Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 33:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸನ್ಮಾರ್ಗದಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಚಿಕೊಂಡ ಲಾಭ ಬೇಡವೆಂದು, ಲಂಚಮುಟ್ಟದಂತೆ ಕೈ ಒದರಿ, ಕೊಲೆಯ ಮಾತಿಗೆ ಕಿವಿಗೊಡದೆ, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತಸನ್ನಿಧಾನದಲ್ಲಿ ವಾಸಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸನ್ಮಾರ್ಗದಲ್ಲಿ ನಡೆವವನು, ಸತ್ಯವನ್ನೇ ನುಡಿವವನು, ಬಲಾತ್ಕಾರ್ಯದಿಂದ ಲಭಿಸಿದ್ದನ್ನು ತಿರಸ್ಕರಿಸುವವನು, ಲಂಚಕ್ಕೆ ಕೈಚಾಚದೆ ಹಿಂದಕ್ಕೆ ಸರಿವವನು, ಕೊಲೆ ಮಾತುಗಳಿಗೆ ಕಿವಿ ಮುಚ್ಚಿಕೊಳ್ಳುವವನು, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನು - ಇಂಥವನೇ ಉನ್ನತ ಸ್ಥಾನದಲ್ಲಿ ವಾಸಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 [ಕೇಳಿರಿ], ಸನ್ಮಾರ್ಗದಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ಕೊಲೆಯ ಮಾತಿಗೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತಸನ್ನಿಧಾನದಲ್ಲಿ ವಾಸಿಸುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಪ್ರಾಮಾಣಿಕರಾಗಿರುವ ನೀತಿವಂತರು ಹಣಕ್ಕಾಗಿ ಇತರರಿಗೆ ಹಾನಿಮಾಡದವರಾಗಿದ್ದಾರೆ. ಅವರು ಆ ಬೆಂಕಿಯಲ್ಲಿ ವಾಸಿಸುವರು. ಅವರು ಲಂಚ ತೆಗೆದುಕೊಳ್ಳಲು ನಿರಾಕರಿಸುವರು. ಇತರರನ್ನು ಕೊಲೆಮಾಡುವ ಯೋಜನೆಯನ್ನು ಕೇಳಲು ಅವರು ಇಷ್ಟಪಡುವುದಿಲ್ಲ. ಅವರು ಕೆಟ್ಟಕಾರ್ಯಗಳ ಯೋಜನೆಗಳನ್ನು ನೋಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನೀತಿಯಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈಚಾಚಿದೆ. ಕೊಲೆಯ ಮಾತಿಗೆ ಕಿವಿಗೊಡದೆ, ಕೆಟ್ಟದ್ದನ್ನು ಕಾಣದಂತೆ ಕಣ್ಣು ಮುಚ್ಚಿಕೊಳ್ಳುವವರೇ ಉನ್ನತ ಸ್ಥಳದಲ್ಲಿ ವಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 33:15
43 ತಿಳಿವುಗಳ ಹೋಲಿಕೆ  

ವ್ಯರ್ಥಕಾರ್ಯಗಳಲ್ಲಿ ದೃಷ್ಟಿಯಿಡದಂತೆ ನನ್ನನ್ನು ಕಾಪಾಡು, ನಿನ್ನ ಮಾರ್ಗದಲ್ಲಿ ನಡೆಯುವಂತೆ ನನ್ನನ್ನು ಚೈತನ್ಯಗೊಳಿಸು.


ಪ್ರಿಯರಾದ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಕ್ರಿಸ್ತನು ಹೇಗೆ ನೀತಿವಂತನಾಗಿದ್ದನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.


ಇಗೋ, ನಿಮ್ಮ ಹೊಲದಲ್ಲಿನ ಪೈರುಗಳನ್ನು ಕೊಯ್ದದವರ ಕೂಲಿಯನ್ನು ಕೊಡದೆ ವಂಚಿಸಿದಿರಿ. ಆ ಕೂಲಿಯ ಕೂಗು ಹಾಗು ಪೈರು ಕೊಯ್ದದವರ ಕೂಗು ಸೇನಾಧೀಶ್ವರನಾದ ಕರ್ತನ ಕಿವಿಗಳನ್ನು ಮುಟ್ಟಿವೆ.


ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು.


ಆದರೆ ಜಕ್ಕಾಯನು ನಿಂತುಕೊಂಡು “ಕರ್ತನಿಗೆ, ಕರ್ತನೇ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಕಿತ್ತುಕೊಂಡಿದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ” ಎಂದು ಹೇಳಿದನು.


ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ, ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡೆದುಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.


ಅವರ ಬಾಯಲ್ಲಿ ಸತ್ಯಬೋಧನೆಯು ನೆಲೆಸಿತ್ತು, ಅವರ ತುಟಿಗಳಲ್ಲಿ ಅಪವಾದದ ಮಾತುಗಳು ಬರಲಿಲ್ಲ. ಅವರು ಶಾಂತಿಯಿಂದಲೂ, ಸದ್ಧರ್ಮದಿಂದಲೂ ನನ್ನೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಬಹು ಜನರನ್ನು ಪಾಪದ ಕಡೆಯಿಂದ ತಿರುಗಿಸಿದರು.


ಯಾವಾಗಲೂ ನ್ಯಾಯವನ್ನು ಕಾಪಾಡುವವರೂ, ನೀತಿಯನ್ನು ಪಾಲಿಸುವವರೂ ಧನ್ಯರು.


ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು, ಪಕ್ಷಪಾತಮಾಡಬಾರದು, ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.


“ನಾನು ಆತನನ್ನು ಹಿಡಿಯಲು ನಿಮಗೆ ಸಹಾಯಮಾಡಿದರೆ ನನಗೆ ಏನು ಕೊಡುತ್ತೀರಿ?” ಅಂದನು. ಅವರು ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ತೂಗಿ ಕೊಟ್ಟರು.


ಇಲ್ಲಿ ನಿಂತುಕೊಂಡಿರುವ ನಾನು ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರೂ ವಂಚಿಸಿ, ಪೀಡಿಸಿದ್ದೂ, ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಮಾಡಿದ್ದೂ ಉಂಟೋ? ಇದ್ದರೆ ಯೆಹೋವನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ” ಅಂದನು.


ಅದಕ್ಕೆ ಮೋಶೆಯು ಬಹಳ ಕೋಪಗೊಂಡು ಯೆಹೋವನಿಗೆ, “ನೀನು ಅವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ; ಅವರಲ್ಲಿ ಒಬ್ಬನಿಗಾದರೂ ಹಾನಿ ಮಾಡಿದವನಲ್ಲ” ಎಂದು ಮನವಿಮಾಡಿದನು.


ಇದನ್ನು ಆಚರಿಸುವಾಗ ನಿಮಗೆ ಬೆಳಕು ಉದಯದಂತೆ ಮೂಡಿ ಬರುವುದು, ನಿಮ್ಮ ಕ್ಷೇಮವು ಬೇಗನೆ ಬೆಳೆಯುವುದು; ನಿಮ್ಮ ಧರ್ಮವು ನಿಮಗೆ ಮುಂಬಲವಾಗಿರುವುದು, ಯೆಹೋವನ ಮಹಿಮೆಯು ನಿಮಗೆ ಹಿಂಬಲವಾಗಿರುವುದು.


ನಿರ್ದೋಷದ ನಡತೆಯವನು ನಿರ್ಭಯವಾಗಿ ನಡೆಯುವನು, ವಕ್ರಮಾರ್ಗಿಯು ಬೈಲಿಗೆ ಬೀಳುವನು.


ಸೂರೆಮಾಡುವವನು ಸ್ವಂತ ಮನೆಯನ್ನು ಬಾಧಿಸುವನು. ಲಂಚವನ್ನೊಪ್ಪದವನು ಸುಖವಾಗಿ ಬಾಳುವನು.


ನೋಡಿರಿ, ಕೇಡಿನ ಬಂಧನಗಳನ್ನು ಬಿಚ್ಚುವುದು, ನೊಗಹೊರಿಸುವ ಹುರಿಯನ್ನು ಕಳಚುವುದು, ಜಜ್ಜಿ ಹೋದವರನ್ನು ಬಿಡುಗಡೆ ಮಾಡುವುದು, ನೊಗಗಳನ್ನೆಲ್ಲಾ ಮುರಿಯುವುದು,


“‘ಇಗೋ, ನೀನು ದೋಚಿಕೊಂಡ ಲಾಭವನ್ನೂ, ನಿನ್ನಲ್ಲಿ ಸುರಿದ ರಕ್ತವನ್ನೂ ನಾನು ನೋಡಿ ಕೈ ಎತ್ತಿದ್ದೇನೆ.


ನನ್ನ ನಡತೆಯಲ್ಲಿ ದಾರಿತಪ್ಪಿದ್ದರೆ, ನನ್ನ ಹೃದಯವು ಕಂಡಕಂಡದ್ದನ್ನು ಹಿಂಬಾಲಿಸಿದ್ದರೆ, ನನ್ನ ಕೈಗಳಲ್ಲಿ ಕಲ್ಮಷವು ಅಂಟಿಕೊಂಡಿದ್ದರೆ,


ಅವನು ಸಾಲಕ್ಕೆ ಬಡ್ಡಿ ಕೇಳದವನೂ, ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವುದಿಲ್ಲ.


ಮಗನೇ, ಪಾಪಿಗಳು ದುಷ್ಪ್ರೇರಣೆಯನ್ನು ಮಾಡಿದರೆ ನೀನು ಒಪ್ಪಲೇ ಬೇಡ.


ಮಗನೇ, ಅವರೊಡನೆ ದಾರಿಯಲ್ಲಿ ನಡೆಯಬಾರದು, ಅವರ ಮಾರ್ಗದಲ್ಲಿ ನೀನು ಹೆಜ್ಜೆಯಿಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು