Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 33:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸೂರೆಯಾಗದಿದ್ದರೂ ಸೂರೆಮಾಡಿದಿ! ಬಾಧೆಪಡದಿದ್ದರೂ ಬಾಧಿಸಿದಿ! ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರೆಮಾಡಿ ಬಿಟ್ಟ ಮೇಲೆ ನೀನೂ ಸೂರೆಯಾಗುವಿ. ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಹಾಳುಮಾಡುತ್ತಿರುವವನೇ, ನಿನಗೆ ಧಿಕ್ಕಾರ ! ನಿನ್ನನ್ನು ಯಾರೂ ಹಾಳುಮಾಡದಿದ್ದರೂ ನೀನು ಹಾಳುಮಾಡುತ್ತಿರುವೆ. ನಿನ್ನನ್ನು ಯಾರೂ ವಂಚಿಸದಿದ್ದರೂ ನೀನು ವಂಚನೆಮಾಡುತ್ತಿರುವೆ. ಇದಕ್ಕೆಲ್ಲ ಅಂತ್ಯವಿದೆ. ಈಗ ಹಾಳುಮಾಡುತ್ತಿರುವ ನೀನು ಆಗ ನೀನೇ ಹಾಳಾಗುವೆ. ಈಗ ವಂಚನೆ ಮಾಡುತ್ತಿರುವ ನೀನೇ ವಂಚಿತನಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸೂರೆಯಾಗದಿದ್ದರೂ ಸೂರೆಮಾಡಿದಿ, ಬಾಧೆಪಡದಿದ್ದರೂ ಬಾಧಿಸಿದಿ; ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರೆಮಾಡಿ ಬಿಟ್ಟ ಮೇಲೆ ನೀನೂ ಸೂರೆಯಾಗುವಿ! ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನೀವು ಯುದ್ಧಮಾಡಿ ಇತರರಿಂದ ಸುಲಿದುಕೊಳ್ಳುತ್ತೀರಿ. ಆದರೆ ಅವರು ನಿಮ್ಮಿಂದ ಏನೂ ಕದ್ದುಕೊಳ್ಳಲಿಲ್ಲ. ನೀವು ಜನರಿಗೆ ವಿರುದ್ಧವಾಗಿ ತಿರುಗುತ್ತೀರಿ. ಆದರೆ ಅವರು ನಿಮಗೆ ವಿರುದ್ಧವಾಗಲಿಲ್ಲ. ಆದ್ದರಿಂದ ನೀವು ಕದ್ದುಕೊಳ್ಳುವದನ್ನು ಬಿಟ್ಟಾಗ ಇತರರು ನಿಮ್ಮದನ್ನು ಕದ್ದುಕೊಳ್ಳುತ್ತಾರೆ. ನೀವು ಇತರರಿಗೆ ಹಾನಿ ಮಾಡುವದನ್ನು ನಿಲ್ಲಿಸಿದಾಗ ಇತರರು ನಿಮಗೆ ಹಾನಿ ಮಾಡುವರು. ಆಗ ನೀವು ಹೀಗೆ ಹೇಳುವಿರಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಹಾಳು ಮಾಡುತ್ತಿರುವವನೇ, ನಿನಗೆ ಕಷ್ಟ! ನಿನ್ನನ್ನು ಯಾರೂ ಸೂರೆಮಾಡದಿದ್ದರೂ ನೀನು ಸೂರೆಮಾಡುತ್ತಿರುವೆ; ನಿನ್ನನ್ನು ಯಾರೂ ವಂಚಿಸದಿದ್ದರೂ ನೀನು ವಂಚನೆ ಮಾಡುತ್ತಿರುವೆ. ಇದಕ್ಕೆಲ್ಲ ಅಂತ್ಯವಿದೆ. ಈಗ ಹಾಳು ಮಾಡುತ್ತಿರುವ ನೀನು, ಆಗ ನೀನೇ ಹಾಳಾಗುವೆ. ಈಗ ವಂಚನೆ ಮಾಡುತ್ತಿರುವ ನೀನೇ ವಂಚಿತನಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 33:1
25 ತಿಳಿವುಗಳ ಹೋಲಿಕೆ  

ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.


ಭೂಮಂಡಲದ ಕಟ್ಟಕಡೆಯಿಂದ, “ನೀತಿವಂತರಿಗೆ ಮಹಿಮೆಯಾಗಲಿ” ಎಂಬ ಗೀತೆಗಳು ನಮಗೆ ಕೇಳಿ ಬಂದಿವೆ, ಆದರೆ “ನಾನಾದರೋ ಕ್ಷಯಿಸಿ ಹೋಗಿದ್ದೇನೆ, ನನ್ನ ಗತಿಯನ್ನು ಏನು ಹೇಳಲಿ! ಬಾಧಕರು ಬಾಧಿಸುತ್ತಾರೆ, ಹೌದು, ಬಾಧಕರು ಬಾಧಿಸೇ ಬಾಧಿಸುತ್ತಾರೆ” ಎಂದುಕೊಂಡೆನು.


ಏಕೆಂದರೆ ದೇವರು ತನ್ನ ವಾಕ್ಯವನ್ನು ನೆರವೇರಿಸುವುದಕ್ಕಾಗಿಯೂ, ನೆರವೇರಿಸುವಂತೆಯೂ ತನ್ನ ಚಿತ್ತವನ್ನು ಅವರು ಒಂದೇ ಅಭಿಪ್ರಾಯವುಳ್ಳವರಾಗಿ ತಮ್ಮ ಅಧಿಕಾರವನ್ನು ಮೃಗಕ್ಕೆ ಕೊಡುವುದಕ್ಕೂ ಇದನ್ನು ಅವುಗಳ ಹೃದಯಗಳಲ್ಲಿ ಇರಿಸಿದ್ದನು.


ಘೋರದರ್ಶನವು ನನಗೆ ತಿಳಿಯ ಬಂದಿದೆ; ಬಾಧಕನು ಬಾಧಿಸುತ್ತಿದ್ದಾನೆ, ಸೂರೆಗಾರನು ಸೂರೆಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ, ಮುತ್ತಿಗೆ ಹಾಕು! ನಿಮ್ಮ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.


ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ, “ಅಶ್ಶೂರದ ರಾಜನ ಹೃದಯದ ದೊಡ್ಡಸ್ತಿಕೆಯ ಫಲಕ್ಕೂ, ಅವನ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.”


ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು, ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಸಾಯುವನು. ಇದರಲ್ಲಿ ದೇವಜನರಿಗೆ ತಾಳ್ಮೆಯೂ ನಂಬಿಕೆಯೂ ಅಗತ್ಯವಾಗಿರಬೇಕಾಗಿದೆ.


ಇಗೋ, ಸಂಜೆಯಲ್ಲಿ ಹೆದರಿ ಉದಯದೊಳಗಾಗಿ ಇಲ್ಲವಾಗುವರು! ನಮ್ಮನ್ನು ಸೂರೆ ಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ.


ಆಗ ಅದೋನೀಬೆಜೆಕನು, “ಕೈ ಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾನೆ” ಅಂದನು. ಅವರು ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬರಲು ಅವನು ಅಲ್ಲಿ ಸತ್ತನು.


ಅವರು ನೀತಿವಂತರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದ್ದರಿಂದ, ನೀನು ಅವರಿಗೆ ರಕ್ತವನ್ನೇ ಕುಡಿಯುವುದಕ್ಕೆ ಕೊಟ್ಟಿದ್ದೀ ಅದಕ್ಕೆ ಅವರು ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.


ಯೆಹೋವನು ಅವನಿಗೂ ಶೆಕೆಮಿನ ಹಿರಿಯರಿಗೂ ವೈಮನಸ್ಸು ಹುಟ್ಟುವಂತೆ ಮಾಡಿದನು. ಅವರು ಅವನಿಗೆ ದ್ರೋಹಮಾಡಿದರು.


ಅಶ್ಶೂರ್ಯರನ್ನು ನನ್ನ ದೇಶದಲ್ಲಿ ಮುರಿದು, ನನ್ನ ಬೆಟ್ಟಗಳ ಮೇಲೆ ತುಳಿದುಬಿಡುವೆನು. ಆಗ ಅವರು ಹೂಡಿದ ನೊಗವು ನನ್ನ ಜನರಿಂದ ತೊಲಗಿ, ಹೊರಿಸಿದ ಹೊರೆಯು ನನ್ನ ಜನರ ಹೆಗಲ ಮೇಲಿನಿಂದ ದೂರವಾಗುವುದು.


ಆಗ ಅಶ್ಶೂರ್ಯರು ಕತ್ತಿಯಿಂದ ಬೀಳುವರು. ಅದು ಮನುಷ್ಯರ ಕತ್ತಿಯಲ್ಲ, ಖಡ್ಗವು ಅವರನ್ನು ನುಂಗುವುದು, ಅದು ಮಾನವ ಖಡ್ಗವಲ್ಲ. ಅವರು ಕತ್ತಿಯಿಂದ ತಪ್ಪಿಸಿಕೊಳ್ಳಲು ಓಡುವರು. ಅವರ ಯೌವನಸ್ಥರು ಬಿಟ್ಟಿಯಾಗಿ ಹಿಡಿಯಲ್ಪಡುವರು.


ನೀನು ಕೇಳಿಲ್ಲ, ತಿಳಿದೂ ಇಲ್ಲ, ಪುರಾತನಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ನೀನು ದೊಡ್ಡ ವಂಚಕನೆಂದೂ, ಗರ್ಭದಿಂದಲೇ ದ್ರೋಹಿಯೆಂದು ನಾನು ತಿಳಿದುಕೊಂಡಿದ್ದೇನೆ.


ಅದಕ್ಕಾಗಿ ಅವರು ಕಾಡಿನಿಂದ ಸೌದೆಯನ್ನು ತರಬೇಕಾಗುವುದಿಲ್ಲ, ವನದಲ್ಲಿ ಮರವನ್ನು ಕಡಿಯಬೇಕಾಗುವುದಿಲ್ಲ; ಆಯುಧಗಳನ್ನೇ ಸೌದೆಯನ್ನಾಗಿ ಉರಿಸುವರು; ತಮ್ಮನ್ನು ಸೂರೆಮಾಡಿದವರನ್ನು ತಾವು ಸೂರೆಮಾಡುವರು, ತಮ್ಮನ್ನು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆಯುವರು” ಇದು ಕರ್ತನಾದ ಯೆಹೋವನ ನುಡಿ.


ಯೆಹೋವನೇ ಅವರ ವ್ಯಾಜ್ಯವನ್ನು ನಡೆಸಿ, ಹಾಳುಮಾಡಿದವರ ಜೀವವನ್ನು ಹಾಳುಮಾಡುವನು.


ಆಹಾ, ಆ ಕಾಲದಲ್ಲಿ ನಿನ್ನನ್ನು ಬಾಧಿಸುವವರಿಗೆ ತಕ್ಕದ್ದನ್ನು ಮಾಡುವೆನು; ನಿನ್ನಲ್ಲಿ ಕುಂಟುವವರನ್ನು ರಕ್ಷಿಸುವೆನು, ಚದರಿ ಹೋದವರನ್ನು ಕೂಡಿಸುವೆನು; ಅಂತು ಲೋಕದಲ್ಲೆಲ್ಲಾ ಅವಮಾನಪಟ್ಟವರಿಗೆ ಸ್ತೋತ್ರ ಕೀರ್ತನೆಗಳನ್ನು ಉಂಟುಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು