Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 33:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅಲ್ಲಿ ಯೆಹೋವನು ಘನಹೊಂದಿದವನಾಗಿ ನದಿಸರೋವರಗಳಂತೆ ನಮ್ಮೊಂದಿಗಿರುವನು. ಹುಟ್ಟುಗೋಲಿನ ದೋಣಿಯಾಗಲಿ, ದೊಡ್ಡ ಹಡಗಾಗಲಿ ಅದನ್ನು ದಾಟುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅಲ್ಲಿ ಸರ್ವೇಶ್ವರ ತಮ್ಮ ಶಕ್ತಿಯನ್ನು ತೋರ್ಪಡಿಸುವರು. ನದಿಸರೋವರಗಳಂತೆ ನಮ್ಮನ್ನು ಸುತ್ತುವರಿಯುವರು. ಹುಟ್ಟುಗೋಲಿನ ದೋಣಿಯಾಗಲಿ, ದೊಡ್ಡದಾದ ಹಡಗಾಗಲಿ ಅದನ್ನು ದಾಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅಲ್ಲಿ ಯೆಹೋವನು ಘನಹೊಂದಿದವನಾಗಿ ಹುಟ್ಟುಗೋಲಿನ ದೋಣಿ ಹೋಗದ, ಘನನಾವೆಯೂ ಸಂಚರಿಸದ ವಿಸ್ತೀರ್ಣನದೀನದಗಳಂತೆ ನಮ್ಮೊಂದಿಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21-23 ಕೆಂದರೆ ಬಲಿಷ್ಠನಾದ ಯೆಹೋವನು ಅಲ್ಲಿದ್ದಾನೆ. ಆ ದೇಶವು ತೊರೆಗಳೂ ಅಗಲವಾಗಿ ಹರಿಯುವ ನದಿಗಳೂ ಇರುವ ದೇಶವಾಗಿದೆ. ಆದರೆ ಆ ನದಿಯಲ್ಲಿ ವೈರಿಯ ದೋಣಿಯಾಗಲಿ, ಹಡಗುಗಳಾಗಲಿ ಇರುವದಿಲ್ಲ. ಆ ಹಡುಗುಗಳಲ್ಲಿ ಕೆಲಸಮಾಡುವವರೇ, ನೀವು ಅದರ ಹಗ್ಗಗಳಲ್ಲಿ ಕೆಲಸಮಾಡುವದನ್ನು ಬಿಟ್ಟುಬಿಡಿರಿ. ಹಡಗಿನ ಸ್ತಂಭವನ್ನು ನೀವು ಬಲಪಡಿಸಲಾರಿರಿ. ಹಡಗಿನ ಹಾಯಿಗಳನ್ನು ನಿಮ್ಮಿಂದ ತೆರೆಯಲು ಆಗುವದಿಲ್ಲ. ಯಾಕೆಂದರೆ ದೇವರೇ ನಮ್ಮ ನ್ಯಾಯಾಧೀಶನು. ಆತನು ಧರ್ಮಶಾಸ್ತ್ರವನ್ನು ಸಿದ್ಧಪಡಿಸಿದಾತನು. ಯೆಹೋವನೇ ನಮ್ಮ ಅರಸನು. ಆತನೇ ನಮ್ಮನ್ನು ರಕ್ಷಿಸುವನು, ನಮಗೆ ಸಂಪತ್ತನ್ನು ದಯಪಾಲಿಸುವನು. ಕೈಕಾಲು ಊನವಾದವರೂ ಸಹ ಯುದ್ಧದಲ್ಲಿ ಸಂಪತ್ತನ್ನು ಗಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅಲ್ಲಿ ಯೆಹೋವ ದೇವರು ನಮ್ಮ ಬಲಶಾಲಿಯಾಗಿರುತ್ತಾರೆ. ನದಿಸರೋವರಗಳಂತೆ ನಮ್ಮನ್ನು ಸುತ್ತುವರಿಯುವರು. ಹುಟ್ಟುಗೋಲಿನ ದೋಣಿಯಾಗಲಿ, ದೊಡ್ಡದಾದ ಹಡಗಾಗಲಿ ಅದನ್ನು ದಾಟುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 33:21
14 ತಿಳಿವುಗಳ ಹೋಲಿಕೆ  

ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಅವನಿಗೆ ಕಾಣಿಸಿಕೊಂಡು;


ಯೆಹೋವನು ಹೀಗೆನ್ನುತ್ತಾನೆ, “ಇಗೋ, ನಾನು ಆಕೆಗೆ ಸುಖವನ್ನು ನದಿಯಂತೆ ದಯಪಾಲಿಸಿ, ತುಂಬಿ ತುಳುಕುವ ತೊರೆಯನ್ನೋ ಎಂಬಂತೆ ಜನಾಂಗಗಳ ವೈಭವವನ್ನು ನೀಡುವೆನು; ನೀವು ಪಾನಮಾಡುವಿರಿ; ನಿಮ್ಮನ್ನು ಕಂಕುಳಲ್ಲಿ ಎತ್ತಿಕೊಂಡು ಹೋಗುವರು, ತೊಡೆಯ ಮೇಲೆ ನಲಿದಾಡಿಸುವರು.


ನೀನು ನನ್ನ ಆಜ್ಞೆಗಳನ್ನು ಕೇಳಿದ್ದರೆ ಎಷ್ಟೋ ಚೆನ್ನಾಗಿತ್ತು! ನಿನ್ನ ಸುಖವು ದೊಡ್ಡ ನದಿಯಂತೆಯೂ, ನಿನ್ನ ಕ್ಷೇಮವು ಸಮುದ್ರದ ಅಲೆಗಳ ಹಾಗೂ ಇರುತ್ತಿದ್ದವು.


ಬೋಳುಗುಡ್ಡಗಳಲ್ಲಿ ನದಿಗಳನ್ನು, ಕಣಿವೆಗಳಲ್ಲಿ ಒರತೆಗಳನ್ನು ಹೊರಡಿಸಿ, ಅರಣ್ಯವನ್ನು ಕೆರೆಯಾಗಿಯೂ, ಮರುಭೂಮಿಯನ್ನು ಬುಗ್ಗೆಗಳನ್ನಾಗಿಯೂ ಮಾಡುವೆನು.


ಯೆಹೋವನ ಮಹಾಧ್ವನಿಯು ಮೇಘಮಂಡಲದಲ್ಲಿ ಕೇಳಿಸುತ್ತದೆ; ಪ್ರಭಾವಸ್ವರೂಪನಾದ ದೇವರು ಗುಡುಗುತ್ತಾನೆ; ಯೆಹೋವನು ಆಕಾಶದ ಜಲರಾಶಿಗಳ ಮೇಲೆ ಇದ್ದಾನೆ.


ನೀವು ಭೂಷಿತ ರಾಜನನ್ನು ಕಣ್ಣಾರೆ ದರ್ಶನ ಮಾಡುವಿರಿ. ಅತಿವಿಸ್ತಾರವಾದ ಸ್ವದೇಶವನ್ನು ನೀವು ಕಣ್ಣು ತುಂಬಾ ನೋಡುವಿರಿ.


ಇಗೋ, ಹೊಸ ಕಾರ್ಯವನ್ನು ಮಾಡುವೆನು, ಈಗ ತಲೆದೋರುತ್ತಲಿದೆ. ಇದು ನಿಮಗೆ ಕಾಣುವುದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸಿ, ಅರಣ್ಯದಲ್ಲಿ ನದಿಗಳನ್ನು ಹರಿಸುವೆನು.


ಬಯಲಿನ ಮೃಗಗಳು, ನರಿಗಳು, ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅರಣ್ಯದಲ್ಲಿ ನೀರನ್ನು, ಮರುಭೂಮಿಯಲ್ಲಿ ನದಿಗಳನ್ನು ನಾನು ಆರಿಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವುದಕ್ಕೆ ಕೊಟ್ಟೆನು. ನಾನು ಸೃಷ್ಟಿಸಿಕೊಂಡ ಆಪ್ತಜನರ ಜಲಪಾನಕ್ಕಾಗಿ,


ಈ ಯಾಕೋಬನಲ್ಲಿ ಯಾವ ಆಪತ್ತಿನ ಸೂಚನೆಯೂ ಕಾಣುವುದಿಲ್ಲ ಅಥವಾ ಇಸ್ರಾಯೇಲರಿಗೆ ಯಾವ ವಿಪತ್ತಿನ ಸೂಚನೆಯೂ ತೋರುವುದಿಲ್ಲ. ಅವರಿಗೆ ದೇವರಾಗಿರುವ ಯೆಹೋವನು ಅವರ ಸಂಗಡ ಇದ್ದಾನೆ, ಅವರು ತಮ್ಮ ಅರಸನಿಗಾಗಿ ಮಾಡುವ ಜಯ ಘೋಷವು ಕೇಳಿಸುತ್ತ ಇದೆ.


ತಪ್ಪಿಸಿಕೊಂಡ ಗುಲಾಮನು ನಿಮ್ಮಲ್ಲಿರುವುದಕ್ಕೆ ಬಂದರೆ ಅವನನ್ನು ಅವನ ದಣಿಗೆ ಪುನಃ ವಶಪಡಿಸಬಾರದು.


ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.


“ಆಹಾ, ನಾನು ಇವರ ಮೇಲೆ ಕೈಬೀಸುವೆನು; ಇವರು ತಮಗೆ ಅಡಿಯಾಳಾದವರಿಗೆ ಸೂರೆಯಾಗುವರು” ಎಂದು ಹೇಳುತ್ತಾನೆ. ಆಗ ಸೇನಾಧೀಶ್ವರ ಯೆಹೋವನು ನನ್ನನ್ನು ಕಳುಹಿಸಿದ್ದಾನೆಂಬುದು ನಿಮಗೆ ಗೊತ್ತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು