ಯೆಶಾಯ 31:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಗ ಅಶ್ಶೂರ್ಯರು ಕತ್ತಿಯಿಂದ ಬೀಳುವರು. ಅದು ಮನುಷ್ಯರ ಕತ್ತಿಯಲ್ಲ, ಖಡ್ಗವು ಅವರನ್ನು ನುಂಗುವುದು, ಅದು ಮಾನವ ಖಡ್ಗವಲ್ಲ. ಅವರು ಕತ್ತಿಯಿಂದ ತಪ್ಪಿಸಿಕೊಳ್ಳಲು ಓಡುವರು. ಅವರ ಯೌವನಸ್ಥರು ಬಿಟ್ಟಿಯಾಗಿ ಹಿಡಿಯಲ್ಪಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆ ಅಸ್ಸೀರಿಯಾದವರು ಕತ್ತಿಯಿಂದ ಹತರಾಗುವರು, ಮನುಷ್ಯರ ಕತ್ತಿಯಿಂದಲ್ಲ; ಖಡ್ಗವು ಅವರನ್ನು ಕಬಳಿಸುವುದು, ಅದು ಮಾನವ ಖಡ್ಗವಲ್ಲ. ಅವರು ಕತ್ತಿಗೆ ಹೆದರಿ ಓಡುವರು. ಅವರ ಯುವಕರು ಗುಲಾಮರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆಗ ಅಶ್ಶೂರ್ಯರು ಕತ್ತಿಯಿಂದ ಬೀಳುವರು, ಅದು ಮನುಷ್ಯರ ಕತ್ತಿಯಲ್ಲ; ಖಡ್ಗವು ಅವರನ್ನು ನುಂಗುವದು, ಅದು ಮಾನವಖಡ್ಗವಲ್ಲ; ಅವರು ಕತ್ತಿಯ ಕಡೆಯಿಂದ ಓಡುವರು, ಅವರ ಯೌವನಸ್ಥರು ಬಿಟ್ಟಿಹಿಡಿಯಲ್ಪಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅಶ್ಶೂರವು ಕತ್ತಿಯಿಂದ ನಾಶವಾಗುವದು ಖಂಡಿತ. ಆದರೆ ಆ ಕತ್ತಿಯು ಮನುಷ್ಯನ ಕತ್ತಿಯಲ್ಲ. ಖಡ್ಗವು ಅವರನ್ನು ನುಂಗುವುದು, ಆದರೆ ಅದು ಮನುಷ್ಯನ ಖಡ್ಗವಲ್ಲ. ಅಶ್ಶೂರವು ದೇವರ ಖಡ್ಗದಿಂದ ಓಡಿಹೋಗುವದು. ಅದರ ಯೌವನಸ್ಥರು ಸೆರೆಹಿಡಿಯಲ್ಪಟ್ಟು ಗುಲಾಮರನ್ನಾಗಿ ಮಾಡಲ್ಪಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಗ ಅಸ್ಸೀರಿಯದವರು ಖಡ್ಗದಿಂದ ಬೀಳುವರು. ಅದು ಮನುಷ್ಯರ ಖಡ್ಗವಲ್ಲ, ಖಡ್ಗವು ಅವರನ್ನು ನುಂಗುವುದು. ಅದು ಮಾನವ ಖಡ್ಗವಲ್ಲ. ಅವರು ಖಡ್ಗದಿಂದ ತಪ್ಪಿಸಿಕೊಳ್ಳಲು ಓಡುವರು. ಅವರ ಯೌವನಸ್ಥರು ಜೀತದಾಳುಗಳಾಗುವರು. ಅಧ್ಯಾಯವನ್ನು ನೋಡಿ |