Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 33:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದೇಶವು ಪ್ರಲಾಪಿಸಿ ಕುಗ್ಗುತ್ತದೆ, ಲೆಬನೋನ್ ನಾಚಿಕೊಂಡು ಒಣಗುತ್ತದೆ, ಶಾರೋನ್ ಬೆಂಗಾಡಾಗಿದೆ, ಬಾಷಾನ್ ಮತ್ತು ಕರ್ಮೆಲ್ ಎಲೆಗಳನ್ನು ಉದುರಿಸಿಬಿಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಾಡು ದುಃಖದಿಂದ ಸೊರಗುತ್ತಿದೆ. ಲೆಬನೋನ್ ನಾಚಿಕೆಯಿಂದ ಒಣಗುತ್ತಿದೆ. ಶಾರೋನ್ ಬೆಂದು ಬೆಂಡಾಗಿದೆ. ಬಾಷಾನ್ ಮತ್ತು ಕರ್ಮೆಲ್ ಎಲೆಗಳಿಲ್ಲದೆ ಬೋಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದೇಶವು ಪ್ರಲಾಪಿಸಿ ಕುಗ್ಗುತ್ತದೆ, ಲೆಬನೋನ್ ನಾಚಿಕೊಂಡು ಒಣಗುತ್ತದೆ. ಶಾರೋನ್ ಬೆಂಗಾಡಾಗಿದೆ, ಬಾಷಾನ್ ಮತ್ತು ಕರ್ಮೆಲ್ [ತಳಿರುಗಳನ್ನು] ಉದುರಿಸಿಬಿಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇಶವು ಅಸ್ವಸ್ಥತೆಯಿಂದ ಸಾಯುತ್ತಿದೆ. ಲೆಬನೋನ್ ನಾಚಿಗೊಂಡು ಒಣಗುತ್ತಿದೆ. ಶಾರೋನ್ ತಗ್ಗು ಒಣಗಿ ನಿರ್ಜನವಾಗಿದೆ. ಬಾಷಾನ್ ಮತ್ತು ಕರ್ಮೆಲ್ ಹಿಂದೆ ಬಹು ಅಂದವಾದ ಸಸಿಗಳನ್ನು ಬೆಳೆಯಿಸುತ್ತಿದ್ದವು. ಈಗ ಅವುಗಳು ಅಲ್ಲಿ ಬೆಳೆಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದೇಶವು ಪ್ರಲಾಪಿಸಿ ಕುಗ್ಗುತ್ತದೆ. ಲೆಬನೋನು ನಾಚಿಕೆಪಟ್ಟು ಕಡಿದು ಬೀಳುವುದು. ಶಾರೋನ್ ಬೆಂಗಾಡಾಗಿದೆ. ಬಾಷಾನ್ ಮತ್ತು ಕರ್ಮೆಲ್ ಎಲೆಗಳನ್ನು ಉದುರಿಸಿಬಿಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 33:9
23 ತಿಳಿವುಗಳ ಹೋಲಿಕೆ  

ಅದು ಸಮೃದ್ಧಿಯಾಗಿ ಹೂಬಿಟ್ಟು, ಉತ್ಸಾಹ ಧ್ವನಿಮಾಡುವಷ್ಟು ಉಲ್ಲಾಸಿಸುವುದು. ಲೆಬನೋನಿನ ಮಹಿಮೆಯೂ, ಕರ್ಮೆಲಿನ ಮತ್ತು ಶಾರೋನಿನ ವೈಭವವೂ ಅದಕ್ಕೆ ದೊರೆಯುವವು; ಇವೆಲ್ಲಾ ಯೆಹೋವನ ಮಹಿಮೆಯನ್ನೂ, ನಮ್ಮ ದೇವರ ವೈಭವವನ್ನೂ ಕಾಣುವವು.


ಆತನು ಸಮುದ್ರವನ್ನು ಗದರಿಸಿ ಒಣಗಿಸುತ್ತಾನೆ, ಸಕಲನದಿಗಳನ್ನು ಬತ್ತಿಸುತ್ತಾನೆ; ಬಾಷಾನೂ ಮತ್ತು ಕರ್ಮೆಲ್ ಹೊಲಗಳೂ ಕಂದುತ್ತವೆ. ಲೆಬನೋನಿನ ಚಿಗುರು ಬಾಡುತ್ತದೆ.


ಆಗ ನನ್ನ ಭಕ್ತಜನರ ಹಿತಕ್ಕಾಗಿ ಶಾರೋನು ಹಿಂಡುಗಳಿಗೆ ಹುಲ್ಲುಗಾವಲಾಗಿಯೂ, ಆಕೋರಿನ ತಗ್ಗು ದನದ ಹಕ್ಕೆಯಾಗಿಯೂ ಇರುವವು.


ಫಲವತ್ತಾದ ಭೂಮಿಯ ಮಧ್ಯದಲ್ಲಿನ ಕಾಡಿನೊಳಗೆ ಪ್ರತ್ಯೇಕವಾಗಿ ತಂಗುವ ನಿನ್ನ ಜನರನ್ನು, ನಿನ್ನ ಸ್ವತ್ತಾದ ಹಿಂಡನ್ನು ನಿನ್ನ ದಿವ್ಯಹಸ್ತದಿಂದ ಮೇಯಿಸು. ಪೂರ್ವಕಾಲದಂತೆ ಬಾಷಾನಿನಲ್ಲಿಯೂ, ಗಿಲ್ಯಾದಿನಲ್ಲಿಯೂ ಮೇಯಲಿ.


ಇಸ್ರಾಯೇಲನ್ನು ಪುನಃ ಅದರ ಹುಲ್ಗಾವಲಿಗೆ ಸೇರಿಸುವೆನು; ಅದು ಕರ್ಮೆಲಿನಲ್ಲಿಯೂ, ಬಾಷಾನಿನಲ್ಲಿಯೂ ಮೇಯುವುದು; ಎಫ್ರಾಯೀಮಿನ ಮತ್ತು ಗಿಲ್ಯಾದಿನ ಬೆಟ್ಟಗಳಲ್ಲಿ ತೃಪ್ತಿಗೊಳ್ಳುವುದು.


ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ, ‘ನನ್ನ ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು ವೃಕ್ಷಗಳನ್ನೂ, ಶ್ರೇಷ್ಠವಾದ ತುರಾಯಿ ಮರಗಳನ್ನೂ ಕಡಿದು ಬಿಟ್ಟಿದ್ದೇನೆ; ಅಲ್ಲಿನ ಬಹುದೂರದ ಶಿಖರವನ್ನೂ, ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ.


ಇಗೋ, ಯೆಹೋವನು ಭೂಮಿಯನ್ನು ಬರಿದುಮಾಡಿ, ಎಲ್ಲಾ ಪ್ರದೇಶವನ್ನು ನಿರ್ಜನಮಾಡಿ, ಅದನ್ನು ವಿಕಾರಪಡಿಸಿ, ಅದರ ನಿವಾಸಿಗಳನ್ನು ಚದುರಿಸಿಬಿಡುವವನಾಗಿದ್ದಾನೆ.


ಹೌದು, ತುರಾಯಿ ಮರಗಳೂ, ಲೆಬನೋನಿನ ದೇವದಾರು ವೃಕ್ಷಗಳೂ, ‘ನೀನು ಸುಮ್ಮನಿರುವುದರಿಂದ ನಮ್ಮನ್ನು ಕಡಿಯಲು ಯಾರೂ ಬರುವುದಿಲ್ಲ’ ಎಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ.


ಅವಳ ಪುರದ್ವಾರಗಳಲ್ಲಿ ಪ್ರಲಾಪವೂ, ದುಃಖವೂ ತುಂಬಿರುವವು. ಅವಳು ಹಾಳಾಗಿ ನೆಲದ ಮೇಲೆ ಕುಳಿತುಕೊಳ್ಳುವಳು.


ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳ ಮತ್ತು ಬಾಷಾನಿನ ಎಲ್ಲಾ ಅಲ್ಲೋನ ಮರಗಳ ಮೇಲೆಯೂ,


ನಾನು ಶಾರೋನಿನ ನೆಲಸಂಪಿಗೆ, ತಗ್ಗಿನ ತಾವರೆ.


ಆ ಕಾಲದಲ್ಲಿ ನಾವು ಅವನ ಎಲ್ಲಾ ಪಟ್ಟಣಗಳನ್ನು ಜಯಿಸಿದೆವು; ನಾವು ಜಯಿಸದೇ ಇದ್ದ ಪಟ್ಟಣವು ಒಂದೂ ಇರಲಿಲ್ಲ. ಬಾಷಾನಿನಲ್ಲಿರುವ ಓಗನ ರಾಜ್ಯದಲ್ಲಿ ಅಂದರೆ ಅರ್ಗೋಬ್ ಎಂಬ ಸಮಸ್ತ ಪ್ರದೇಶದಲ್ಲಿ ಅರವತ್ತು ಪಟ್ಟಣಗಳನ್ನು ತೆಗೆದುಕೊಂಡೆವು.


ಮತ್ತು ಲುದ್ದದಲ್ಲಿಯೂ, ಶಾರೋನಿನಲ್ಲಿಯೂ ವಾಸವಾಗಿದ್ದವರೆಲ್ಲರು ಅವನನ್ನು ನೋಡಿ, ಅವರು ಕರ್ತನ ಕಡೆಗೆ ತಿರುಗಿಕೊಂಡರು.


ಆತನು ಅಡವಿಯ ಪೊದೆಗಳನ್ನು ಕಬ್ಬಿಣದ ಕೊಡಲಿಯಿಂದ ಕಡಿದುಬಿಡುವನು. ಲೆಬನೋನಿನ ವನವು ಬಲಿಷ್ಠನಾದವನ ಮುಂದೆ ಬಿದ್ದುಹೋಗುವುದು.


ಆ ಮೇಲೆ ನಾನು ಅರೀಯೇಲನ್ನು ಬಾಧಿಸುವೆನು; ಅರಚಾಟ ಕಿರಿಚಾಟಗಳಿಂದ ತುಂಬುವುದು; ಆ ಪಟ್ಟಣವು ನನಗೆ ಅರೀಯೇಲಾಗಿಯೇ ಪರಿಣಮಿಸುವುದು.


ಹೀಗಿರಲು ದೇಶವು ನರಳುವುದು, ಅದರಲ್ಲಿ ವಾಸಿಸುವ ಸಕಲ ಭೂಜಂತುಗಳೂ ಮತ್ತು ಆಕಾಶದ ಪಕ್ಷಿಗಳೂ ಬಳಲಿ ಹೋಗುವವು; ಸಮುದ್ರದ ಮೀನುಗಳು ಸಹ ನಶಿಸಿ ಹೋಗುವವು.


ಮಾಗದ ಹಣ್ಣುಗಳನ್ನು ಕಳೆದುಕೊಂಡ ದ್ರಾಕ್ಷಿಯ ಬಳ್ಳಿಯಂತೆ ಇರುವನು, ಎಣ್ಣೆಯ ಮರದ ಹಾಗೆ ತನ್ನ ಹೂವುಗಳನ್ನು ಉದುರಿಸಿಬಿಡುವನು.


ಆಮೋಸನು ಹೀಗೆ ಪ್ರಕಟಿಸಿದನು, “ಯೆಹೋವನು ಚೀಯೋನಿನಿಂದ ಗರ್ಜಿಸಿ, ಯೆರೂಸಲೇಮಿನಿಂದ ಧ್ವನಿಗೈಯುವನು. ಆಗ ಕುರುಬರ ಹುಲ್ಲುಗಾವಲುಗಳು ಬಾಡಿಹೋಗುವವು. ಕರ್ಮೆಲ್ ಬೆಟ್ಟದ ತುದಿಯು ಒಣಗಿಹೋಗುವವು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು