Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 32:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅರಮನೆಯು ಪಾಳುಬೀಳುವುದು, ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವುದು, ಓಫೆಲ್ ಗುಡ್ಡವೂ, ಗೋಪುರವೂ ಶಾಶ್ವತವಾದ ಗುಹೆಗಳಾಗಿಯೂ, ಕಾಡುಕತ್ತೆಗಳಿಗೆ ಉಲ್ಲಾಸಕರವಾದ ಸ್ಥಳವಾಗಿಯೂ, ದನಕುರಿಗಳ ಹಿಂಡುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವುದು; ಓಫೆಲ್ ಗುಡ್ಡವು, ಕೀಸ್ ಕೋವರವು ಶಾಶ್ವತವಾಗಿ ಗುಹೆಗಳಾಗುವುವು. ಕಾಡುಕತ್ತೆಗಳಿಗೆ ಬಯಲಾಗಿಯೂ ದನಕರುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅರಮನೆಯು ಬಿಕೋ ಎನ್ನುವದು, ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವದು, ಓಫೆಲ್ ಗುಡ್ಡವೂ ಕೋವರವೂ ಯಾವಾಗಲೂ ಗುಹೆಗಳಾಗಿಯೂ ಕಾಡುಕತ್ತೆಗಳಿಗೆ ಉಲ್ಲಾಸಕರವಾಗಿಯೂ ದನಕುರಿಗಳಿಗೆ ಕಾವಲಾಗಿಯೂ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಜನರು ರಾಜಧಾನಿಯನ್ನು ತೊರೆದುಬಿಡುವರು. ಅರಮನೆ, ಬುರುಜುಗಳೆಲ್ಲವೂ ನಿರ್ಜನವಾಗಿವೆ. ಜನರು ಮನೆಗಳಲ್ಲಿ ವಾಸಿಸದೆ ಗುಹೆಗಳಲ್ಲಿ ವಾಸಮಾಡುವರು. ಕಾಡುಕತ್ತೆಗಳೂ ಕುರಿಗಳೂ ನಗರದಲ್ಲಿ ವಾಸಿಸುವವು. ಪಶುಗಳು ಅಲ್ಲಿ ಹುಲ್ಲು ಮೇಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅರಮನೆ ಹಾಳುಬಿದ್ದಿದೆ. ಗಲಭೆಯಪಟ್ಟಣವು ನಿರ್ಜನವಾಗುವುದು, ಪರ್ವತ ಮತ್ತು ಬುರುಜು ಶಾಶ್ವತವಾಗಿ ಗುಹೆಗಳಾಗುವುವು. ಕಾಡುಕತ್ತೆಗಳಿಗೆ ಬಯಲಾಗಿಯೂ, ದನಕರುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 32:14
27 ತಿಳಿವುಗಳ ಹೋಲಿಕೆ  

ಕೋಟೆಕೊತ್ತಲದ ಪಟ್ಟಣವು ಹಾಳಾಗಿ, ಕಾಡಿನಂತೆ ಜನರಿಲ್ಲದೆ ಶೂನ್ಯ ನಿವಾಸ ಸ್ಥಾನವಾಗಿದೆ; ಅಲ್ಲಿ ಕರುಗಳು ಮೇದು ಮಲಗುವುದು, ಅಲ್ಲಿನ ಚಿಗುರುಗಳನ್ನು ತಿಂದುಬಿಡುವುದು.


ಏಕೆಂದರೆ ನೀನು ದುರ್ಗವನ್ನು ನಾಶಪಡಿಸಿ, ಪಟ್ಟಣವನ್ನು ಹಾಳು ದಿಬ್ಬವನ್ನಾಗಿಯೂ, ಅನ್ಯರ ಕೋಟೆಯನ್ನು ಯಾರೂ ಎಂದಿಗೂ ಕಟ್ಟಲಾರದ ಹಾಳು ಊರನ್ನಾಗಿಯೂ ಮಾಡಿದ್ದಿ.


ಪಟ್ಟಣಗಳು ಹಾಳೂರಾಗಿ ಉಳಿದಿದೆ; ನಾಶವು ಹೆಬ್ಬಾಗಿಲಿಗೆ ಬಡಿದಿದೆ.


ಹಾಳುಪಟ್ಟಣವು ಬಿದ್ದುಹೋಗಿದೆ, ಯಾರೂ ಹೋಗದಂತೆ ಪ್ರತಿಯೊಂದು ಮನೆಯೂ ಮುಚ್ಚಿದೆ.


ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು.


“ಆದರೆ ಸೈನಿಕರ ದಂಡುಗಳು ಯೆರೂಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿರುವುದನ್ನು ನೀವು ಕಾಣುವಾಗ ಅದು ನಾಶವಾಗುವ ಕಾಲ ಸಮೀಪವಾಯಿತೆಂದು ತಿಳಿದುಕೊಳ್ಳಿರಿ.


ಅದಕ್ಕೆ ನಾನು, “ಕರ್ತನೇ, ಇದು ಎಷ್ಟರವರೆಗೆ?” ಎಂದು ಕೇಳಲು ಅದಕ್ಕೆ ಆತನು, “ಯೆಹೋವನು ಜನರನ್ನು ದೂರ ತೊಲಗಿಸಿ ದೇಶದಲ್ಲಿ ನಾಶ ಹೆಚ್ಚಾಗಿ ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಜನರಿಲ್ಲದೆ, ದೇಶವು ಸಂಪೂರ್ಣವಾಗಿ ಹಾಳಾಗುವವರೆಗೂ ಇದೇ ರೀತಿ ಇರುವುದು.


ನನ್ನ ಕಿವಿಯಲ್ಲಿ ಸೇನಾಧೀಶ್ವರನಾದ ಯೆಹೋವನು ಹೇಳುವುದೇನೆಂದರೆ, ಸೊಗಸಾದ ಅನೇಕ ದೊಡ್ಡ ಮನೆಗಳಲ್ಲಿ ಜನರು ವಾಸಮಾಡದೆ ಅವು ಖಂಡಿತವಾಗಿ ಹಾಳು ಬೀಳುವುವು.


ಅವು ಅಡವಿಯ ಮೃಗಗಳಿಗೆ ನೀರುಕೊಡುತ್ತವೆ; ಕಾಡುಕತ್ತೆಗಳು ದಾಹ ತೀರಿಸಿಕೊಳ್ಳುತ್ತವೆ.


ಅವನು ಯೆಹೋವನ ಆಲಯವನ್ನೂ, ಅರಸನ ಅರಮನೆಯನ್ನೂ ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಹಾಗೂ ಪಟ್ಟಣದ ಮುಖ್ಯ ಕಟ್ಟಡಗಳನ್ನೂ ಸುಟ್ಟುಬಿಟ್ಟನು.


ಆಗ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷಿಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶದಲ್ಲಿಯೂ, ಮುಳ್ಳು ಮತ್ತು ದತ್ತೂರಿಗಳಿಂದ ಮುಚ್ಚಿಕೊಂಡು ಹೋಗುವುದು.


ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣವೇ, ಸಂಭ್ರಮದ ಪಟ್ಟಣವೇ; ನಿನ್ನಲ್ಲಿ ಹತರಾದವರು ಕತ್ತಿಯಿಂದ ಸಾಯಲಿಲ್ಲ, ಅವರು ಯುದ್ಧದಲ್ಲಿ ಸತ್ತವರಲ್ಲ.


ಎದ್ದು ರಾತ್ರಿಯಲ್ಲಿ ಅದರ ಮೇಲೆ ಬಿದ್ದು ಅಲ್ಲಿನ ಅರಮನೆಗಳನ್ನು ಹಾಳುಮಾಡೋಣ ಅಂದುಕೊಳ್ಳುವರು.


ಕಾಡುಕತ್ತೆಗಳು ಬೋಳುಗುಡ್ಡಗಳಲ್ಲಿ ನಿಂತುಕೊಂಡು ನರಿಗಳಂತೆ ನಿಟ್ಟುಸಿರುಬಿಟ್ಟು ಗಾಳಿಯನ್ನು ಹಾರೈಸುತ್ತವೆ, ಸೊಪ್ಪುಸದೆಯಿಲ್ಲದೆ ಕಂಗೆಡುತ್ತವೆ.


ದಿಬ್ಬಗಳಿಗೂ ಮತ್ತು ಕತ್ತಿಗಳಿಗೂ ಅಡ್ಡವಾಗಿ ಗೋಡೆಯನ್ನು ಕಟ್ಟಲು ಕೆಡವಿರುವ ಈ ಊರಿನವರ ಮನೆಗಳ ವಿಷಯವಾಗಿಯೂ, ಯೆಹೂದದ ಅರಸರ ಉಪ್ಪರಿಗೆಗಳ ವಿಷಯವಾಗಿಯೂ ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ,


ಬಾಬೆಲಿನ ಅರಸನು ಇವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು.


ಇಲ್ಲದಿದ್ದರೆ ನಾನು ಅವಳ ಬಟ್ಟೆಯನ್ನು ಕಿತ್ತು, ಅವಳನ್ನು ಹುಟ್ಟಿದಾಗ ಇದ್ದಂತೆ ಬೆತ್ತಲೆಯಾಗಿ ನಿಲ್ಲಿಸುವೆನು ಅವಳನ್ನು ಬೆಂಗಾಡಾಗಿಸಿ, ಮರುಭೂಮಿಯ ಸ್ಥಿತಿಗೆ ತಂದು, ನೀರಡಿಕೆಯಿಂದ ಸಾಯಿಸುವೆನು.


ಆ ಕರಾವಳಿಯು ಉಳಿದ ಯೆಹೂದ್ಯರ ಪಾಲಾಗುವುದು; ದನಕುರಿಗಳನ್ನು ಅಲ್ಲೇ ಮೇಯಿಸುವರು; ಸಂಜೆಗೆ ಅಷ್ಕೆಲೋನಿನ ಮನೆಗಳಲ್ಲಿ ಮಲಗಿಕೊಳ್ಳುವರು; ಅವರ ದೇವರಾದ ಯೆಹೋವನು ಅವರನ್ನು ಪರಾಂಬರಿಸಿ ಅವರ ದುರವಸ್ಥೆಯನ್ನು ತಪ್ಪಿಸುವನು.


ಈ ನಿನವೆಯು ಮೊದಲು ಉಲ್ಲಾಸದ ನಗರಿಯಾಗಿ ನೆಮ್ಮದಿಯಿಂದ ನೆಲೆಗೊಂಡಿದ್ದು ತನ್ನ ಹೃದಯದೊಳಗೆ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಅಂದುಕೊಳ್ಳುತ್ತಿತ್ತು; ಅಯ್ಯೋ, ಎಷ್ಟೋ ಹಾಳಾಗಿ ಹೋಗಿ ಮೃಗಗಳು ತಂಗುವ ಕೊಟ್ಟಿಗೆಯ ಬೀಡಾಗಿದೆ! ಅದರ ಮುಂದೆ ಹಾದುಹೋಗುವವರೆಲ್ಲರು ಸಿಳ್ಳು ಹಾಕಿ ಅಪಹಾಸ್ಯ ಮಾಡುತ್ತಾರೆ.


ಇದಾದ ಮೇಲೆ ಅವನು ಗೀಹೋನ್ ಬುಗ್ಗೆಯ ಪಡುವಣ ಕಡೆಯಿಂದ ಮೀನುಬಾಗಿಲಿನ ಮಾರ್ಗದವರೆಗಿರುವ ತಗ್ಗಿನಲ್ಲಿ ಓಫೆಲ್ ಗುಡ್ಡದ ಸುತ್ತಲೂ ದಾವೀದನಗರದ ಹೊರಗಿನ ಗೋಡೆಯನ್ನು ಇನ್ನೂ ಎತ್ತರವಾಗಿ ಕಟ್ಟಿಸಿ, ಯೆಹೂದ ದೇಶದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳಲ್ಲಿ ಸೇನಾಧಿಪತಿಗಳನ್ನಿರಿಸಿದನು.


ಈಗ ಮೂಲೆ ಗೋಪುರ ಮತ್ತು ನೀರು ಬಾಗಿಲಿನ ಪೂರ್ವದಿಕ್ಕಿಗಿರುವ ಓಫೇಲ್ ಗುಡ್ಡವು ದೇವಾಲಯದ ಸೇವಕರ ವಾಸಸ್ಥಾನವಾಗಿತ್ತು.


ಅವಳ ಪುರದ್ವಾರಗಳಲ್ಲಿ ಪ್ರಲಾಪವೂ, ದುಃಖವೂ ತುಂಬಿರುವವು. ಅವಳು ಹಾಳಾಗಿ ನೆಲದ ಮೇಲೆ ಕುಳಿತುಕೊಳ್ಳುವಳು.


ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಉಳಲ್ಪಡುವುದು, ಯೆರೂಸಲೇಮು ಹಾಳುದಿಬ್ಬಗಳಾಗುವುದು. ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು