೆ ಇಳಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸರ್ವೇಶ್ವರ ನನಗೆ ಹೀಗೆಂದು ಹೇಳಿದ್ದಾರೆ : “ಸಿಂಹವೋ ಪ್ರಾಯದ ಸಿಂಹವೋ ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ, ಆ ಕೂಗನ್ನು ಕೇಳಿ ಕುರುಬರನೇಕರು ಕೂಡಿಬಂದರೂ ಅದು ಅವರ ಕೂಗಾಟಕ್ಕೆ ಹೆದರದು, ಅವರ ಗದ್ದಲಕ್ಕೆ ಎದೆಗುಂದದು. ಅಂತೆಯೇ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಆದ ನಾನು ಯುದ್ಧಮಾಡಲು ಸಿಯೋನ್ ಶಿಖರದ ಮೇಲೆ ಇಳಿದು ಬರುವಾಗ ನನ್ನನ್ನು ಯಾರೂ ಹೆದರಿಸುವುದಿಲ್ಲ, ಎದೆಗುಂದಿಸುವಂತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನು ನನಗೆ ಹೀಗೆ ಹೇಳಿದ್ದಾನೆ - ಸಿಂಹವು, ಪ್ರಾಯದ ಸಿಂಹವು, ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ ಬಹುಮಂದಿ ಕುರುಬರು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ ಅದು ಅವರ ಕೂಗಾಟಕ್ಕೆ ಹೆದರದೆ ಅವರ ಗದ್ದಲದಿಂದ ಹೇಗೆ ಧೈರ್ಯಗುಂದುವದಿಲ್ಲವೋ ಹಾಗೆಯೇ ಸೇನಾಧೀಶ್ವರನಾದ ಯೆಹೋವನು ಯುದ್ಧಮಾಡಲು ಚೀಯೋನ್ ಪರ್ವತದ ಶಿಖರದ ಮೇಲೆ ಇಳಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನು ನನಗೆ ಹೀಗೆ ಹೇಳಿದನು: “ಸಿಂಹವು ಅಥವಾ ಪ್ರಾಯದ ಸಿಂಹವು ಒಂದು ಪ್ರಾಣಿಯನ್ನು ಹಿಡಿದು ಕೊಂದಾಗ ಅದರ ಮೇಲೆ ನಿಂತು ಗರ್ಜಿಸುವದು. ಆ ಸಮಯದಲ್ಲಿ ಯಾವುದೂ ಆ ಸಿಂಹವನ್ನು ಹೆದರಿಸಲಾರದು. ಜನರು ಬಂದು ಗಟ್ಟಿಯಾಗಿ ಚೀರಿಕೊಂಡರೂ ಸಿಂಹಕ್ಕೆ ಹೆದರಿಕೆಯುಂಟಾಗದು; ದೊಡ್ಡ ಶಬ್ದ ಮಾಡಿದರೂ ಸಿಂಹವು ಓಡಿಹೋಗದು.” ಅದೇ ರೀತಿಯಲ್ಲಿ ಸರ್ವಶಕ್ತನಾದ ಯೆಹೋವನು ಚೀಯೋನ್ ಪರ್ವತಕ್ಕೆ ಬಂದು ಯುದ್ಧ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರು ನನಗೆ ಹೀಗೆ ಹೇಳಿದ್ದಾನೆ: ಸಿಂಹವು, ಪ್ರಾಯದ ಸಿಂಹವು ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ, ಕಾವಲುಗಾರನ ಕೂಗನ್ನು ಕೇಳಿ, ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ, ಹೇಗೆ ಅವರ ಶಬ್ದಕ್ಕೆ ಭಯಪಡದೆ ಇಲ್ಲವೆ ಅವರ ಗದ್ದಲಕ್ಕೆ ಕುಂದಿಹೋಗದೆ ಇರುವುದೋ, ಹಾಗೆಯೇ ಸೇನಾಧೀಶ್ವರ ಯೆಹೋವ ದೇವರು ಚೀಯೋನ್ ಪರ್ವತಕ್ಕೋಸ್ಕರವೂ, ಅದರ ಗುಡ್ಡಕ್ಕೋಸ್ಕರವೂ ಯುದ್ಧಮಾಡಲು ಇಳಿದು ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 31:4
21 ತಿಳಿವುಗಳ ಹೋಲಿಕೆ  

ಸಿಂಹವು ಗರ್ಜಿಸಿದರೆ, ಭಯಪಡದೆ ಇರುವವರು ಯಾರು? ಕರ್ತನಾದ ಯೆಹೋವನು ನುಡಿದಿದ್ದಾನೆ, ಆ ನುಡಿಯನ್ನು ಕೇಳಿ ಪ್ರವಾದಿಸದವರು ಯಾರು?


ಸಿಂಹದಂತೆ ಗರ್ಜಿಸುತ್ತಿರುವ ಯೆಹೋವನನ್ನು ಆತನ ಜನರು ಹಿಂಬಾಲಿಸುವರು; ಆತನು ಆರ್ಭಟಿಸಲು ಆತನ ಮಕ್ಕಳು ಪಶ್ಚಿಮದಿಂದ ನಡಗುತ್ತಾ ಬರುವರು;


ನಾನೇ, ಅದರ ಸುತ್ತಮುತ್ತಲೂ ಅಗ್ನಿಪ್ರಾಕಾರವಾಗಿ, ಅದರೊಳಗೆ ವೈಭವವೂ ಆಗಿರುವೆನು’” ಎಂಬುದು ಯೆಹೋವನ ನುಡಿ.


ಯೆಹೋವನು ಶೂರನಂತೆ ಹೊರಟು, ಯುದ್ಧವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸುವನು. ಆರ್ಭಟಿಸಿ ಗರ್ಜಿಸಿ ಶತ್ರುಗಳ ಮೇಲೆ ಬಿದ್ದು ತನ್ನ ಪರಾಕ್ರಮವನ್ನು ತೋರ್ಪಡಿಸುವನು.


ಆ ದಿನದಲ್ಲಿ ಯೆಹೋವನು ಯೆರೂಸಲೇಮಿನವರನ್ನು ಸುತ್ತಲು ಕಾಪಾಡುವನು; ಅವರೊಳಗೆ ಈಗಿನ ಕುಂಟನು ಆ ದಿನದಲ್ಲಿ ದಾವೀದನಂತಿರುವನು; ದಾವೀದ ವಂಶವು ದೇವರಂತೆ, ಯೆಹೋವನ ದೂತನ ಹಾಗೆ ಅವರಿಗೆ ಮುಂದಾಳಾಗುವುದು.


ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ ನೋಡು, ಯೂದ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ವಂಶಜನೂ ಆಗಿರುವ ಒಬ್ಬನು, ಆ ಸುರುಳಿಯನ್ನು ಅದರ ಏಳು ಮುದ್ರೆಗಳನ್ನೂ ತೆರೆಯುವುದಕ್ಕೆ ಜಯವೀರನಾಗಿದ್ದಾನೆ” ಎಂದು ಹೇಳಿದನು.


ಆಗ ಯೆಹೋವನು ಹೊರಟು, ಯುದ್ಧದ ದಿನದಲ್ಲಿ ಹೇಗೋ ಹಾಗೆಯೇ ಆ ಜನಾಂಗಗಳಿಗೆ ಪ್ರತಿಭಟಿಸುವನು.


ಸೇನಾಧೀಶ್ವರನಾದ ಯೆಹೋವನು ತನ್ನ ಜನರನ್ನು ಕಾಪಾಡುವನು; ಅವರು ಶತ್ರುಗಳನ್ನು ನುಂಗಿಬಿಡುವರು, ಕವಣೆಯ ಕಲ್ಲುಗಳನ್ನು ತುಳಿದುಹಾಕುವರು; ರಕ್ತವನ್ನು ಕುಡಿದು ಅಮಲೇರಿದವರಾಗಿ ಭೋರ್ಗರೆಯುವರು; ಬೋಗುಣಿಗಳಂತೆಯೂ, ಯಜ್ಞವೇದಿಯ ಮೂಲೆಗಳಂತೆ ರಕ್ತಪೂರ್ಣರಾಗಿರುವರು.


ಯಾರೂ ಹಾದುಹೋಗದಂತೆ ನನ್ನ ಆಲಯದ ಸುತ್ತಲು ಪಾಳೆಯನ್ನು ಹಾಕಿ ಕಾವಲಾಗಿರುವೆನು; ಇನ್ನು ಮುಂದೆ ಯಾವ ಬಾಧಕನೂ ನನ್ನ ಜನರ ಮೇಲೆ ದಾಳಿಮಾಡುವುದಿಲ್ಲ; ಏಕೆಂದರೆ ಈಗ ನಾನು ಕಣ್ಣಿಟ್ಟು ನೋಡುತ್ತಿದ್ದೇನೆ.


ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟಡವಿಯಿಂದ ಕಸ್ದೀಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿ ಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲನು?


ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.


ಆದಕಾರಣ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಬ್ಬಿದ ಪ್ರಜೆಗಳಿಗೆ ಕ್ಷಯವನ್ನು ಉಂಟುಮಾಡುವನು. ದಹಿಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭವದ ಅಸ್ತಿವಾರಕ್ಕೆ ಹತ್ತಿಕೊಳ್ಳುವುದು.


ಅವನು, “ಎಲ್ಲಾ ಯೆಹೂದ್ಯರೇ, ಯೆರೂಸಲೇಮಿನವರೇ, ಅರಸನಾದ ಯೆಹೋಷಾಫಾಟನೇ, ಯೆಹೋವನು ಹೇಳುವುದನ್ನು ಕೇಳಿರಿ: ಈ ಮಹಾಸಮೂಹದ ನಿಮಿತ್ತವಾಗಿ ಕಳವಳಗೊಳ್ಳಬೇಡಿರಿ; ಹೆದರಬೇಡಿರಿ; ಯುದ್ಧವು ನಿಮ್ಮದಲ್ಲ; ದೇವರದೇ.


ಸಿಂಹವು ಘರ್ಜಿಸುವ ಪ್ರಕಾರ ಮಹಾಶಬ್ದದಿಂದ ಕೂಗಿದನು. ಕೂಗಿದಾಗ ಏಳು ಗುಡುಗುಗಳು ಒಂದೊಂದಾಗಿ ಧ್ವನಿಕೊಟ್ಟವು.


ಯೆಹೋವನೇ ನಿಮಗಾಗಿ ಯುದ್ಧಮಾಡುವನು. ನೀವಂತು ಸುಮ್ಮನೇ ನಿಂತುಕೊಂಡಿರಿ” ಎಂದು ಹೇಳಿದನು.


ಯೆಹೋವನು ಅವರ ರಥಗಳ ಚಕ್ರದ ಕೀಲುಗಳಲ್ಲಿ ವ್ಯತ್ಯಾಸ ಮಾಡಿಬಿಟ್ಟದ್ದರಿಂದ ಐಗುಪ್ತರು ಬಹು ಕಷ್ಟದಿಂದ ರಥಗಳನ್ನು ಸಾಗಿಸಿಕೊಂಡು ಹೋಗಬೇಕಾಯಿತು. ಆಗ ಐಗುಪ್ತ್ಯರು, “ನಾವು ಇಸ್ರಾಯೇಲರ ಮುಂದೆ ನಿಲ್ಲಲಾರೆವು, ಓಡಿ ಹೋಗೋಣ, ಯೆಹೋವನು ಅವರಿಗೋಸ್ಕರ ನಮಗೆ ವಿರೋಧವಾಗಿ ಯುದ್ಧಮಾಡುತ್ತಿದ್ದಾನೆ” ಎಂದು ಹೇಳಿಕೊಂಡರು.


ಆಗ ಯೆಹೋವನು ತನ್ನ ಗಂಭೀರವಾದ ಧ್ವನಿಯನ್ನು ಕೇಳಮಾಡಿ, ತೀವ್ರಕೋಪ, ಕಬಳಿಸುವ ಅಗ್ನಿಜ್ವಾಲೆ, ಬಿರುಗಾಳಿ, ಅತಿವೃಷ್ಟಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.


ಮತ್ತು ಯೆಹೋವನು ಸಂಕಲ್ಪಿಸಿದ ದಂಡದ ಪ್ರತಿಯೊಂದು ಪೆಟ್ಟು, ದಮ್ಮಡಿ, ಕಿನ್ನರಿಗಳ ನಾದದೊಡನೆ ಅವರ ಮೇಲೆ ಬೀಳುವುದು. ಆತನು ಅವರೊಂದಿಗೆ ಹೋರಾಡುತ್ತಾ ಯುದ್ಧಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು