ಯೆಶಾಯ 33:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಚೀಯೋನಿನ ಯಾವ ನಿವಾಸಿಯೂ “ನಾನು ಅಸ್ವಸ್ಥನು” ಎಂದು ಹೇಳುವುದಿಲ್ಲ. ಅಲ್ಲಿಯ ಜನರ ಪಾಪವು ಪರಿಹಾರವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಸಿಯೋನಿನ ಯಾವ ನಿವಾಸಿಯೂ, “ನಾನು ಅಸ್ವಸ್ಥನು” ಎಂದು ಹೇಳನು, ಅಲ್ಲಿಯ ಜನರ ಪಾಪವು ಪರಿಹಾರವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಚೀಯೋನಿನ ಯಾವ ನಿವಾಸಿಯೂ ತಾನು ಅಸ್ವಸ್ಥನು ಎಂದು ಹೇಳನು; ಅಲ್ಲಿಯ ಜನರ ಪಾಪವು ಪರಿಹಾರವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಅಲ್ಲಿ ವಾಸಿಸುವವರಲ್ಲಿ ಯಾರೂ “ನನಗೆ ಸೌಖ್ಯವಿಲ್ಲ” ಎಂದು ಹೇಳುವುದಿಲ್ಲ. ಅಲ್ಲಿ ವಾಸಿಸುವವರೆಲ್ಲಾ ತಮ್ಮ ಪಾಪಗಳಿಗೆ ಕ್ಷಮೆಹೊಂದಿದವರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಚೀಯೋನಿನ ಯಾವ ನಿವಾಸಿಯೂ, “ನಾನು ಅಸ್ವಸ್ಥನಾಗಿದ್ದೇನೆ,” ಎಂದು ಹೇಳನು. ಅದರಲ್ಲಿ ವಾಸವಾಗಿರುವ ಜನರ ಪಾಪವು ಕ್ಷಮಿಸಲಾಗುವುದು. ಅಧ್ಯಾಯವನ್ನು ನೋಡಿ |
ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದನು.