Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 33:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಜ್ಞಾನವೂ, ತಿಳಿವಳಿಕೆಯೂ, ರಕ್ಷಣಾಕಾರ್ಯದ ಸಮೃದ್ಧಿಯೂ ಇರುವುದರಿಂದ ನಿನ್ನ ಕಾಲದಲ್ಲಿ ಸ್ಥೈರ್ಯವಿರುವುದು; ಯೆಹೋವನ ಮೇಲಣ ಭಯಭಕ್ತಿಯು ನಿನಗೆ ನಿಧಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಿಮ್ಮ ಕಾಲಕ್ಕೆ ಬೇಕಾದ ಸ್ಥಿರತೆಯನ್ನು ನೀಡುವರು. ರಕ್ಷಣೆಗೆ ಬೇಕಾದ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡುವರು. ಸರ್ವೇಶ್ವರ ಸ್ವಾಮಿಯಲ್ಲಿ ನಿಮಗಿರುವ ಭಯಭಕ್ತಿಯೇ ನಿಮ್ಮ ನಿಧಿಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಜ್ಞಾನವೂ ತಿಳುವಳಿಕೆಯೂ ರಕ್ಷಣ ಕಾರ್ಯಸಮೃದ್ಧಿಯೂ ಇರುವದರಿಂದ ನಿನ್ನ ಕಾಲದಲ್ಲಿ ಸ್ಥೈರ್ಯವಿರುವದು; ಯೆಹೋವನ ಮೇಲಣ ಭಯಭಕ್ತಿಯು ನಿನಗೆ ನಿಧಿಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಜೆರುಸಲೇಮೇ, ನೀನು ಐಶ್ವರ್ಯವಂತಳಾಗಿರುವೆ. ನೀನು ದೇವರ ವಿಷಯವಾದ ಜ್ಞಾನ, ತಿಳುವಳಿಕೆ ಮತ್ತು ರಕ್ಷಣೆಗಳಿಂದ ಐಶ್ವರ್ಯವಂತಳಾಗಿರುವೆ. ಯೆಹೋವನ ಮೇಲೆ ನಿನಗಿರುವ ಗೌರವವೇ ನಿನ್ನ ಭಂಡಾರವಾಗಿದೆ. ನೀನು ಹೀಗೆಯೇ ಮುಂದುವರಿಯುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ನಿಮ್ಮ ಸಮಯಕ್ಕೆ ಖಚಿತವಾದ ಆಧಾರವಾಗುತ್ತಾರೆ. ರಕ್ಷಣೆ ಜ್ಞಾನ ತಿಳುವಳಿಕೆಗಳ ನಿಕ್ಷೇಪವಾಗಿಯೂ ಇರುವನು. ಯೆಹೋವ ದೇವರ ಭಯವೇ ಅವನ ಬೊಕ್ಕಸವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 33:6
39 ತಿಳಿವುಗಳ ಹೋಲಿಕೆ  

ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು. ಅದಕ್ಕೆ ಇಹಪರಗಳಲ್ಲಿನ ಜೀವನಕ್ಕೆ ವಾಗ್ದಾನ ಉಂಟು.


ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ಯೆಹೋವನ ಭಯವು ಜೀವದಾಯಕವು, ಭಯಭಕ್ತಿಯುಳ್ಳವನು ತೃಪ್ತನಾಗಿ ನೆಲೆಗೊಳ್ಳುವನು, ಅವನಿಗೆ ಕೇಡು ಸಂಭವಿಸದು.


ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ.


ಹತ್ತು ಮಂದಿ ಅಧಿಕಾರಿಗಳಿಂದ ಪಟ್ಟಣಕ್ಕೆ ಉಂಟಾಗುವ ಬಲಕ್ಕಿಂತಲೂ ಜ್ಞಾನಿಗೆ ಜ್ಞಾನದಿಂದ ಉಂಟಾಗುವ ಬಲವು ಹೆಚ್ಚು.


ಯೆಹೋವನ ಭಯ ಜೀವದ ಬುಗ್ಗೆ, ಮೃತ್ಯುಪಾಶದಿಂದ ತಪ್ಪಿಸಿಕೊಳ್ಳಲು ಅದು ಸಾಧನವಾಗಿದೆ.


ಯೆಹೋವನು ತನ್ನ ಜನರಿಗೆ ಬಲವೂ, ತಾನು ಅಭಿಷೇಕಿಸಿದವನಿಗೆ ಆಶ್ರಯದುರ್ಗವೂ ಆಗಿದ್ದಾನೆ.


ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಆಕಾಶಮಂಡಲವನ್ನು ನೋಡಿರಿ, ಕೆಳಗೆ ಭೂಮಂಡಲವನ್ನು ದೃಷ್ಟಿಸಿರಿ. ಆಕಾಶವು ಹೊಗೆಯಂತೆ ಚದರಿ ಹೋಗುವುದು, ಭೂಮಿಯು ಹಳೆಯ ವಸ್ತ್ರದಂತಾಗುವುದು, ಭೂನಿವಾಸಿಗಳು ಸೊಳ್ಳೆಗಳೋಪಾದಿಯಲ್ಲಿ ಸಾಯುವರು. ಆದರೆ ನನ್ನ ವಿಮೋಚನಕ್ರಿಯೆಯೋ ಶಾಶ್ವತವಾಗಿ ನಿಲ್ಲುವುದು, ನನ್ನ ರಕ್ಷಣಾಧರ್ಮದ ಕಾರ್ಯಕ್ಕೆ ಭಂಗವೇ ಇರುವುದಿಲ್ಲ.


ಧನವು ಹೇಗೊ ಹಾಗೆ ಜ್ಞಾನವು ಆಶ್ರಯ. ಜ್ಞಾನಕ್ಕೆ ವಿಶೇಷವೇನೆಂದರೆ ತನ್ನನ್ನು ಹೊಂದಿದವನಿಗೆ ಅದು ಜೀವದಾಯಕವೆಂಬುದೇ.


ಅಧರ್ಮದಿಂದ ದೇಶದಲ್ಲಿ ಬಹು ನಾಯಕರಿರುವರು, ಜ್ಞಾನಿಗಳೂ, ವಿವೇಕಿಗಳೂ ಆದವರಿಂದ ಧರ್ಮವು ಶಾಶ್ವತವಾಗಿರುವುದು.


ಕಳವಳದಿಂದ ಕೂಡಿದ ಬಹುಧನಕ್ಕಿಂತಲೂ ಯೆಹೋವನ ಭಯದಿಂದ ಕೂಡಿದ ಅಲ್ಪ ಧನವೇ ಲೇಸು.


ಕರ್ತನೇ, ಯೆಹೋವನೇ, ನನ್ನ ಆಶ್ರಯದುರ್ಗವೇ, ಯುದ್ಧ ಸಮಯದಲ್ಲಿ ನೀನೇ ನನ್ನ ಶಿರಸ್ತ್ರಾಣ,


ಸತ್ಯತೆ, ದೈನ್ಯ, ನೀತಿಗಳನ್ನು ಸ್ಥಾಪಿಸುವುದಕ್ಕಾಗಿ ಸಕಲ ವೈಭವದೊಡನೆ ವಾಹನರೂಢನಾಗಿ, ವಿಜಯೋತ್ಸವದೊಡನೆ ಹೊರಡು. ನಿನ್ನ ಬಲಗೈ ಭಯಂಕರ ಕೃತ್ಯಗಳನ್ನು ನಡೆಸಲಿ.


ದುಃಖಪಡುವವರಾಗಿದ್ದರೂ ಸೇವೆಯಲ್ಲಿ ಯಾವಾಗಲೂ ಸಂತೋಷಪಡುತ್ತೇವೆ, ಬಡವರಾಗಿದ್ದರೂ ಅನೇಕರನ್ನು ಐಶ್ವರ್ಯವಂತರಾಗಿ ಮಾಡಿದ್ದೇವೆ; ಏನೂ ಇಲ್ಲದವರಾಗಿದ್ದರೂ ಎಲ್ಲಾ ಹೊಂದಿದವರಾಗಿದ್ದೇವೆ.


ನ್ಯಾಯಪಾಲಕನಾದ ರಾಜನು ದೇಶವನ್ನು ವೃದ್ಧಿಗೆ ತರುವನು, ಅನ್ಯಾಯವಾಗಿ ತೆರಿಗೆಯನ್ನು ಕಸಕೊಳ್ಳುವವನು ದೇಶವನ್ನು ನಾಶಮಾಡುವನು.


ಯೆಹೋವನು ಹಿಜ್ಕೀಯನ ಸಂಗಡ ಇದ್ದುದರಿಂದ ಅವನು ಹೋದ ಎಲ್ಲ ಕಡೆ ಅಭಿವೃದ್ಧಿ ಹೊಂದಿದನು. ಇವನು ಅಶ್ಶೂರದ ಅರಸನಿಗೆ ವಿರುದ್ಧವಾಗಿ ದಂಗೆ ಎದ್ದು ಸ್ವತಂತ್ರನಾದನು.


ಯೆಹೋವನಿಗೆ ಭಯಪಡುವುದರಿಂದ ಕೇವಲ ನಿರ್ಭಯ, ಆತನ ಮಕ್ಕಳಿಗೆ ಆಶ್ರಯವಿದ್ದೇ ಇರುವುದು.


ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ; ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಜ್ಞಾನವು ತುಂಬಿಕೊಂಡಿರುವುದು.


ಆ ದಿನದಲ್ಲಿ ಯೆಹೂದ ದೇಶದೊಳಗೆ ಈ ಗೀತೆಯನ್ನು ಹಾಡುವರು, “ನಮಗೆ ಬಲವಾದ ಪಟ್ಟಣವಿದೆ. ಯೆಹೋವನು ತನ್ನ ರಕ್ಷಣೆಯನ್ನು ಕೋಟೆಯನ್ನಾಗಿಯೂ, ಹೊರಪೌಳಿಯನ್ನಾಗಿಯೂ ಮಾಡಿದ್ದಾನೆ.


ನಮ್ಮ ಉತ್ಸವಗಳು ನಡೆಯುವ ಚೀಯೋನ್ ಪಟ್ಟಣವನ್ನು ದೃಷ್ಟಿಸಿರಿ, ಯೆರೂಸಲೇಮ್ ನೆಮ್ಮದಿಯ ನಿವಾಸವಾಗಿಯೂ, ಗೂಟಕೀಳದ, ಹಗ್ಗಹರಿಯದ ಒಂದೇ ಕಡೆ ಇರುವ ಗುಡಾರವಾಗಿಯೂ ಇರುವುದನ್ನು ನೀವು ಕಣ್ಣಾರೆ ಕಾಣುವಿರಿ.


ಇಸ್ರಾಯೇಲಿಗೂ ಯೆಹೋವನಿಂದ ಶಾಶ್ವತ ರಕ್ಷಣೆ ದೊರೆಯುವುದು. ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವುದಿಲ್ಲ, ಮಾನಭಂಗಪಡುವುದಿಲ್ಲ.


ಸೆರೆಯಲ್ಲಿ ಕುಗ್ಗಿರುವವನು ಸಾಯನು, ಪಾತಾಳಕ್ಕೆ ಇಳಿಯನು, ಬೇಗನೆ ಬಿಡುಗಡೆಯಾಗುವನು. ಅವನಿಗೆ ಅನ್ನದ ಕೊರತೆಯೇ ಇರುವುದಿಲ್ಲ.


ನಿನ್ನ ನಂಬಿಕೆಗೆ ನಿನ್ನ ಭಯಭಕ್ತಿಯೂ, ನಿನ್ನ ನಿರೀಕ್ಷೆಗೆ ನಿನ್ನ ಸನ್ಮಾರ್ಗವೂ ಆಧಾರವಲ್ಲವೋ?


ಆಗ ನೀನು ಯೆಹೋವನ ಭಯವನ್ನು ಅರಿತು, ದೈವಜ್ಞಾನವನ್ನು ಪಡೆದುಕೊಳ್ಳುವಿ.


ಜ್ಞಾನಿಗಳ ಜ್ಞಾನಕಿರೀಟವೇ ಅವರ ಶ್ರೇಷ್ಠ ಸಂಪತ್ತು, ಜ್ಞಾನಹೀನರ ಮೂರ್ಖತನವು ಬರೀ ಮೂರ್ಖತನವೇ.


ನೀತಿಯ ಪರಿಣಾಮ ಶಾಂತಿ; ನೀತಿಯ ಫಲವು, ನಿತ್ಯವಾದ ಸಮಾಧಾನ ಮತ್ತು ನಿತ್ಯವಾದ ಭರವಸೆ ಆಗಿರುವವು.


ನನ್ನ ಜನರು ಸಮಾಧಾನದ ನಿವಾಸದಲ್ಲಿಯೂ, ನಿರ್ಭಯವಾದ ನಿಲಯಗಳಲ್ಲಿಯೂ, ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.


ನೆರೆಹೊರೆಯವರೂ, ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು, ‘ಯೆಹೋವನ ಜ್ಞಾನವನ್ನು ಪಡೆಯಿರಿ’ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವುದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು. ನಾನು ಅವರ ಅಪರಾಧವನ್ನು ಕ್ಷಮಿಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವುದಿಲ್ಲ. ಇದು ಯೆಹೋವನ ನುಡಿ” ಎಂಬುದೇ.


ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಮಹಿಮೆಯ ಜ್ಞಾನವು ತುಂಬಿಕೊಂಡಿರುವುದು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು