ಯೆಶಾಯ 34:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯೆಹೋವನ ಶಾಸ್ತ್ರದಲ್ಲಿ ಹುಡುಕಿ ಓದಿರಿ, ಇವುಗಳಲ್ಲಿ ಒಂದಾದರೂ ಇಲ್ಲದೆ ಇರುವುದಿಲ್ಲ, ಜೊತೆಯಿಲ್ಲದೆ ಒಂದೂ ಇಲ್ಲ. ಏಕೆಂದರೆ ಆತನ ಬಾಯಿಯೇ ಅದನ್ನು ಆಜ್ಞಾಪಿಸಿತು. ಆತನ ಆತ್ಮವು ಇವುಗಳನ್ನು ಒಟ್ಟುಗೂಡಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸರ್ವೇಶ್ವರ ಸ್ವಾಮಿಯ ಗ್ರಂಥದಲ್ಲಿ ಬರೆದಿರುವುದನ್ನು ಹುಡುಕಿ ಓದಿರಿ. ಆ ಸೃಷ್ಟಿಗಳಲ್ಲಿ ಯಾವುದೂ ಇಲ್ಲದಿರದು. ಎಲ್ಲವು ಜೊತೆಜೊತೆಯಾಗಿ ಇರುವುವು. ಸ್ವಾಮಿಯ ಬಾಯಿಂದ ಅಪ್ಪಣೆ ಆಯಿತು, ಅವರ ಆತ್ಮವು ಅವುಗಳನ್ನು ಒಟ್ಟಿಗೆ ಬರಮಾಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯೆಹೋವನ ಶಾಸ್ತ್ರದಲ್ಲಿ ಹುಡುಕಿ ಓದಿರಿ, ಇವುಗಳಲ್ಲಿ ಯಾವದೂ ಇಲ್ಲದಿರದು, ಎಲ್ಲವೂ ಜೊತೆಜೊತೆಯಾಗಿರುವವು; ಆತನ ಬಾಯಿಂದ ಅಪ್ಪಣೆಯಾಯಿತಲ್ಲವೆ, ಆತನ ಆತ್ಮವು ಇವುಗಳನ್ನು ಒಟ್ಟಿಗೆ ಬರಮಾಡಿತಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯೆಹೋವನ ಸುರುಳಿಯನ್ನು ನೋಡಿರಿ. ಅಲ್ಲಿ ಬರೆದಿರುವದನ್ನು ಓದಿರಿ. ಅದರಲ್ಲಿ ಯಾವದೂ ಕಳೆದುಹೋಗಿಲ್ಲ. ಆ ಪ್ರಾಣಿಗಳು ಒಟ್ಟಾಗಿ ವಾಸಿಸುವವೆಂದು ಆ ಸುರುಳಿಯಲ್ಲಿ ಬರೆದದೆ. ಅವುಗಳನ್ನು ಒಟ್ಟಾಗಿ ಸೇರಿಸುತ್ತೇನೆಂದು ದೇವರು ಹೇಳಿದ್ದಾನೆ. ಆದ್ದರಿಂದ ಯೆಹೋವನ ಆತ್ಮವು ಅವುಗಳನ್ನು ಒಟ್ಟಾಗಿ ಸೇರಿಸುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯೆಹೋವ ದೇವರ ಗ್ರಂಥದಲ್ಲಿ ನೀವು ಹುಡುಕಿ ಓದಿರಿ, ಇವುಗಳಲ್ಲಿ ಒಂದಾದರೂ ತಪ್ಪದು. ಜೊತೆಯಿಲ್ಲದೆ ಒಂದೂ ಇರುವುದಿಲ್ಲ. ಏಕೆಂದರೆ ನನ್ನ ಬಾಯಿಯೇ ಅದನ್ನು ಆಜ್ಞಾಪಿಸಿತು. ಅವರ ಆತ್ಮವೇ ಅವುಗಳನ್ನು ಒಟ್ಟುಗೂಡಿಸಿತು. ಅಧ್ಯಾಯವನ್ನು ನೋಡಿ |