Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 32:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವುದು. ಆಗ ಅರಣ್ಯವು ತೋಟವಾಗುವುದು, ಈಗಿನ ತೋಟವು (ಮುಂದೆ ಬರುವವರಿಗೆ) ಅರಣ್ಯವಾಗಿ ಕಾಣಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆದರೆ ದೇವರು ಉನ್ನತಲೋಕದಿಂದ ತಮ್ಮ ಪವಿತ್ರಾತ್ಮ ಧಾರೆಯನ್ನು ನಮ್ಮ ಮೇಲೆ ಸುರಿಯುವರು; ಆಗ ಪಾಳುಭೂಮಿ ಫಲಭರಿತ ಭೂಮಿಯಾಗುವುದು; ಫಲಭರಿತ ಭೂಮಿ ಸಮೃದ್ಧ ಅರಣ್ಯವಾಗಿ ಮಾರ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವದು; ಆಗ ಅರಣ್ಯವು ತೋಟವಾಗುವದು, [ಈಗಿನ] ತೋಟವು [ಆಗಿನವರಿಗೆ] ಅರಣ್ಯವಾಗಿ ಕಾಣಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15-16 ದೇವರು ನಮಗೆ ತನ್ನ ಆತ್ಮವನ್ನು ಸುರಿಸುವತನಕ ಇದು ಮುಂದುವರಿಯುವದು. ಈಗ ಯಾವ ಒಳ್ಳೆಯ ಸಂಗತಿಗಳು ನಡಿಯದೆ ಇರುವದರಿಂದ ದೇಶವು ಮರುಭೂಮಿಯಂತಿದೆ. ಆದರೆ ಮುಂದಿನ ದಿವಸಗಳಲ್ಲಿ ಮರುಭೂಮಿಯು ಕರ್ಮೆಲ್ ಪ್ರಾಂತ್ಯದಂತೆ ಆಗಿ ನ್ಯಾಯಧರ್ಮಗಳು ಅಲ್ಲಿ ನೆಲೆಸುವವು. ಕರ್ಮೆಲ್ ಹಸಿರು ಕಾಡಾಗಿದ್ದು ಶುಭವು ನೆಲೆಸಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ದೇವರು ಉನ್ನತಲೋಕದಲ್ಲಿ ತಮ್ಮ ಪವಿತ್ರಾತ್ಮ ಧಾರೆಯನ್ನು ನಮ್ಮ ಮೇಲೆ ಸುರಿಯುವರು; ಆಗ ಪಾಳುಭೂಮಿ ಫಲಭರಿತ ಭೂಮಿಯಾಗುವುದು, ಫಲಭರಿತ ಭೂಮಿ ಸಮೃದ್ಧವಾದ ಅರಣ್ಯವಾಗಿ ಮಾರ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 32:15
29 ತಿಳಿವುಗಳ ಹೋಲಿಕೆ  

ಇನ್ನು ಸ್ವಲ್ಪ ಕಾಲದೊಳಗೆ ಲೆಬನೋನ್ ಅರಣ್ಯವು ತೋಟವಾಗುವುದು, ಈಗಿನ ತೋಟವು ಅರಣ್ಯವಾಗಿ ಕಾಣಿಸುವುದು.


ಇನ್ನೆಂದಿಗೂ ನಾನು ನನ್ನ ಮುಖವನ್ನು ಮರೆಮಾಡುವುದಿಲ್ಲ. ಇಸ್ರಾಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನೆ” ಇದು ಕರ್ತನಾದ ಯೆಹೋವನ ನುಡಿ.


ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು, ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು.


ಹೀಗಿರಲು ಪಶ್ಚಿಮದವರು ಯೆಹೋವನ ನಾಮಕ್ಕೆ ಹೆದರುವರು, ಪೂರ್ವ ದಿಕ್ಕಿನವರು ಆತನ ಮಹಿಮೆಗೆ ಅಂಜುವರು; ಬಿರುಗಾಳಿಯಿಂದ ಹೊಡೆಯಲ್ಪಟ್ಟು ಇಕ್ಕಟ್ಟಿನಲ್ಲಿ ಹರಿಯುವ ತೊರೆಯ ಹಾಗೆ ಆತನು ರಭಸದಿಂದ ಬರುವನಷ್ಟೆ.


ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು, ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ ನೀವು ನೋಡಿ ಕೇಳುವುದನ್ನು ಸುರಿಸಿದ್ದಾನೆ.


ಇಗೋ ನನ್ನ ತಂದೆಯು ವಾಗ್ದಾನ ಮಾಡಿದ ಶಕ್ತಿಯನ್ನು ನಿಮಗೆ ಕಳುಹಿಸಿಕೊಡುತ್ತೇನೆ. ದೇವರು ಮೇಲಣ ಲೋಕದಿಂದ ನಿಮಗೆ ಶಕ್ತಿಯನ್ನು ಕೊಡುವ ತನಕ ಈ ಪಟ್ಟಣದಲ್ಲೇ ಕಾದುಕೊಂಡಿರಿ” ಎಂದು ಹೇಳಿದನು.


ಹೀಗಿದ್ದ ಮೇಲೆ ದೇವರಾತ್ಮಸಂಬಂಧವಾದ ಈ ಸೇವೆಯು ಇನ್ನೆಷ್ಟು ಮಹಿಮೆಯಿಂದ ಇರಬೇಕಲ್ಲವೇ?


ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ನೀನು ಜೀವಶ್ವಾಸವನ್ನು ಊದಲು ಅವು ಹೊಸದಾಗಿ ಹುಟ್ಟುತ್ತವೆ. ನೀನು ಭೂಮಿಯನ್ನು ನೂತನಪಡಿಸುತ್ತಿರುತ್ತಿ.


ಆಗ ಆತನ ಜನರು ಪುರಾತನವಾದ ಮೋಶೆಯ ಕಾಲವನ್ನು ಜ್ಞಾಪಕಮಾಡಿಕೊಂಡು ಹೀಗೆಂದರು, “ತನ್ನ ಜನವೆಂಬ ಮಂದೆಯನ್ನು ಕುರುಬರ ಸಹಿತ ಸಮುದ್ರದೊಳಗಿಂದ ಮೇಲಕ್ಕೆ ಬರಮಾಡಿದಾತನು ಎಲ್ಲಿ?


ಆಕಾಶಮಂಡಲವೇ, ಮೇಲಿನಿಂದ ಧರ್ಮರಸವನ್ನು ಮಳೆಯಂತೆ ಸುರಿಸು. ಭೂಮಿಯು ಒಡೆದು ರಕ್ಷಣೆಯನ್ನು ಮೊಳೆಯಿಸಿ, ಅದರೊಡನೆ ನೀತಿಫಲವನ್ನು ಬೆಳೆಯಿಸಲಿ. ಯೆಹೋವನೆಂಬ ನಾನೇ ಇದಕ್ಕೆಲ್ಲಾ ಕರ್ತನು.


ನನ್ನ ಗದರಿಕೆಗೆ ಲಕ್ಷ್ಯಕೊಡಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ, ನನ್ನ ಮಾತುಗಳನ್ನು ನಿಮಗೆ ತಿಳಿಯಪಡಿಸುವೆನು.


ಬೆಂಗಾಡು ಸರೋವರವಾಗುವುದು, ಒಣನೆಲದಲ್ಲಿ ಬುಗ್ಗೆಗಳು ಹರಿಯುವವು; ನರಿಗಳು ಮಲಗುತ್ತಿದ್ದ ಸ್ಥಳವು ಆಪುಜಂಬುಗಳ ಪ್ರದೇಶವಾಗುವುದು.


ಅರಣ್ಯವನ್ನು ಕೆರೆಯಾಗಿಯೂ, ಒಣನೆಲವನ್ನು ಬುಗ್ಗೆಗಳಾಗಿಯೂ ಮಾಡಿ,


ಆತನು ನಿವಾಸಿಗಳ ದುಷ್ಟತನಕ್ಕಾಗಿ ನದಿಗಳನ್ನು ಅರಣ್ಯವಾಗುವಂತೆಯೂ,


ಆದರೆ ಯೇಸು ತನ್ನನ್ನು ನಂಬುವವರು ಹೊಂದಲಿರುವ ಪವಿತ್ರಾತ್ಮವರವನ್ನು ಕುರಿತು ಹೀಗೆ ಹೇಳಿದನು. ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ ಕಾರಣ ಪವಿತ್ರಾತ್ಮವರವು ಇನ್ನೂ ಕೊಡಲ್ಪಟ್ಟಿರಲಿಲ್ಲ.


ಆತನೇ ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯಾಗಿಯೂ, ಊರಬಾಗಿಲಲ್ಲಿ ಶತ್ರುಗಳನ್ನು ನಾಶಮಾಡುವವರಿಗೆ ಶೌರ್ಯವಾಗಿಯೂ ಪರಿಣಮಿಸುವನು.


ನಾನಂತೂ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು, ನೋಡಿರಿ; “ನಿಮ್ಮಲ್ಲಿ ಪ್ರವೇಶಿಸಿರುವ ನನ್ನ ಆತ್ಮವೂ, ನಿಮ್ಮ ಬಾಯಿಗೆ ನಾನು ಕೊಟ್ಟಿರುವ ಮಾತುಗಳೂ, ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ ಅಥವಾ ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ ಇಂದಿನಿಂದ ಎಂದಿಗೂ ತೊಲಗುವುದಿಲ್ಲ” ಎಂದು ಯೆಹೋವನು ಹೇಳುತ್ತಾನೆ.


ನಾನು ನನ್ನ ಶ್ವಾಸವನ್ನು ನಿಮ್ಮಲ್ಲಿ ಊದಿ, ನಿಮ್ಮನ್ನು ಬದುಕಿಸಿ, ನಿಮ್ಮ ದೇಶದಲ್ಲಿ ನೆಲೆಗೊಳಿಸುವೆನು; ಆಗ ಯೆಹೋವನಾದ ನಾನೇ ಇದನ್ನು ನುಡಿದು, ನಡೆಸಿದ್ದೇನೆ ಎಂದು ತಿಳಿದುಕೊಳ್ಳುವಿರಿ” ಇದು ಯೆಹೋವನ ಸಂಕಲ್ಪ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು